ಬಳ್ಳಾರಿ: ಜಿಲ್ಲೆ ವ್ಯಾಪ್ತಿಯಲ್ಲಿ ಮಕ್ಕಳು ಬಾಲ ನಟ ಮತ್ತು ನಟಿಯಾಗಿ ನಟನಾ ಕೆಲಸ ಮಾಡಲು ಇಚ್ಛಿಸಿದಲ್ಲಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ ಕಾಯ್ದೆ 2016 ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟ ಹಾಗೂ ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಹಾಗೂ ಕಾಯ್ದೆಯು 14-18ರ ವಯಸ್ಸಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕಿಶೋರವಸ್ಥೆಯ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.


ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಮೊದಲ ಅಪರಾದಕ್ಕೆ ತಪ್ಪಿತಸ್ಥ ಮಾಲೀಕರಿಗೆ 6 ತಿಂಗಳಿನಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ರೂ.20,000 ರಿಂದ ರೂ.50,000 ರವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.


ಇದನ್ನೂ ಓದಿ: ಕಸೂರಿ ಮೆಂತ್ಯ ಮನೆಯಲ್ಲಿ ತಯಾರಿಸುವ ಮಾರ್ಗ ಇಲ್ಲಿದೆ..!


ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕರ್ನಾಟಕ ನಿಯಮಗಳು ‘2ಸಿ' ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು (1) ಕಲಂ 3ರ ನಿಬಂಧನೆಗಳನ್ವಯ ಕೆಳಗಿನ ನಿಯಮಗಳಿಗೆ ಒಳಪಟ್ಟಂತೆ ಮಗು ಕಲಾವಿದನಾಗಿ ಕೆಲಸ ಮಾಡಲು ಅನುಮತಿಸಬಹುದಾಗಿದೆ ಅವುಗಳು ಈ ಕೆಳಕಂಡಂತಿವೆ:


ಯಾವುದೇ ಮಗುವನ್ನು ಒಂದು ದಿನದಲ್ಲಿ 5 ಗಂಟೆಗಳಿಗಿಂತ ಹೆಚ್ಚಿನ ಅವಧಿಗೆ ನಟನಾ ಕೆಲಸಕ್ಕೆ ನಿಯೋಜಿಸುವಂತಿಲ್ಲ ಮತ್ತು ವಿಶ್ರಾಂತಿ ಇಲ್ಲದೇ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ.ಶ್ರವಣ ಮತ್ತು ದೃಶ್ಯ ಮಾಧ್ಯಮದ ಯಾವುದೇ ನಿರ್ಮಾಪಕರು ನಿರ್ಮಿಸಿದ ಅಥವಾ ಯಾವುದೇ ವಾಣಿಜ್ಯ ಪರ ಕಾರ್ಯಕ್ರಮದಲ್ಲಿ ಮಗು ಭಾಗವಹಿಸುವುದಿದ್ದರೆ, ಆ ಚಟುವಟಿಕೆ ನಡೆಯುವ ಪ್ರದೇಶದ ಜಿಲ್ಲಾ ದಂಡಾಧಿಕಾರಿಗಳ ಪೂರ್ವಾನುಮತಿ ಪಡೆದು ಭಾಗವಹಿಸುವಂತೆ ಮಾಡುವುದು ಮತ್ತು ಚಟುವಟಿಕೆ ಪ್ರಾರಂಭಿಸುವ ಪೂರ್ವದಲ್ಲಿ ನಮೂನೆ ‘ಸಿ’ ಯಲ್ಲಿ ಜಿಲ್ಲಾ ದಂಡಾಧಿಕಾರಿಗೆ ಮುಚ್ಚಳಿಕೆ ಪತ್ರ ಸಲ್ಲಿಸಬೇಕು. ಭಾಗವಹಿಸುವ ಮಕ್ಕಳ ಪಟ್ಟಿ ಪೋಷಕರ ಅಥವಾ ಪಾಲಕರ ಒಪ್ಪಿಗೆ ಪತ್ರ ಸಲ್ಲಿಸಬೇಕು ಎಂದು ಡಿಸಿಯವರು ತಿಳಿಸಿದ್ದಾರೆ.


