ಬೆಂಗಳೂರು: ʼರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ 17 ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಆಕೆಯ ವಕ್ಷಸ್ಥಲ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶಿಸಬೇಕು" ಎಂದು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದೆ.


COMMERCIAL BREAK
SCROLL TO CONTINUE READING

ಈ ಕುರಿತ ಅರ್ಜಿಯನ್ನು ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ.ರಮೇಶ್ ಗುರುವಾರ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ವಾದ ಮಂಡಿಸಿದ್ದು, "ಆರೋಪಿಯು ತುಂಬಾ ಬಲಾಢ್ಯರು.‌ 4 ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಇವರ ಇಬ್ಬರು ಪುತ್ರರಲ್ಲಿ ಒಬ್ಬರು ಹಾಲಿ ಸಂಸದರು, ಮತ್ತೊಬ್ಬರು ಪಕ್ಷವೊಂದರ ರಾಜ್ಯ ಘಟಕದ ಅಧ್ಯಕ್ಷರು. ಇಂತಹವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗುತ್ತಿಲ್ಲ. ಬರದೆ ತಮಗೆ ಸಮಯ ಬೇಕು ಅಂತಾ ಕೇಳುತ್ತಿದ್ದಾರೆ" ಎಂದು ಹೇಳಿದ್ದಾರೆ. 


ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ರೇಣುಕಾಸ್ವಾಮಿ ಕೊಲೆ ರಹಸ್ಯೆ


ಮುಂದುವರಿದು, "ಘಟನೆ ನಡೆದ ದಿನವೇ ಯಡಿಯೂರಪ್ಪನವರು ಸಂತ್ರಸ್ತ ಬಾಲಕಿಯ ತಾಯಿಗೆ 2 ಲಕ್ಷ ರೂ.ಗಳನ್ನು ನೀಡಿದ್ದಾರೆ. ಬೇಡ ಎಂದರೂ ಅವರ ಪರ್ಸಿನಲ್ಲಿ ತುರುಕಿ ಕಳಿಸಿದ್ದಾರೆ. ನೀನು ಕಷ್ಟದಲ್ಲಿ ಇದ್ದೀಯಾ, ಇಟ್ಟುಕೊ ಅಂತಾ ಸಮಾಧಾನ ಮಾಡುವ ನೆಪದಲ್ಲಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಆ ತಾಯಿ ಮಾಡಿಕೊಂಡಿದ್ದ ವಿಡಿಯೋವನ್ನು ಡಿಲೀಟ್ ಮಾಡಿಸಿದ್ದಾರೆ. ಹೀಗೆ ಹಲವು ಹಂತಗಳಲ್ಲಿ ಸಾಕ್ಷ್ಯಗಳನ್ನು ನಾಶ ಮಾಡುತ್ತಲೇ ಇದ್ದಾರೆ. ಒಂದು ವೇಳೆ ಅವರು ಕೇಳಿದಷ್ಟು ಸಮಯ ನೀಡಿದ್ದೇ ಆದರೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಕೂಡಲೇ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲು ಆದೇಶಿಸಬೇಕು" ಎಂದು ಮನವಿ ಮಾಡಿಕೊಂಡರು.


ಯಡಿಯೂರಪ್ಪಗೆ ಬಂಧನ ಭೀತಿ!


17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಂಧನದ ಭೀತಿ ಎದುರಾಗಿದೆ. ಆದರೆ ಬಿಎಸ್‌ವೈ ಎಲ್ಲಿದ್ದಾರೆ ಅನ್ನೋದೇ ಗೊತ್ತಿಲ್ಲ. ಅವರು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಅರೆಸ್ಟ್ ವಾರಂಟ್ ಜಾರಿಯಾಗುವ ಬಗ್ಗೆ ಮೊದಲೆ ಅವರಿಗೆ ಬಂಧನದ ಬಗ್ಗೆ ಸುಳಿವು ಸಿಕ್ಕಿತ್ತಾ? ಯಡಿಯೂರಪ್ಪನವರ ವಾಹನ ಚಾಲಕನಿಗೂ ಈಗಾಗಲೆ ಮೂರ್ನಾಲ್ಕು ದಿನ ರಜೆ ನೀಡಿದ್ದಾರೆಂಬ ಮಾಹಿತಿ ಸಿಕ್ಕಿದೆ. ಸದ್ಯ ಯಡಿಯೂರಪ್ಪ ಎಲ್ಲಿದ್ದಾರೆ ಎಂಬ ಮಾಹಿತಿ ಸಿಗುತ್ತಿಲ್ಲ, ಹೀಗಾಗಿ ಕಾನೂನು ಹೋರಾಟ ಮುಂದುವರಿಸಲು ಚಿಂತನೆ ನಡೆಲಾಗಿದೆ.  


ಇದನ್ನೂ ಓದಿ: ದರ್ಶನ್‌ ಕೊಲೆ ಪ್ರಕರಣ: ಮತ್ತೊಬ್ಬ ಸ್ಯಾಂಡಲ್‌ವುಡ್‌ ನಟ ಅರೆಸ್ಟ್‌


ಹೇಗಾದರು ಮಾಡಿ ಜಾಮೀನು ಪಡೆಯಲು ಲಾಯರ್ಸ್ ಸರ್ಕಸ್ ನಡೆಸುತ್ತಿದ್ದಾರೆ. ನಾಳೆ ಹೈಕೋರ್ಟ್‌ನಲ್ಲಿ ಏನಾಗಲಿದೆ ಎಂದು ಕಾದು ನೋಡುವ ಸಾಧ್ಯತೆ ಇದೆ. ಪ್ರಕರಣ ರದ್ದು ಕೋರಿ ಈಗಾಗಲೆ ಅರ್ಜಿ ಸಲ್ಲಿಸಲಾಗಿದೆ. ನಾಳೆ ಈ ಕುರಿತ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೆ ಯಡಿಯೂರಪ್ಪ ಹೊರಗೆ ಕಾಣಿಸಿಕೊಳ್ಳೋದು ಡೌಟ್ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಹೈಪ್ರೊಫೈಲ್ ಕೇಸ್ ತೀವ್ರ ಕುತೂಹಲ ಮೂಡಿಸಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.