ಏ. 20ರ ಬಳಿಕ ಷರತ್ತುಗಳೊಂದಿಗೆ ನಿರ್ಮಾಣ ಕಾಮಗಾರಿಗಳ ಆರಂಭಕ್ಕೆ ಅನುಮತಿ - ಸಚಿವ ಜಗದೀಶ ಶೆಟ್ಟರ್

ನಿರ್ಮಾಣ ಕಾಮಗಾರಿಗಳನ್ನು ಅನುಮತಿ ಪಡೆದು ಕೈಗೊಳ್ಳಬಹುದು. ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿಯೇ ವಸತಿ ಕಲ್ಪಿಸಬೇಕು. ಸಾಮಾಜಿಕ ಅಂತರ, ಶುಚಿತ್ವ ಕಾಪಾಡಬೇಕು. ಪ್ಲಂಬರ್‍ಗಳು, ಮೋಟಾರ್ ಮೆಕ್ಯಾನಿಕ್‍ಗಳು ಹಾಗೂ ಪೂರಕ ಚಟುವಟಿಕೆಗಳ ಕಾರ್ಮಿಕರಿಗೂ ಈ ವಿನಾಯಿತಿ ಅನ್ವಯಿಸುತ್ತದೆ ಎಂದು ಸಚಿವ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

Last Updated : Apr 18, 2020, 08:50 AM IST
ಏ. 20ರ ಬಳಿಕ ಷರತ್ತುಗಳೊಂದಿಗೆ ನಿರ್ಮಾಣ ಕಾಮಗಾರಿಗಳ ಆರಂಭಕ್ಕೆ ಅನುಮತಿ - ಸಚಿವ ಜಗದೀಶ ಶೆಟ್ಟರ್ title=

ಧಾರವಾಡ : ಎರಡನೇ ಹಂತದ ಲಾಕ್‍ಡೌನ್ (Lockdown) ಅವಧಿ ಮೇ.3ರವರೆಗೂ ವಿಸ್ತರಣೆ ಆಗಿರುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಬಾರದು. ಕಾರ್ಮಿಕರಿಗೂ ಕನಿಷ್ಠ ಜೀವನ ನಿರ್ವಹಣೆ ಮಾಡಲು ಉದ್ಯೋಗ ಸಿಗಬೇಕು ಎನ್ನುವ ಆಶಯದೊಂದಿಗೆ ಕಂಟೈನ್‍ಮೆಂಟ್ ಪ್ರದೇಶ ಹೊರತುಪಡಿಸಿ ಜಿಲ್ಲೆಯಲ್ಲಿ ಕಟ್ಟಡ, ರಸ್ತೆ, ಸೇತುವೆ ಮೊದಲಾದ ನಿರ್ಮಾಣ ಕಾಮಗಾರಿಗಳನ್ನು ಪ್ರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು. ಗುತ್ತಿಗೆದಾರರು ಕಾರ್ಮಿಕರಿಗೆ ವಸತಿ, ಕ್ಯಾಂಪ್‍ಗಳನ್ನು ನಿರ್ಮಿಸಿ ಅಲ್ಲಿಯೇ ಊಟ, ಉಪಾಹಾರ ಸೌಕರ್ಯಗಳನ್ನು ಒದಗಿಸಬೇಕು.  ಪ್ರತಿದಿನ ಕಾರ್ಮಿಕರು ತಮ್ಮ ಸ್ಥಳಗಳಿಗೆ ಸಂಚರಿಸಲು ಅವಕಾಶ ಇರುವುದಿಲ್ಲ ಎಂದು ಬೃಹತ್ ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ (Jagadish Shetter) ಹೇಳಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಲೋಕೋಪಯೋಗಿ, ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು, ನಿರ್ಮಿತಿ ಕೇಂದ್ರ,  ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಸಿವಿಲ್ ಕಾಮಗಾರಿ ಇಲಾಖೆಗಳ ಇಂಜಿನೀಯರ್‍ಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು ನಿರ್ಮಾಣ ಕಾಮಗಾರಿಗಳನ್ನು ಅನುಮತಿ ಪಡೆದು ಕೈಗೊಳ್ಳಬಹುದು. ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿಯೇ ವಸತಿ ಕಲ್ಪಿಸಬೇಕು. ಸಾಮಾಜಿಕ ಅಂತರ, ಶುಚಿತ್ವ ಕಾಪಾಡಬೇಕು. ಪ್ಲಂಬರ್‍ಗಳು, ಮೋಟಾರ್ ಮೆಕ್ಯಾನಿಕ್‍ಗಳು ಹಾಗೂ ಪೂರಕ ಚಟುವಟಿಕೆಗಳ ಕಾರ್ಮಿಕರಿಗೂ ಈ ವಿನಾಯಿತಿ ಅನ್ವಯಿಸುತ್ತದೆ ಎಂದರು. ತಡಸಿನಕೊಪ್ಪದ ಬಳಿ ಐಐಐಟಿ ಕಾಮಗಾರಿ ಸ್ಥಗಿತವಾಗಿದೆ. ಆದರೆ ಕಾರ್ಮಿಕರು ಅಲ್ಲಿಯೇ ಇದ್ದಾರೆ. ಅಂತಹ ಕಡೆಗಳಲ್ಲಿ ಕೆಲಸಗಳನ್ನು ಪುನರಾರಂಭಿಸಬಹುದು. ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಮುಂದುವರೆಯಲಿ. ಲಾಕ್‍ಡೌನ್ ನಿಯಮಗಳು ಉಲ್ಲಂಘನೆಯಾಗದಂತೆ ನರೇಗಾ ಯೋಜನೆಯಡಿ ವೈಯಕ್ತಿಕ ಚಟುವಟಿಕೆಗಳು ನಡೆಯುತ್ತಿವೆ.  ಅದೇ ರೀತಿ ಗ್ರಾಮೀಣ ಕುಡಿಯುವ ನೀರು ಪೂರೈಕೆಯ ಕಾರ್ಯಗಳನ್ನು ಕೈಗೊಳ್ಳಬಹುದು ಎಂದರು. 