ಮಗುವಿನ ಸಂರಕ್ಷತೆಗೆ ಸಂಬಂಧಿಸಿದಂತೆ, ನಿರ್ಮಾಕರ ಅಥವಾ ಸಮಾರಂಭದ ಆಯೋಜಕರ ಹೆಸರುಗಳನ್ನು ಒದಗಿಸಬೇಕು. ಮಕ್ಕಳನ್ನು ಬಳಸಿ ಸಂಪೂರ್ಣ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಮಕ್ಕಳ ದುರುಪಯೋಗ ಪ್ರಕರಣ, ನಿರ್ಲಕ್ಷ್ಯ ಅಥವಾ ಶೋಷಣೆ ನಡೆಯದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರಬೇಕೆಂದು ಚಲನಚಿತ್ರಗಳ ಅಥವಾ ದೂರದರ್ಶನದ ಪ್ರದರ್ಶನದ ಹಕ್ಕು ನಿರಾಕರಣೆಗೆ ಒಳಪಟ್ಟಿದೆ ಎಂಬುದನ್ನು ನಿರ್ಮಾಪಕರಿಗೆ ಖಚಿತ ಪಡಿಸುವುದು.


ಕಲಂ ‘ಬಿ’ ಯಲ್ಲಿ ಉಲ್ಲೇಖಿಸಿರುವ ಮುಚ್ಚಳಿಕೆಯು 6 ತಿಂಗಳುಗಳವರೆಗೆ ಮಾನ್ಯವಾಗಿರುತ್ತದೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಸುರಕ್ಷತೆ ಮತ್ತು ಮಕ್ಕಳ ದುರುಪಯೋಗ ತಡೆ ಕುರಿತಾದ ಮಾನ್ಯತೆ ಪಡೆದ ಮಾರ್ಗಸೂಚಿಗಳು ಮತ್ತು ಇಂತಹ ಉದ್ದೇಶಗಳಿಗಾಗಿ ಸೂಕ್ತ ಸರ್ಕಾರವು ನಿಗಧಿತವಾಗಿ ಹೊರಡಿಸಿರುವ ಸುರಕ್ಷತಾ ನೀತಿಗಳನ್ನು ಆಳವಡಿಸಿಕೊಂಡಿರುವ ಬಗ್ಗೆ ಸ್ಪಷ್ಟವಾಗಿ ತಿಳಿಸಬೇಕು.


ಮಗುವಿನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಖಾತ್ರಿಪಡಿಸಿಕೊಳ್ಳಬೇಕು. ಮಗುವಿಗೆ ಸಕಾಲಿಕ ಪೌಷ್ಠಿಕ ಆಹಾರ ಒದಗಿಸಬೇಕು. ದೈನಂದಿನ ಅಗತ್ಯಗಳಿಗೆ ಸಾಕಾಗುವಷ್ಟು ಸಾಮಾಗ್ರಿಗಳು, ಸ್ವಚ್ಚ ಮತ್ತು ಸುರಕ್ಷಿತವಾದ ಆಶ್ರಯ ಒದಗಿಸುವುದು.


ಇದನ್ನೂ ಓದಿ: Bald Head Remedy: ಬೋಳು ತಲೆ ಸಮಸ್ಯೆಯಿಂದ ಶಾಶ್ವತ ಮುಕ್ತಿ ಪಡೆಯಬೇಕೆ? ಈ ಮನೆಎಣ್ಣೆ ಟ್ರೈ ಮಾಡಿ ನೋಡಿ!


ಶಿಕ್ಷಣದ ಹಕ್ಕು ಸಂರಕ್ಷಣೆ, ಲೈಂಗಿಕ ಅಪರಾಧಗಳಿಂದ ರಕ್ಷಣೆ ಒಳಗೊಂಡಂತೆ ಮಕ್ಕಳ ರಕ್ಷಣೆ ಕುರಿತಾಗಿ ಕಾಲ ಕಾಲಕ್ಕೆ ಜಾರಿಯಲ್ಲಿರುವ ಎಲ್ಲಾ ಕಾನೂನುಗಳ ಪಾಲನೆ ಮಾಡಬೇಕು.


