ಸಾಮಾಜಿಕ ಬಹಿಷ್ಕಾರಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ : ಕುಟುಂಬಸ್ಥರ ಪ್ರತಿಭಟನೆ
ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ : ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಯಡವನಳ್ಳಿ ಗ್ರಾಮದ ವೈ.ಎಸ್.ಶಿವರಾಜು(45) ನೇಣು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತನ ಸಹೋದರ ಮಹೇಶ್ ಎಂಬವರು ಬೇಗೂರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದು ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: "ನಾನು ಬಹಳ ದಿನಗಳಿಂದ ಪೂರ್ಣಿಮಾ,ಶ್ರೀನಿವಾಸ್ ಅವರಿಗೆ ಗಾಳ ಹಾಕುತ್ತಿದ್ದೆ"-ಡಿ.ಕೆ.ಶಿವಕುಮಾರ್
ಘಟನೆ ಸಂಬಂಧ ಯಡವನಹಳ್ಳಿ ಗ್ರಾಮದ ಯಜಮಾನರಾದ ಕೃಷ್ಣ, ಚಂದು, ರೇವನಾಯಕ, ಸಂತೋಷ್, ಸಂದೇಶ್, ವೆಂಕಟರಮಣನಾಯಕ, ನಿಂಗನಾಯಕ, ಚಿಕ್ಕಬೆಳ್ಳನಾಯಕ, ಆಲತ್ತೂರು ಮಹದೇವನಾಯಕ, ಡಿ.ಮಹದೇವಮನಾಯಕ, ದೇವನಾಯಕ, ಚಿನ್ನಸ್ವಾಮಿ ನಾಯಕ, ರಂಗಸ್ವಾಮಿನಾಯಕ ಎಂಬ 13 ಮಂದಿ ವಿರುದ್ಧ ಬೇಗೂರು ಪೊಲೀಸರು FIR ದಾಖಲಿಸಿದ್ದಾರೆ.
ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಗ್ರಾಮಸ್ಥರು ಮತ್ತು ಸಂಬಂಧಿಕರು ಬೇಗೂರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಲಕ್ಷ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳನ್ನು ಬಂಧಿಸುತ್ತೇವೆ, ತನಿಖೆ ಕೈಗೊಳ್ಳುತ್ತೇವೆ, ನ್ಯಾಯ ಕೊಡಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.