ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಪೇ ಸಿಎಂ ಕ್ಯೂ ಆರ್ ಕೊಡ ಅಭಿಯಾನ ನಡೆಸುತ್ತಿದೆ. ಈ ಅಭಿಯಾನ ಭರದಿಂದಲೇ ಸಾಗುತ್ತಿದೆ. ಅಭಿಯಾನದ ಹಿನ್ನೆಲೆಯಲ್ಲಿ ಪೇ ಸಿಎಂ ಪೋಸ್ಟರ್ ಗಳನ್ನು ಅಂಟಿಸಲಾಗುತ್ತಿದೆ. ಆದರೆ ಇದೀಗ ಪೇ ಸಿಎಂ ಪೋಸ್ಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥ ಬಿ ಆರ್ ನಾಯ್ಡು ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ.
ಪೇ ಸಿಎಂ ಪೋಸ್ಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಹೈಗ್ರೌಂಡ್ಸ್ ಠಾಣೆ ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥ ಬಿ ಆರ್ ನಾಯ್ಡು, ಗಗನ್, ಯೂತ್ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಕೋರ್ಡಿನೇಟರ್ ಪವನ್, ಯೂತ್ ಕಾಂಗ್ರೇಸ್ ಸೋಷಿಯಲ್ ಮೀಡಿಯಾ ಹೆಡ್ ಗಳನ್ನೂ ಬಂಧಿಸಲಾಗಿದೆ.
ಇದನ್ನೂ ಓದಿ : "ಪೇ ಸಿಎಂ ಅಭಿಯಾನ: ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತ್ರ"
ಆದರೆ ಈ ಬಂಧನವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಖಂಡಿಸಿದ್ದಾರೆ. ಸಿಎಂ ಯಾಕೆ ಅಷ್ಟು ತಲೆ ಕೆಡಿಸಿಕೊಳ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ. ನಾಳೆ ಎಲ್ಲಾ, ಎಂಎಲ್ಎ, ಎಂ ಎಲ್ ಸಿಗಲು ಸೇರಿ ಪೇಸಿಎಂ ಪೋಸ್ಟರ್ ಅಂಟಿಸುತ್ತೇವೆ. ಸರ್ಕಾರಿ ಕಟ್ಟಡಗಳ ಮೇಲೆ ಪೋಸ್ಟರ್ ಅಂಟಿಸುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೆ, ರಾಜ್ಯ ಸರ್ಕಾರದಿಂದ ಅಧಿಕಾರ ದುರ್ಬಳಕೆ ದ್ವೇಷದ ರಾಜಕಾರಣ ನಡೆಯುತ್ತಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.
ಪ್ರಜಾಪ್ರಭುತ್ವದ ಅಡಿ ನಾವು ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ವಿರುದ್ದ ಮಾಧ್ಯಮದ ಸೋರ್ಸ್ ರೇಟ್ ಕಾರ್ಡ್ ಬಳಸಿ ಕ್ಯಾಂಪೇನ್ ಮಾಡಿದ್ದೇವೆ. ೧.೯ ಲಕ್ಷ ಜನ ಇದನ್ನು ಡೌನ್ ಲೋಡ್ ಮಾಡಿಕೊಂಡಿದ್ದಾರೆ. ೮ ಸಾವಿರ ದೂರು ದಾಖಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಅಧಿಕಾರದಲ್ಲಿ ಇರುವವರು ಇದನ್ನು ಡೈಜೆಸ್ಟ್ ಮಾಡಿಕೊಳ್ಳಬೇಕು. ಅದು ಬಿಟ್ಟು ರಾತ್ರೋ ರಾತ್ರಿ ಅರೆಸ್ಡ್ ಮಾಡಿರುವುದನ್ನು ಖಂಡಿಸುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ : ನೆಚ್ಚಿನ ಶಿಕ್ಷಕನನ್ನು ಮರಳಿ ಪಡೆದ ಸರಕಾರಿ ಫ್ರೌಡ ಶಾಲೆ ಮಕ್ಕಳು!
ಜನೋತ್ಸವದ ಅಷ್ಟೊಂದು ಪೋಸ್ಟರ್ ಎಲ್ಲಾ ಕಡೆ ಹಾಕಲಾಗಿದೆ. ರೆಡ್ಡಿ ಮುನಿರತ್ನ ಸುಧಾಕರ ಎಲ್ಲಾ ಪೋಸ್ಟರ್ ಹಾಕಿದ್ದಾರೆ. ಆದರೆ ಆಗ ಬಿಬಿಎಂಪಿ ಯಾಕೆ ಕೇಸ್ ಹಾಕಿಲ್ಲ, ಬಿಬಿಎಂಪಿ ಯವರಿಗೆ ಕಣ್ಣಿಲ್ವಾ ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.