ಚಾಮರಾಜನಗರ : ವರ್ಷ ಬದಲಾಗುತ್ತಲೇ ಇವೆ, ಅಭಿವೃದ್ಧಿಯ ಹೆಸರುಗಳು ಜನಪ್ರತಿನಿಧಿಗಳ ಬಾಯಿಂದ ಕೇಳಿ ಬರುತ್ತಿವೆ. ಸ್ಮಾರ್ಟ್‌ ಸಿಟಿಗಳಾಗುತ್ತಿವೆ. ಇಂತಹ ಪರಿಸ್ಥಿತಿ ನಡುವೆಯೂ ಅಮಾನವೀಯ ಘಟನೆಯೊಂದು ನಡೆದಿದೆ. ಅನಾರೋಗ್ಯಕ್ಕೀಡಾದ ವ್ಯಕ್ತಿಯನ್ನು ವಾಹನ ಸೌಕರ್ಯ ಇಲ್ಲದಿದ್ದರಿಂದ 10 ಕಿಮೀ. ಡೋಲಿ ಮೂಲಕ ಆಸ್ಪತ್ರೆಗೆ ರವಾನಿಸಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ದೊಡ್ಡಾನೆ ಗ್ರಾಮದಲ್ಲಿ ಇಂದು ನಡೆದಿದೆ. 


COMMERCIAL BREAK
SCROLL TO CONTINUE READING

ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ದೊಡ್ಡಾಣೆ ಗ್ರಾಮದ ಮಹದೇವ್( 62) ಎಂಬವರು ಇಂದು ಮಧ್ಯಾಹ್ನ ತೀವ್ರ  ಅಸ್ವಸ್ಥರಾದ ಕಾರಣ ಡೋಲಿ ಮೂಲಕ ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು  ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷಗಳೇ ಕಳೆದರೂ ಮಲೆ ಮಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ತಕ್ಕೂ ಹೆಚ್ಚು ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲದೆ ಜನರು ಪರಿತಪಿಸುತ್ತಿದ್ದಾರೆ.


ಇದನ್ನೂ ಓದಿ: "ಬೊಮ್ಮಾಯಿ ಅವರು ಸಾಲ ಮಾಡಿ ಹೋಳಿಗೆ ತಿನ್ನಲು ಶುರು ಮಾಡಿದ್ದಾರೆ"


ಸಾರಿಗೆ ವ್ಯವಸ್ಥೆ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪ್ರಾಧಿಕಾರದವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಕಾಡಂಚಿನ  ಗ್ರಾಮಗಳ ರಸ್ತೆ ತಲೆಗೆಟ್ಟಿರುವುದರಿಂದ 108 ತುರ್ತು ವಾಹನ ತೆರಳಲು ಸಾಧ್ಯವಾಗುತ್ತಿಲ್ಲ  ಇದರಿಂದ ಇಲ್ಲಿಯ ರೋಗಿಗಳು ನರಕ ಅನುಭವಿಸುವಂತಾಗಿದೆ. ಗರ್ಭಿಣಿಯರನ್ನು ಆಸ್ಪತ್ರೆಗೆ ಡೋಲಿಯಲ್ಲಿ ಕರೆ ತರುವ ವೇಳೆ ಮಾರ್ಗ ಮಧ್ಯದಲ್ಲಿಯೇ ಹೆರಿಗೆಯೂ ಆಗಿದೆ. ಕೆಲವರು ಮಾರ್ಗ ಮಧ್ಯದಲ್ಲಿಯೇ ಪ್ರಾಣ  ಬಿಟ್ಟಿದ್ದಾರೆ ಇಷ್ಟಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. 


ಜನವನ ಸಾರಿಗೆ ಸ್ತಬ್ಧ : ಈ ಹಿಂದೆ  ಮೆಂದಾರೆ, ತುಳಸಿಕೆರೆ, ಇಂಡಿಗನತ್ತ, ಪಡಸಲನತ್ತ, ಮೆದಗನಾಣೆ, ಪಾಲಾರ್, ದೊಡ್ಡಣೆ, ತೊಕೆರೆ, ಕೊಕ್ಕಬರೆ ಗ್ರಾಮಗಳಿಗೆ ಜನವನ ಸಾರಿಗೆ ಎಂಬ ಯೋಜನೆ ಆರಂಭಿಸಿ ಮೂರು ಜೀಪ್ ಗಳನ್ನು ಕೊಡಲಾಗಿತ್ತು. ಮಕ್ಕಳನ್ನು ಶಾಲೆಗೆ ಕರೆದೊಯ್ಯಲು, ಆಸ್ಪತ್ರೆಗೆ ತೆರಳಲು,  ನಿತ್ಯದ ಸಂಚಾರಕ್ಕಾಗಿ ಒಂದೆರೆಡು ತಿಂಗಳು ವಾಹನ ಬಳಕೆಯಾಗಿತ್ತು. 


ಇದನ್ನೂ ಓದಿ: Railway Department: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮೊಬೈಲ್ ಆಪ್ ಸೇವೆ ಈಗ ಕನ್ನಡದಲ್ಲೂ ಲಭ್ಯ


ಆದರೆ,  ಕಳೆದ ಎರಡು ತಿಂಗಳಿನಿಂದ ರಸ್ತೆ ಹದಗೆಟ್ಟಿರುವುದರಿಂದ ಹಾಗೂ ಚಾಲಕರಿಗೆ ಸಂಬಳ ನೀಡದೆ ಇರುವುದರಿಂದ ಜನವನ ಇದ್ದೂ ಇಲ್ಲದಂತಾಗಿದೆ. ಇಂಡಿಗನತ್ತ ಗ್ರಾಮದ ರಸ್ತೆಯನ್ನು ದುರಸ್ತಿ ಪಡಿಸಲಾಗುತ್ತಿದೆ, ಅರಣ್ಯ ಇಲಾಖೆಯವರು ಚಾಲಕನನ್ನು ನೇಮಕ ಮಾಡಿದರೇ ಈ ಮಾರ್ಗವಾಗಿ ಜನಮನ ವಾಹನ ಪ್ರಾರಂಭ ಮಾಡುತ್ತೇವೆ  ಎಂದು ಇಡಿಸಿ ಅಧ್ಯಕ್ಷ ತೊಳಸಿಕೆರೆ ಕೆಂಪ್ಪಣ್ಣ  ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿವೆ, 5 ಜಿ ಯುಗಕ್ಕೆ ಭಾರತ ಕಾಲಿಟ್ಟು ಎಕ್ಸ್‌ಪ್ರೆಸ್‌ ವೇಗಳು ನಿರ್ಮಾಣವಾಗುತ್ತಿವೆ. ಆದರೆ, ಮತ್ತೊಂದೆಡೆ ಕನಿಷ್ಠ ಸೌಲಭ್ಯವೂ ಇಲ್ಲದೇ ಡೋಲಿ ಆಶ್ರಯಿಸಬೇಕಾಗಿರುವುದು ವಿಪರ್ಯಾಸವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.