ಬೆಂಗಳೂರು: Ramesh Jarkiholi Scandal Hearing - ವಿಡಿಯೋ ಕಾನ್ಫರೆನ್ಸಿಂಗ್ ವಿಚಾರಣೆ ಸಂದರ್ಭದಲ್ಲಿ ಅರೆಬೆತ್ತಲೆಯಾಗಿ ಕಾಣಿಸಿಕೊಂಡಿದ್ದ ವ್ಯಕ್ತಿಯೊಬ್ಬನಿಗೆ ಕರ್ನಾಟಕ ಹೈಕೋರ್ಟ್ (Karnataka High Court) ನೋಟಿಸ್ ಜಾರಿ ಮಾಡಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ಹಿರಿಯ ವಕೀಲೆ ಇಂದಿರಾ ಜೈಸಿಂಗ್ (Indira Jaisingh) ಅವರು ವಿಚಾರಣೆ ವೇಳೆ ವ್ಯಕ್ತಿಯೊಬ್ಬರು ಅರೆಬೆತ್ತಲೆಯಾಗಿ ಕಾಣಿಸಿಕೊಂಡಿರುವುದನ್ನು ಗಮನಿಸಿದ್ದಾರೆ. ವಿಚಾರಣೆ ವೇಳೆ ಅರೆಬೆತ್ತಲೆ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರು ಸ್ನಾನ ಮಾಡುತ್ತಿದ್ದುದನ್ನು ಕಂಡೆ ಎಂದು ಇಂದಿರಾ ಜೈಸಿಂಗ್ ದೂರಿದ್ದಾರೆ. ಈ ಕುರಿತು ನ್ಯಾಯಾಲಯ ಗಂಭೀರ ಕ್ರಮ ಕೈಗೊಂಡಿದೆ.
ಆ ವ್ಯಕ್ತಿಯನ್ನು ಪತ್ತೆಹಚ್ಚುವಂತೆ ನ್ಯಾಯಾಲಯ ಆದೇಶಿಸಿದೆ. ಇದರೊಂದಿಗೆ ನ್ಯಾಯಾಲಯ ಆ ವ್ಯಕ್ತಿಗೆ ನೋಟಿಸ್ ಕೂಡ ಜಾರಿ ಮಾಡಿದೆ. ವಾಸ್ತವಿಕವಾಗಿ ಈ ಪ್ರಕರಣದಲ್ಲಿ ಅನೇಕ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳು ಕೇಳಿಬರುತ್ತಿವೆ, ಆದ್ದರಿಂದ ವೀಡಿಯೊ ಕಾನ್ಫರೆನ್ಸಿಂಗ್ ಸಮಯದಲ್ಲಿ 80 ಜನರನ್ನು ಲಾಗ್ ಇನ್ ಮಾಡಲಾಗಿತ್ತು.
ಮಾರ್ಚ್‌ನಲ್ಲಿ ಸಚಿವರು ರಾಜೀನಾಮೆ ನೀಡಿದ್ದರು
ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮಾರ್ಚ್‌ನಲ್ಲಿ, ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ (Ramesh Jarkiholi) ಅವರು ಲೈಂಗಿಕ ಟೇಪ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜಾರಕಿಹೊಳಿ ಅವರು ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ನನ್ನ ಮೇಲಿನ ಆರೋಪ ಸುಳ್ಳು. ನ್ಯಾಯಯುತ ತನಿಖೆಯಾಗಬೇಕು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದರು.
ಇದನ್ನೂ ಓದಿ-Vijay Mallya ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಹೇಳಿದ್ದೇನು?
ಪ್ರಕರಣ ಏನು?
ಉದ್ದೇಶಿತ ಎನ್ನಲಾದ ಈ ವೀಡಿಯೊ ಕ್ಲಿಪ್‌ನಲ್ಲಿ, ರಮೇಶ್ ಅಪರಿಚಿತ ಮಹಿಳೆಯೊಂದಿಗೆ ಅನ್ಯೋನ್ಯವಾಗಿರುವುದಾಗಿ ಕಂಡಿದ್ದರು. ಈ ತುಣುಕುಗಳು ಕನ್ನಡ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿವೆ. ಉದ್ಯೋಗಾಕಾಂಕ್ಷಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಮೇಶ್ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ ಮತ್ತು ಈ ಬಗ್ಗೆ ಏನಾದರೂ ಬಹಿರಂಗಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅವರು ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.
ಇದನ್ನೂ ಓದಿ-‘ಓಮಿಕ್ರಾನ್’ ಆತಂಕ ಬೇಡ: ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಪ್ರಸ್ತಾವನೆ ಇಲ್ಲವೆಂದ ಸಿಎಂ ಬೊಮ್ಮಾಯಿ
ಆರೋಪಕ್ಕೆ ಪ್ರತಿಕ್ರಿಯಿಸಿದ ಜಾರಕಿಹೊಳಿ ಅವರು 'ಶಾಕ್' ಆಗಿದೆ ಎಂದು ಹೇಳಿ, ವಿಡಿಯೋ ಶೇ.100ರಷ್ಟು ನಕಲಿಯಾಗಿದೆ ಎಂದಿದ್ದರು ಮತ್ತು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದರು.
ಇದನ್ನೂ ಓದಿ-ESI ಆಸ್ಪತ್ರೆ ಎಡವಟ್ಟು: ಫ್ರೀಜರ್‌ನಲ್ಲಿಯೇ ಕೊಳೆತ ಕೊರೊನಾ ಸೋಂಕಿತರ ಶವ, 16 ತಿಂಗಳ ಬಳಿಕ ಹೊರಕ್ಕೆ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