PDO Recruitment; 150 ಹುದ್ದೆ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ , ವಿವರ ಇಲ್ಲಿದೆ
PDO : ಕರ್ನಾಟಕ ಲೋಕಸೇವಾ ಆಯೋಗ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO)150 ಗ್ರೂಪ್ `ಸಿ` ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 150 ಗ್ರೂಪ್ 'ಸಿ' ಹುದ್ದೆಗಳಿಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಿದೆ. 37,900-70,850 ರೂ. ವೇತನ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು 15/4/2024 ರಿಂದ 15/5/2024ರ ತನಕ ಸಲ್ಲಿಸಬೇಕಿದೆ.
ಈ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಘೋಷಣೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಲು ಮೊದಲು ಎಲ್ಲಾ ವಿವರಗಳನ್ನು ಓದಿ, ಅರ್ಥೈಸಿಕೊಂಡು ಅನ್ವಯವಾಗುವ ವಿವರಗಳನ್ನು ಮಾತ್ರ ಭರ್ತಿ ಮಾಡಬೇಕು ಎಂದು ಮನವಿ ಮಾಡಲಾಗಿದೆ.
ವಿದ್ಯಾರ್ಹತೆ ವಿವರ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಭಾರತದ ಕಾನೂನಿನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಇದನ್ನು ಓದಿ : ಬಹುನಿರೀಕ್ಷಿತ ಬುಲೆಟ್ ರೈಲು ಸೇವೆ ಆರಂಭ ಕುರಿತು ಮಹತ್ವದ ಮಾಹಿತಿ ನೀಡಿದ ಅಶ್ವಿನಿ ವೈಷ್ಣವ್
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು.
ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯೋಮತಿ ಮೀರಬಾರದು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 35 ವರ್ಷಗಳು.
ಪ್ರವರ್ಗ 2ಎ/ 2ಬಿ/ 3ಎ/ 3ಬಿ 38 ವರ್ಷಗಳು, ಪ.ಜಾ/ ಪ.ಪಂ/ ಪ್ರವರ್ಗ-1 40 ವರ್ಷಗಳು. ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕ ಪಾವತಿ ಮಾಡಬೇಕಿದೆ. ಸಾಮಾನ್ಯ ಅರ್ಹತೆ 600 ರೂ., ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕರಿಗೆ 50 ರೂ. ಶುಲ್ಕವಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅಭ್ಯರ್ಥಿಗಳು ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಸಂದರ್ಭದಲ್ಲಿಯೂ ವಾಪಸ್ ನೀಡಲಾಗುವುದಿಲ್ಲ ಅಥವ ಆಯೋಗ ನಡೆಸುವ ಇತರ ನೇಮಕಾತಿ ಪರೀಕ್ಷೆಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅರ್ಜಿ ಶುಲ್ಕ ಪಾವತಿ ಮಾಡದ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ತಿಳಿಸಿದೆ.
ಇದನ್ನು ಓದಿ : ಬೈಯಪ್ಪನಹಳ್ಳಿ 'ಮೆಟ್ರೋ' ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆಯಿಂದಾಗಿ ಪ್ರಯಾಣಿಕರಿಗೆ ತೊಂದರೆ
ವಿಶೇಷ ಸೂಚನೆ: ಈ ಹುದ್ದೆಗಳು ಗ್ರೂಪ್ 'ಸಿ' ಹುದ್ದೆಗಳಾಗಿರುವುದರಿಂದ ಆನ್‌ಲೈನ್ ಅರ್ಜಿಯೊಂದಿಗೆ ಸಲ್ಲಿಸುವ ಲಗತ್ತುಗಳ ಆಧಾರದ ಮೇಲೆ ಮಾತ್ರವೇ ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ. ಅವಶ್ಯಕ ಸಂದರ್ಭಗಳಲ್ಲಿ ಆಯೋಗವು ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸಲು ತೀರ್ಮಾನಿಸಿದ್ದಲ್ಲಿ ಈಗಾಗಲೇ ಆನ್‌ಲೈನ್ ಅರ್ಜಿಯೊಂದಿಗೆ ಅಪ್‌ಲೋಡ್ ಮಾಡಿರುವ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸತಕ್ಕದ್ದು.
ಏನೇ ಸಂದರ್ಭವಿದ್ದರೂ ವಯೋಮಿತಿ, ವಿದ್ಯಾರ್ಹತೆ ಮತ್ತು ಮೀಸಲಾತಿಗಳಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಪ್‌ಲೋಡ್ ಮಾಡಲಾದ ಪ್ರಮಾಣ ಪತ್ರಗಳನ್ನೇ ಅಂತಿಮವೆಂದು ತೀರ್ಮಾನಿಸಲಾಗುತ್ತದೆ.
ಆದ್ದರಿಂದ ಅಭ್ಯರ್ಥಿಗಳು ಜಾಗರೂಕತೆಯಿಂದ ತಮಗೆ ಅನ್ವಯಿಸುವ ಎಲ್ಲಾ ದಾಖಲೆಗಳನ್ನು ಸ್ಪಷ್ಟವಾಗಿ ಗೋಚರಿಸುವ ರೀತಿಯಲ್ಲಿ ಅಪ್‌ಲೋಡ್ ಮಾಡತಕ್ಕದು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ವಿಭಾಗದಲ್ಲಿ NOTIFICATION FOR POST OF PANCHAYAT DEVELOPMENT OFFICER (RPC) IN RDPR DEPT ಎಂಬ ಅಧಿಸೂಚನೆ ವೀಕ್ಷಿಸಬಹುದು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.