ಪಾವಗಡ ಬಸ್ ದುರಂತ: ಮೃತಪಟ್ಟವರಿಗೆ ರಾಜ್ಯ ಸರಕಾರ ಕನಿಷ್ಠ 25 ಲಕ್ಷ ರೂ.ಪರಿಹಾರ ನೀಡಲಿ-ಎಚ್ಡಿಕೆ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್‌ ದುರಂತದಲ್ಲಿ ಅಸುನೀಗಿದವರಿಗೆ ರಾಜ್ಯ ಸರಕಾರ ಕನಿಷ್ಠ 25 ಲಕ್ಷ ರೂ.ಪರಿಹಾರ ನೀಡಬೇಕು. 5 ಲಕ್ಷ ರೂ.ಕೊಟ್ಟು ಕೈತೊಳೆದುಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

Written by - Zee Kannada News Desk | Last Updated : Mar 20, 2022, 12:52 PM IST
  • ಖಾಸಗಿ ಬಸ್‌ ದುರಂತದಲ್ಲಿ ಅಸುನೀಗಿದವರಿಗೆ ರಾಜ್ಯ ಸರಕಾರ ಕನಿಷ್ಠ 25 ಲಕ್ಷ ರೂ.ಪರಿಹಾರ ನೀಡಬೇಕು.
  • 5 ಲಕ್ಷ ರೂ.ಕೊಟ್ಟು ಕೈತೊಳೆದುಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
 ಪಾವಗಡ ಬಸ್ ದುರಂತ: ಮೃತಪಟ್ಟವರಿಗೆ ರಾಜ್ಯ ಸರಕಾರ ಕನಿಷ್ಠ 25 ಲಕ್ಷ ರೂ.ಪರಿಹಾರ ನೀಡಲಿ-ಎಚ್ಡಿಕೆ  title=

ಬೆಂಗಳೂರು: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್‌ ದುರಂತದಲ್ಲಿ ಅಸುನೀಗಿದವರಿಗೆ ರಾಜ್ಯ ಸರಕಾರ ಕನಿಷ್ಠ 25 ಲಕ್ಷ ರೂ.ಪರಿಹಾರ ನೀಡಬೇಕು. 5 ಲಕ್ಷ ರೂ.ಕೊಟ್ಟು ಕೈತೊಳೆದುಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಈ ದುರಂತಕ್ಕೆ ಸಾರಿಗೆ ಇಲಾಖೆಯ ಕರ್ತವ್ಯಲೋಪ ಮತ್ತು ದಿವ್ಯನಿರ್ಲಕ್ಷ್ಯವೇ ಕಾರಣ. ಎಷ್ಟೋ ಕನಸುಗಳನ್ನು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳ ಜೀವಗಳು ಬಲಿಯಾಗಿವೆ.ಮುಖ್ಯಮಂತ್ರಿಗಳು ಈ ದುರ್ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದೊಡ್ಡ ಮೊತ್ತದ ಪರಿಹಾರ ಘೋಷಣೆ ಮಾಡಬೇಕು. ಮೃತ ಕಟುಂಬಗಳ ಜೀವನೋಪಾಯಕ್ಕೆ ನೆರವು ನೀಡಬೇಕು.

ಗಾಯಾಳುಗಳನ್ನು ಬೆಂಗಳೂರು, ತುಮಕೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಿಗೆ ಅಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ವರದಿಗಳು ಬೆಳಗ್ಗೆಯಿಂದಲೂ ಮಾಧ್ಯಮಗಳಲ್ಲಿ ಬರುತ್ತಿವೆ. ಸರಕಾರ ಕೂಡಲೇ ತುರ್ತು ಗಮನ ಹರಿಸಿ, ಓರ್ವ ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಬೇಕು.ಎಲ್ಲರಿಗೂ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಕೊಡಿಸಬೇಕು.

ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಭಾರತದ ಈ ಪ್ರಸ್ತಾವಕ್ಕೆ ನೇಪಾಳ ಬೆಂಬಲ

ಬಸ್ಸಿನೊಳಗೆ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದರು.ಟಾಪ್‌ ತುಂಬಾ ಜನ ಕೂತಿದ್ದರು. ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು.ಜನ ಹೆಚ್ಚಿದ್ದರೂ ಈ ಮಾರ್ಗದಲ್ಲಿ ಬಸ್‌ʼಗಳ ಸಂಚಾರ ಸರಿಯಾಗಿಲ್ಲ, ಏಕೆ? ಅಧಿಕಾರಿಗಳ ಉಪೇಕ್ಷೆ ಖಂಡನೀಯ.

ಪಾವಗಡ ಗಡಿ ತಾಲೂಕು.ಹಿಂದುಳಿದ ಪ್ರದೇಶವೂ ಹೌದು.ಈ ಭಾಗದ ಜನರು ಸೂಕ್ತ ಸಾರಿಗೆ ಸೌಕರ್ಯ ಇಲ್ಲದೆ ಬಹಳ ತೊಂದರೆ ಅನುಭವಿಸುತ್ತಿದ್ದಾರೆ.ತಾಲೂಕಿನ ಶೇ.25ರಷ್ಟು ಗ್ರಾಮಗಳಿಗೆ ಬಸ್‌ ಸಂಪರ್ಕವೇ ಇಲ್ಲ ಎನ್ನುವ ಮಾಹಿತಿ ಇದೆ. ಸರಕಾರ ಕೂಡಲೇ ಈ ಎಲ್ಲ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಬಸ್‌ ಸಂಪರ್ಕ ಕಲ್ಪಿಸಬೇಕು.

ಈ ದುರಂತಕ್ಕೆ ಆರ್‌ಟಿಓ ಅಧಿಕಾರಿಗಳ ನಿರ್ಲಕ್ಷ್ಯದ ಜತೆಗೆ ಪಾವಗಡದಲ್ಲಿ ಬಸ್‌ ಡಿಪೋ ಇದ್ದರೂ ಸೂಕ್ತ ಬಸ್‌ ವ್ಯವಸ್ಥೆ ಮಾಡದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಉಪೇಕ್ಷೆಯೂ ಎದ್ದು ಕಾಣುತ್ತದೆ.ಸರಕಾರ ಸೂಕ್ತ ತನಿಖೆ ನಡೆಸಿ ಕರ್ತವ್ಯ ಲೋಪ ಎಸಗಿರುವ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News