ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಳೆ ನೇಮಕ

Karnataka High Court : ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಳೆ ನೇಮಕಗೊಂಡಿದ್ದಾರೆ. 

Written by - Prashobh Devanahalli | Edited by - Chetana Devarmani | Last Updated : Oct 11, 2022, 01:14 PM IST
  • ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ
  • ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ.ಬಿ.ವರಾಳೆ ನೇಮಕ
  • ಕೇಂದ್ರ ಕಾನೂನು ಸಚಿವ ಕಿರಣ್‌ ರಿಜುಜು ಮಾಹಿತಿ
ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಳೆ ನೇಮಕ  title=
ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪಿ.ಬಿ.ವರಾಳೆ ಅವರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ : ಮುಸ್ಲಿಂ - ಕ್ರೈಸ್ತರಿಗೆ ನೀಡಿರುವ ಮೀಸಲಾತಿ ವಾಪಸ್ ಪಡೆಯಲು ಸಿಎಂಗೆ ಅರವಿಂದ್ ಬೆಲ್ಲದ್ ಪತ್ರ

ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜುಜು ಅವರು, ಜಮ್ಮು ಮತ್ತು ಕಾಶ್ಮೀರದ ಮುಖ್ಯ ನ್ಯಾಯಾಮೂರ್ತಿಯಾಗಿದ್ದ ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಅದೇ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 

 

ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ (ಪ್ರಸನ್ನ ಬಿ.ವರಾಳೆ) ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನ್ಯಾಯಮೂರ್ತಿ ಎ.ಎಂ.ಮಾರ್ಗೇ ಅವರಿಗೆ ಅದೇ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ : ವಾಮಮಾರ್ಗದಲ್ಲಿ ಇಡೀ ದೇಶದ ಮೇಲೆ ಹಿಂದಿ ಹೇರಿಕೆ; ಕೇಂದ್ರದ ಮೇಲೆ ಎಚ್ಡಿಕೆ ಕಿಡಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News