ಮಗು ಶಾಲೆಯ ಪಾಠ ಪ್ರವಚನಗಳಿಗೆ ಗೈರಾಗದಂತೆ ಶಿಕ್ಷಣದಲ್ಲಿ ನಿರಂತರವಾಗಿ ಮುಂದುವರೆಯಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದನ್ನು ಖಾತರಿಪಡಿಸಿಕೊಳ್ಳಬೇಕು. ಯಾವುದೇ ಮಗು ನಿರಂತರವಾಗಿ 27 ದಿನಗಳಿಗಿಂತ ಹೆಚ್ಚಿನ ದಿನಗಳು ನಟನಾ ಕೆಲಸದಲ್ಲಿ ತೊಡಗಲು ಅವಕಾಶ ನೀಡಬಾರದು ಎಂದೂ ತಿಳಿಸಿದ್ದಾರೆ.ಮಗುವಿನ ರಕ್ಷಣೆ, ಪೆÇೀಷಣೆ ಮತ್ತು ಹಿತಾಸಕ್ತಿಯನ್ನು ಕಾಪಾಡಲು ನಿರ್ಮಾಣ ಅಥವಾ ಕಾರ್ಯಕ್ರಮದಲ್ಲಿ ತೊಡಗಿರುವ ಪ್ರತಿ 5 ಮಕ್ಕಳಿಗೆ ಒಬ್ಬರಂತೆ ಜವಾಬ್ದಾರಿ ವ್ಯಕ್ತಿಯನ್ನು ನೇಮಿಸಬೇಕು.


ನಿರ್ಮಾಣ ಅಥವಾ ಕಾರ್ಯಕ್ರಮದಿಂದ ಮಗುವಿಗೆ ಬರುವ ಒಟ್ಟು ಆದಾಯದ ಕನಿಷ್ಠ ಶೇ.20 ನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮಗುವಿನ ಹೆಸರಿನಲ್ಲಿ ನಿಶ್ಚಿತ ಠೇವಣಿ ಖಾತೆ ತೆರೆದು ಇಡಬೇಕು. ಅದನ್ನು ಮಗು ಪ್ರಾಯಸ್ಥನಾದಾಗ ಪಡೆಯಲು ಅವಕಾಶ ಕಲ್ಪಿಸಬೇಕು.
ಯಾವುದೇ ಮಗುವಿನ ಒಪ್ಪಿಗೆ ಮತ್ತು ಇಚ್ಚೆಗೆ ವಿರುದ್ಧವಾಗಿ ಯಾವುದೇ ಧ್ವನಿ, ದೃಶ್ಯ ಮತ್ತು ಕ್ರೀಡಾ ಚಟುವಟಿಕೆಗಳ ಅನೌಪಾಚಾರಿಕ ಮನರಂಜನಾ ಚಟುವಟಿಕೆಗಳನ್ನೊಳಗೊಂಡಂತೆ ಭಾಗವಹಿಸುವಂತಿಲ್ಲಾ.


ಮೇಲ್ಕಂಡಂತೆ ಕೇಂದ್ರ ಸರ್ಕಾರದ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕರ್ನಾಟಕ ನಿಯಮಗಳು 2ಸಿ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು (1) ಕಲಂ 3ರ ನಿಬಂಧನೆಗಳ ವಿಷಯದಲ್ಲಿ ಮೇಲ್ಕಂಡ ಪರಿಸ್ಥಿತಿಗಳಿಗೆ / ನಿಯಮಗಳಿಗೆ ಒಳಪಟ್ಟಂತೆ ಮಗುವನ್ನು ಕಲಾವಿದನಾಗಿ ನಟನಾ ಕೆಲಸ ಮಾಡಲು ಅನುಮತಿಸಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.