ಚಾಮರಾಜನಗರ: 8 ಕಿಮೀ ಡೋಲಿ ಹೊತ್ತು ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಜನರು
ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ಕಾಣಿಸಿಕೊಂಡಿದ್ದರಿಂದ ಡೋಲಿ ಕಟ್ಟಿ 8 ಕಿಮೀ ಹೊತ್ತು ಆಸ್ಪತ್ರೆಗೆ ಸಾಗಿಸಿರುವ ಘಟನೆ ಹನೂರು ತಾಲೂಕಿನ ದೊಡ್ಡಾಣೆ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ: ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ಕಾಣಿಸಿಕೊಂಡಿದ್ದರಿಂದ ಡೋಲಿ ಕಟ್ಟಿ 8 ಕಿಮೀ ಹೊತ್ತು ಆಸ್ಪತ್ರೆಗೆ ಸಾಗಿಸಿರುವ ಘಟನೆ ಹನೂರು ತಾಲೂಕಿನ ದೊಡ್ಡಾಣೆ ಗ್ರಾಮದಲ್ಲಿ ನಡೆದಿದೆ.
ದೊಡ್ಡಾಣೆ ಗ್ರಾಮದ ಶಾಂತಲಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಯಾವುದೇ ಸಾರಿಗೆ ಸಂಪರ್ಕ ಲಭಿಸದೇ 8 ಕಿಮೀ ದೂರದ ಮಾರ್ಟಳ್ಳಿ ಆಸ್ಪತ್ರೆಗೆ ಡೋಲಿಯಲ್ಲಿ ಸಾಗಿಸಿದ್ದು ಸದ್ಯ ಶಾಂತಲಾ ಅವರ ಚೊಚ್ಚಲ ಹೆರಿಗೆಯಲ್ಲಿ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದು ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.Karnataka HC : ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಸಿಜೆ ಆಗಿ ನ್ಯಾ. ಆರಾಧೆ ನೇಮಕ!
ಕಾಡಿನೊಳಗೆ ಇರುವ ಗ್ರಾಮಗಳ ಸಂಪರ್ಕಕ್ಕಾಗಿ ಜನವನ ಸಾರಿಗೆ ಎಂದು ಜೀಪ್ ಗಳನ್ನು ಒದಗಿಸಲಾಗಿದೆ. ಆದರೆ, ಜೀಪ್ ಚಾಲಕ, ಆಂಬುಲೆನ್ಸ್ ಚಾಲಕನಿಗೆ ಮತ್ತು ಅಧಿಕಾರಿಗಳಿಗೆ ಕರೆ ಮಾಡಿದಾಗ ಸ್ವಿಚ್ಡ್ ಆಫ್ ಬಂದಿದ್ದರಿಂದ ಡೋಲಿ ಮೂಲಕ ಹೊತ್ತು ಸಾಗಿಸಿದ್ದಾರೆ.
ಮಲೆ ಮಹದೇಶ್ವರಬೆಟ್ಟ ತಪ್ಪಲಿನ ಅರಣ್ಯ ಗ್ರಾಮಸ್ಥರ ಅನುಕೂಲಕ್ಕಾಗಿ ಜನವನ ಸಾರಿಗೆ ವ್ಯವಸ್ಥೆ ಜಾರಿಗೆ ತಂದಿರುವ ಅರಣ್ಯ ಇಲಾಖೆ ಗರ್ಬಿಣಿಯರು, ಅನಾರೋಗ್ಯ ಪೀಡಿತರು, ಶಾಲಾ ವಿದ್ಯಾರ್ಥಿಗಳು ಹಾಗು ಗ್ರಾಮಸ್ಥರ ತುರ್ತು ಬಳಕೆಗೆ ಜಾರಿಗೆ ತಂದಿರುವ ಜನವನ ಸಾರಿಗೆ ಸೌಲಭ್ಯ ಇದ್ದೂ ಇಲ್ಲದಂತಾಗಿದೆ.ಅಧಿಕಾರಿಗಳ ಈ ದಿವ್ಯ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.