ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
ಈ ಹಿನ್ನೆಲೆ ಬೇರೊಂದು ದಿನ ವಿಚಾರಣೆ ನಿಗದಿ ಮಾಡಬೇಕು ಎಂದು ನ್ಯಾಯಪೀಠವನ್ನು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಆ.12 ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಈ ಬಗ್ಗೆ ಸಲ್ಲಿಕೆಯಾದ ಅರ್ಜಿಯನ್ನು ನ್ಯಾಯಮೂರ್ತಿ ಕೆ. ಸೋಮಾಶೇಖರ್ ಮತ್ತು ಎಂ. ಉಮೇಶ್ ಅಡಿಗ ಅವರ ವಿಭಾಗೀಯಪೀಠ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಪ್ರಕರಣದಲ್ಲಿ ವಿಚಾರಣೆ ನಡೆಸಬೇಕಾದ ಹಿರಿಯ ವಕೀಲ ಕಪಿಲ್ ಸಿಬಲ್ ಕಾರಣಾಂತರದಿಂದ ವಿಚಾರಣೆಗೆ ಗೈರಾಗಿದ್ದಾರೆ. ಈ ಹಿನ್ನೆಲೆ ಬೇರೊಂದು ದಿನ ವಿಚಾರಣೆ ನಿಗದಿ ಮಾಡಬೇಕು ಎಂದು ನ್ಯಾಯಪೀಠವನ್ನು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಆ.12 ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಇದನ್ನೂ ಓದಿ: ಸಿಎಂ ಬದಲಾವಣೆಯೂ ಇಲ್ಲ, ಅವರ ಸ್ಥಾನಕ್ಕೆ ಕುತ್ತೂ ಇಲ್ಲ: ಕೃಷಿ ಸಚಿವ ಚೆಲುವರಾಯಸ್ವಾಮಿ
ಇದೇ ವೇಳೆ, ಬಸನಗೌಡ ಪಾಟೀಲ್ ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ ಪ್ರಕರಣ ಸಂಬಂಧ ದಾಖಲೆಗಳ ಲಿಖಿತ ಸಾರಾಂಶವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ನ್ಯಾಯಪೀಠವು, ಸಂವಿಧಾನದ 135ನೇ ವಿಧಿಯ ಉದ್ದೇಶ, ಕೇಂದ್ರೀಯ ವಿಚಕ್ಷಣಾ ಆಯೋಗ ಕಾಯ್ದೆಯ 2003ರ ನೆಲೆಯಲ್ಲಿ ಕೇಂದ್ರೀಯ ವಿಚಕ್ಷಣಾ ಆಯೋಗದ ಪಾತ್ರ ಸೇರಿದಂತೆ ಹಲವು ವಿಚಾರಗಳು ಕುರಿತು ಅರ್ಜಿದಾರರ ಪರ ವಕೀಲರಿಂದ ವಾದ ಆಲಿಸಬೇಕಿದೆ ಎಂದು ಹೇಳಿದೆ.
ಏನಿದು ಪ್ರಕರಣ ?
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಸಿಬಿಐ ತನಿಖೆಗೆ ಅನುಮತಿ ನೀಡಿ, ಹಿಂದಿನ ಬಿಜೆಪಿ ರಾಜ್ಯ ಸರ್ಕಾರ 2022ರ ಸೆ.25ರಂದು ಆದೇಶ ಹೊರಡಿಸಿತ್ತು. ಅದರ ರದ್ದುಗೊಳಿಸುವಂತೆ ಕೋರಿ ಶಿವಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು 2023ರ ಏ.20ರಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಶಿವಕುಮಾರ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಏಕ ಸದಸ್ಯ ನ್ಯಾಯಪೀಠದ ಆದೇಶ ಮತ್ತು ಸಿಬಿಐ ತನಿಖೆಗೆ ವಿಭಾಗೀಯ ಪೀಠ ತಡೆ ನೀಡಿತ್ತು. ಈ ಮಧ್ಯೆ ಹಾಲಿ ಕಾಂಗ್ರೆಸ್ ಸರ್ಕಾರ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು 2023ರ ನ.28ರಂದು ಹಿಂಪಡೆದಿತ್ತು. ಜತೆಗೆ, ತನಿಖೆಯನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸಿತ್ತು. ಅದನ್ನು ಪ್ರಶ್ನಿಸಿ ಸಿಬಿಐ ಮತ್ತು ಯತ್ನಾಳ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ಬಿಜೆಪಿ ಪಾದಯಾತ್ರೆ... ಹೈಕೋರ್ಟ್‌ನಿಂದ ಮಹತ್ವದ ಆದೇಶ !
ಈ ಹಿಂದೆ ಅರ್ಜಿ ಸಂಬಂಧ ಮೇ 31ರಂದು ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು. ಆದರೆ ಒಂದಿಷ್ಟು ವಿಚಾರಗಳಿಗೆ ಸ್ಪಷ್ಟನೆ ಕೇಳಬೇಕಾದ ಹಿನ್ನೆಲೆಯಲ್ಲಿ ಮುಂದುವರಿದ ವಿಚಾರಣೆಗೆ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.