ವೈದ್ಯರ ಸಲಹಾ ಚೀಟಿ ಇದ್ದಲ್ಲಿ ಮಾತ್ರ ಔಷಧಿ ವಿತರಣೆಗೆ ಆದೇಶ

ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಮಲಪ್ರಭಾ ಬಲದಂಡೆ ಕಾಲುವೆಯು ಬೆಳಗಾವಿ, ಧಾರವಾಡ, ಗದಗ ಹಾಗೂ ಭಾಗಶ: ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ. ಮುಂಗಾರು ಮಳೆ ಆರಂಭಕ್ಕೂ ಮುನ್ನ ಇಲ್ಲಿನ ಕಾಮಗಾರಿಗಳು ನಡೆಯಬೇಕು.  ಗುತ್ತಿಗೆದಾರರು ಕಾರ್ಮಿಕರಿಗೆ ಕ್ಯಾಂಪ್‍ಗಳಲ್ಲಿ ಎಲ್ಲ ಸೌಲಭ್ಯಗಳನ್ನು ಒದಗಿಸುವ ಷರತ್ತಿನೊಂದಿಗೆ ಕಾಮಗಾರಿ ಶೀಘ್ರ ಆರಂಭಿಸಬೇಕು ಎಂದರು. ತಮ್ಮ ಕ್ಷೇತ್ರದ ಪಡೇಸೂರು, ಶಾನವಾಡ ಸೇರಿದಂತೆ ವಿವಿಧ ಗ್ರಾಮಗಳಿಗೆ ಹೆಗ್ಗಡದೇವನಕೋಟೆ ತಾಲೂಕಿಗೆ ಗುಳೇ ಹೋಗಿದ್ದ ಹಲವು ಜನ ಮರಳಿ ಬಂದಿದ್ದಾರೆ. ಅಂತಹ ಜನರ ಬಗ್ಗೆ ಮಾಹಿತಿ ಸಂಗ್ರಹಿಸಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ಸೂಚಿಸಿದರು. 

ಕೊರೋನಾ ಸೋಂಕಿತರ ಪರೀಕ್ಷೆ ಪ್ರಮಾಣ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಶಾಸಕ ಅರವಿಂದ ಬೆಲ್ಲದ ಮಾತನಾಡಿ ಕಾರ್ಮಿಕ ಇಲಾಖೆಯಿಂದ  ವಲಸೆ ಕಾರ್ಮಿಕರು ಹಾಗೂ ಇಟ್ಟಿಗೆ ಭಟ್ಟಿ ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಬೀಡು ಬಿಟ್ಟಿರುವ ಕಾರ್ಮಿಕರಿಗೆ ಆಹಾರಕಿಟ್ ವಿತರಣೆ ಮುಂದುವರೆಯಬೇಕು ಎಂದು ನಿರ್ದೇಶಿಸಿದರು.
 

Trending News