ಬೆಂಗಳೂರು: ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಇನ್ನುಳಿದ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ 2 ಹಾಗೂ 1 ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ. ಉಪಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್(DK Shivakumar), ಮತದಾರರು ಪಕ್ಷಾಂತರಿಗಳನ್ನು ಒಪ್ಪಿದ್ದಾರೆ, ನಾವು ಜನರ ತೀರ್ಪನ್ನು ಸ್ವೀಕರಿಸಿದ್ದೇವೆ ಎಂದು ಹೇಳಿದರು.
“ಈ 15 ಕ್ಷೇತ್ರಗಳ ಮತದಾರರ ಆದೇಶವನ್ನು ನಾವು ಒಪ್ಪಿಕೊಳ್ಳಬೇಕು. ಜನರು ಪಕ್ಷಾಂತರಗಾರರನ್ನು ಒಪ್ಪಿಕೊಂಡಿದ್ದಾರೆ. ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ. ಇದರಿಂದ ನಾವು ನಿರಾಶರಾಗಿದ್ದೇವೆ ಎಂದು ನಾನು ಭಾವಿಸುವುದಿಲ್ಲ” ಎಂದು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಸೋಮವಾರ ಹೇಳಿದ್ದಾರೆ.
Karnataka Congress leader DK Shivakumar on #KarnatakaBypolls results: We have to agree with the mandate of the voters of these 15 constituencies. People have accepted the defectors. We have accepted defeat, I don't think we have to be disheartened. pic.twitter.com/UOLwXFASHt
— ANI (@ANI) December 9, 2019
ಕರ್ನಾಟಕದ 15 ಕ್ಷೇತ್ರಗಳಲ್ಲಿ ಡಿಸೆಂಬರ್ 5 ರಂದು ನಡೆಡಿದ್ದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಜೆಡಿ-ಎಸ್ 12 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.
"ಎಣಿಕೆ ಪ್ರಾರಂಭವಾದ ಎರಡು ಗಂಟೆಗಳ ನಂತರ ಬಿಜೆಪಿ ಶೇ 48.6 ರಷ್ಟು ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಶೇ 29.8 ಮತ್ತು ಜೆಡಿ-ಎಸ್ ಶೇ 17.2 ರಷ್ಟು ಮತಗಳನ್ನು ಗಳಿಸಿದೆ" ಎಂದು ಸಮೀಕ್ಷೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಎಸ್‌ವೈ ಸರ್ಕಾರ ಸೇಫ್:
ಈ ಉಪಚುನಾವಣೆ ಬಿ.ಎಸ್. ಯಡಿಯೂರಪ್ಪ(BS Yediyurappa) ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರಕ್ಕೆ ನಿರ್ಣಾಯಕವೆಂದೇ ಪರಿಗಣಿಸಲಾಗಿತ್ತು. 2018ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸಹ ಸಂಖ್ಯಾಬಲದ ಕೊರತೆಯಿಂದಾಗಿ ಅಧಿಕಾರದಿಂದ ವಂಚಿತವಾಗಿತ್ತು. ಇದೀಗ ಉಪಚುನಾವಣೆ ಫಲಿತಾಂಶದಿಂದಾಗಿ ಬಿಜೆಪಿಗೆ ಬಹುಮತ ದೊರೆತಿದ್ದು, ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ಆಡಳಿತ ನಡೆಸಲಿದೆ.