ಅಮಿತ್ ಶಾ ಗೆ ಪತ್ರ ಬರೆದ pejawar swamiji
ಇತ್ತೀಚೆಗೆ ಆಂಧ್ರ ಪ್ರದೇಶದಲ್ಲಿಬಿಜೆಪಿ ಮತ್ತು ಟಿಡಿಪಿ ಕಾರ್ಯಕರ್ತರ ನಡುವೆ ಘರ್ಷಣೆ ಆಗಿತ್ತು. ಘರ್ಷಣೆ ವೇಳೆ ದೇವಾಲಯ ಕಟ್ಟಡದ ಮೇಲೆ ದಾಳಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಿಂದು ದೇವಾಲಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪತ್ರ ಬರೆದಿದ್ದಾರೆ.
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಹೊತ್ತಿನಲ್ಲೇ ಉಡುಪಿಯ ಪೇಜಾವರ ಮಠದ (Pejawara Matt) ಸ್ವಾಮೀಜಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪತ್ರ ಬರೆದು ಹಿಂದು ದೇವಾಲಯಗಳನ್ನು ರಕ್ಷಿಸುವಂತೆ ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಆಂಧ್ರ ಪ್ರದೇಶದಲ್ಲಿ (Andra Pradesh) ಬಿಜೆಪಿ (BJP) ಮತ್ತು ಟಿಡಿಪಿ (TDP) ಕಾರ್ಯಕರ್ತರ ನಡುವೆ ಘರ್ಷಣೆ ಆಗಿತ್ತು. ಘರ್ಷಣೆ ವೇಳೆ ದೇವಾಲಯ ಕಟ್ಟಡದ ಮೇಲೆ ದಾಳಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಿಂದು ದೇವಾಲಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪತ್ರ ಬರೆದಿದ್ದಾರೆ.
ಇದನ್ನೂ ಓದಿ - ಲಸಿಕೆ ಪಡೆದ ಬಳಿಕ Manipal Hospital ಚೇರಮನ್ ಡಾ. ಸುದರ್ಶನ್ ಬಲ್ಲಾಳ್ ಪ್ರತಿಕ್ರಿಯೆ ಏನು?
ಇತ್ತಿಚೆಗೆ ಆಂಧ್ರ ಪ್ರದೇಶದಲ್ಲಿ ಹಿಂದು ದೇವಾಲಯಗಳ ಮೇಲೆ ದಾಳಿಯಾಗುತ್ತಿದೆ. ಇಂತಹ ದಾಳಿಗಳನ್ನು ತಡೆಯಲು ಆಂಧ್ರ ಪ್ರದೇಶದ ಸರ್ಕಾರ (Andhra Government) ವಿಫಲವಾಗಿದೆ. ಆಂಧ್ರ ಪ್ರದೇಶ ಸರ್ಕಾರ ಉದ್ದೇಶಪೂರ್ವಕವಾಗಿಯೇ ಇಂತಹ ದಾಳಿಗಳನ್ನು ತಡೆಯುತ್ತಿಲ್ಲ. ಆದುದರಿಂದ ಕೂಡಲೇ ಕೇಂದ್ರ ಸರ್ಕಾರ (Central Government) ಮಧ್ಯ ಪ್ರವೇಶಿಸಬೇಕು ಎಂದು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಮ್ಮ ಪತ್ರದಲ್ಲಿ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ - BPL ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!
ಇತ್ತೀಚೆಗೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ರಾಮಾ ತೀರ್ಥ ದೇವಸ್ಥಾನದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದರು. ರಾಮಾ ತೀರ್ಥ ದೇವಸ್ಥಾನಕ್ಕೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಪತ್ರ ಬರೆದು ಹಿಂದು ದೇವಾಲಯಗಳನ್ನು ರಕ್ಷಿಸುವಂತೆ ಆಗ್ರಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.