ಸಿಬಿಐ ಅಲ್ಲ, ಅಮೆರಿಕ ಅಧ್ಯಕ್ಷ ಟ್ರಂಪ್ ಕಡೆಯಿಂದ ಬೇಕಾದ್ರೂ ತನಿಖೆ ಮಾಡ್ಲಿ: ಮಾಜಿ ಸಿಎಂ ಕುಮಾರಸ್ವಾಮಿ

ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ಅಲ್ಲ, ಅಮೇರಿಕ ಅಧ್ಯಕ್ಷ ಟ್ರಂಪ್ ಕಡೆಯಿಂದ ಬೇಕಾದರೂ ಮಾಡಿಸ್ಲಿ, ತನಿಖೆಗೆ ಜೆಡಿಎಸ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Last Updated : Aug 18, 2019, 02:58 PM IST
ಸಿಬಿಐ ಅಲ್ಲ, ಅಮೆರಿಕ ಅಧ್ಯಕ್ಷ ಟ್ರಂಪ್ ಕಡೆಯಿಂದ ಬೇಕಾದ್ರೂ ತನಿಖೆ ಮಾಡ್ಲಿ: ಮಾಜಿ ಸಿಎಂ ಕುಮಾರಸ್ವಾಮಿ title=

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಎಂ ಯಡಿಯೂರಪ್ಪನವರು ಸಿಬಿಐ ತನಿಖೆಗೆ ಆದೇಶಿಸಿದ ಬಳಿಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದು, ಸಿಬಿಐ ಅಷ್ಟೇ ಅಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಕಾದರೂ ತನಿಖೆ ಮಾಡಲಿ ಎಂದು ಹೇಳಿದ್ದಾರೆ.

ಈ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ಅಲ್ಲ, ಅಮೇರಿಕ ಅಧ್ಯಕ್ಷ ಟ್ರಂಪ್ ಕಡೆಯಿಂದ ಬೇಕಾದರೂ ಮಾಡಿಸ್ಲಿ, ತನಿಖೆಗೆ ಜೆಡಿಎಸ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ವಿದ್ಯುನ್ಮಾನ ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಟೆಲಿಫೋನ್ ಕದ್ದಾಲಿಕೆ ವಿಚಾರದಲ್ಲಿ ನನ್ನ ಹೆಸರನ್ನು ಅನಾವಶ್ಯಕವಾಗಿ ನಡೆಸಲಾಗುತ್ತಿದೆ. ಇದರಲ್ಲಿ ನನ್ನ ಪಾತ್ರವೇ ಇಲ್ಲ. ಹೀಗಿದ್ದರೂ ನನ್ನ ವಿರುದ್ಧ ಜನರಲ್ಲಿ ಅಪನಂಬಿಕೆ ಮೂಡಿಸಲು ಯತ್ನಿಸಲಾಗುತ್ತಿದೆ. ನನ್ನ ಹಾಗೂ ಜನತೆಯ ಬಗ್ಗೆ ಅವಿಶ್ವಾಸ ಮೂಡಿಸಲು ಪ್ರಯತ್ನಿಸಲಾಗುತ್ತಿದೆ. ಇದೆಲ್ಲಾ ವಿದ್ಯುನ್ಮಾನ ಮಾಧ್ಯಮಗಳ ಸಂಚು. ಆದರೆ, ಈ ಕಾರ್ಯದಲ್ಲಿ ಅವರಿಗೆ ಯಶಸ್ಸು ಸಿಗುವುದಿಲ್ಲ ಆಕ್ರೋಶ ವ್ಯಕ್ತಪಡಿಸಿದರು.
 

Trending News