ಪಿಎಫ್‌ಐ ನಿಷೇಧ: ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಸಚಿವ ನಿರಾಣಿ
ಕೇಂದ್ರ ಸರಕಾರ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ. ಇದಕ್ಕಾಗಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವರಾದ ಅಮಿಶ್ ಷಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಸಚಿವ ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡಿ, ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು
ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಪಿಎಪ್ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕೇಂದ್ರ ಸರ್ಕಾರ ನಿರ್ಧಾರ ಒಂದು ಐತಿಹಾಸಿಕ ಕ್ರಮವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಪ್ರಶಂಸಿದ್ದಾರೆ.
ಕೇಂದ್ರ ಸರಕಾರ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ. ಇದಕ್ಕಾಗಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವರಾದ ಅಮಿಶ್ ಷಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಸಚಿವ ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ- Ban on PFI: ಪಿಎಫ್‌ಐಗೆ ಐದು ವರ್ಷ ನಿಷೇಧ ಹೇರಿ ಅಧಿಸೂಚನೆ ಹೊರಡಿಸಿದ ಗೃಹ ಸಚಿವಾಲಯ
ಪಿಎಫ್‌ಐ ಸಂಘಟನೆಗೆ ನಿಷೇಧ ಹೇರಬೇಕು ಎಂಬುದು ದಶಕಗಳ ಬೇಡಿಕೆಯಾಗಿತ್ತು. ಎಲ್ಲಿಯ ತನಕ ದೇಶದಲ್ಲಿ ಮೋದಿ ಅವರಂತಹ ಬಲಿಷ್ಟ ನಾಯಕ ಅಧಿಕಾರದಲ್ಲಿ ಇರುತ್ತಾರೋ ಅಲ್ಲಿಯ ತನಕ ಭಯೋತ್ಪಾದನೆ, ಭಯೋತ್ಪಾದಕರು, ಮೂಲಭೂತವಾದಿಗಳು ಸೇರಿದಂತೆ ಸಮಾಜಘಾತುಕ ಶಕ್ತಿಗಳಿಗೆ ದೇಶದಲ್ಲಿ ಉಳಿಗಾಲ ಇರುವುದಿಲ್ಲ ಎಂಬ ಸಂದೇಶ ರವಾನೆಯಾಗಿದೆ ಎಂದು ನಿರಾಣಿ ಅವರು ಎಚ್ಚರಿಸಿದ್ದಾರೆ.
ಇದನ್ನೂ ಓದಿ- ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸಾಧ್ಯತೆ ಹಿನ್ನೆಲೆ ರಾಜ್ಯಾದ್ಯಂತ ದಾಳಿ: ಎಡಿಜಿಪಿ ಅಲೋಕ್ ಕುಮಾರ್
ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಟಿಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ರಾಜಕಾರಣ ಮಾಡಬಾರದು ಎಂದು ಸಚಿವ ನಿರಾಣಿ ಅವರು ಮನವಿ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.