ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇದು ಪ್ರಕಟವಾಗಿರುವ ಬೆನ್ನಲ್ಲೇ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: 40 ಕೋಟಿ ಆಸ್ತಿ ಮೇಲೆ ಕಣ್ಣು..!: ಅಮ್ಮ & ಮಗಳು ಇಬ್ಬರನ್ನೂ ಪಟಾಯಿಸಿದ್ದನಾ ಜಿಮ್ ಟ್ರೈನರ್..?
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 1,187 ಸ್ಥಾನಗಳ ಪೈಕಿ 500ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂಬುದನ್ನು ಈ ಫಲಿತಾಂಶ ಇನ್ನೊಮ್ಮೆ ಸಾಬೀತು ಮಾಡಿದೆ ಎಂದು ಅವರು ಹೇಳಿದ್ದಾರೆ.
People of Karnataka has shown @BJP4Karnataka that they cannot win with money power.
This result is the lesson taught for anti-people & corrupt BJP.#KarnatakaLocalBodyElections
— Siddaramaiah (@siddaramaiah) December 30, 2021
ಇದನ್ನೂ ಓದಿ: KARNATAKA BANDH-ಕರ್ನಾಟಕ ಬಂದ್ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ: ವಾಟಾಳ್ ನಾಗರಾಜ್
ಚುನಾವಣೆಯಲ್ಲಿ ಹಣ ಖರ್ಚು ಮಾಡಿದರೆ ಗೆಲ್ಲಬಹುದು ಎಂಬ ಬಿಜೆಪಿಯ ಸೊಕ್ಕನ್ನು ರಾಜ್ಯದ ಜನ ಮುರಿದಿದ್ದಾರೆ.ಈ ಫಲಿತಾಂಶ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆ, ಭ್ರಷ್ಟಾಚಾರ ಮತ್ತು ದುರಾಡಳಿತಕ್ಕೆ ಜನತೆ ನೀಡಿರುವ ಸಂದೇಶ.ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ, ಮತ ನೀಡಿದ ಎಲ್ಲಾ ಮತದಾರರಿಗೆ ಮತ್ತು ಅಭ್ಯರ್ಥಿಗಳ ಪರವಾಗಿ ದುಡಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಧನ್ಯವಾದಗಳು ಹಾಗೂ ಜಯಗಳಿಸಿರುವ ನಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಪಕ್ಷ ಬಯಸಿದರೆ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ: ಸಚಿವ ಕೆ.ಎಸ್.ಈಶ್ವರಪ್ಪ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.