ಬುಡಕಟ್ಟು ಆದಿವಾಸಿಗಳ ಭಾಷೆಗಳಿಗೆ ಧ್ವನಿಭಾಷಾನುವಾದ ರೋಬೋಟ್ ಸಂಶೋಧನೆ

ದೇಶದ ಪ್ರತಿಷ್ಠಿತ ರಾಷ್ಟ್ರಮಟ್ಟದ ಶಿಕ್ಷಣ ಸಂಸ್ಥೆಯಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಗೆ ರಾಷ್ಟ್ರಪತಿಗಳು ಆಗಮಿಸುವ ಸಂಭ್ರಮ ಒಂದೆಡೆಯಾದರೆ ಇದೇ ಸಂಸ್ಥೆಯಿಂದ ರಾಷ್ಟ್ರಪತಿಗಳ ಮೂಲ ರಾಜ್ಯವಾದ ಓರಿಸ್ಸಾದ ಬುಡಕಟ್ಟು ನಿವಾಸಿಗಳಿಗಾಗಿ ಬಹುಭಾಷಾ ಧ್ವನಿಅನುವಾದ ಮಾಡುವ ರೋಬೋಟ್ ಯಂತ್ರವನ್ನು ಸಿದ್ಧಪಡಿಸುತ್ತಿರುವುದು ನಾಡಿನ ಹೆಮ್ಮೆಯ ಸಂಗತಿಯಾಗಿದೆ. 

Written by - Zee Kannada News Desk | Last Updated : Sep 24, 2022, 04:30 PM IST
  • ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 26 ರಂದು ಮಧ್ಯಾಹ್ನ ಐಐಐಟಿ ಸಂಸ್ಥೆಯನ್ನು ನಾಡಿಗೆ ಸಮರ್ಪಿಸಲಿದ್ದಾರೆ.
  • ಈ ಶುಭ ಸಂದರ್ಭದಲ್ಲಿಯೇ ಈ ಸಂಸ್ಥೆಯು ಉನ್ನತ ಮಟ್ಟದಲ್ಲಿ ತಯಾರಿಸುತ್ತಿರುವ ಹುಮುನೊಯ್ಡ ರೋಬೋಟ್ ಯಂತ್ರದ ಮಾಹಿತಿಯನ್ನು ರಾಷ್ಟ್ರಪತಿಗಳ ಗಮನಕ್ಕೆ ತರಲಿದೆ.
ಬುಡಕಟ್ಟು ಆದಿವಾಸಿಗಳ ಭಾಷೆಗಳಿಗೆ ಧ್ವನಿಭಾಷಾನುವಾದ ರೋಬೋಟ್ ಸಂಶೋಧನೆ title=

ಧಾರವಾಡ : ದೇಶದ ಪ್ರತಿಷ್ಠಿತ ರಾಷ್ಟ್ರಮಟ್ಟದ ಶಿಕ್ಷಣ ಸಂಸ್ಥೆಯಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಗೆ ರಾಷ್ಟ್ರಪತಿಗಳು ಆಗಮಿಸುವ ಸಂಭ್ರಮ ಒಂದೆಡೆಯಾದರೆ ಇದೇ ಸಂಸ್ಥೆಯಿಂದ ರಾಷ್ಟ್ರಪತಿಗಳ ಮೂಲ ರಾಜ್ಯವಾದ ಓರಿಸ್ಸಾದ ಬುಡಕಟ್ಟು ನಿವಾಸಿಗಳಿಗಾಗಿ ಬಹುಭಾಷಾ ಧ್ವನಿಅನುವಾದ ಮಾಡುವ ರೋಬೋಟ್ ಯಂತ್ರವನ್ನು ಸಿದ್ಧಪಡಿಸುತ್ತಿರುವುದು ನಾಡಿನ ಹೆಮ್ಮೆಯ ಸಂಗತಿಯಾಗಿದೆ. 

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 26 ರಂದು ಮಧ್ಯಾಹ್ನ ಐಐಐಟಿ ಸಂಸ್ಥೆಯನ್ನು ನಾಡಿಗೆ ಸಮರ್ಪಿಸಲಿದ್ದಾರೆ. ಈ ಶುಭ ಸಂದರ್ಭದಲ್ಲಿಯೇ ಈ ಸಂಸ್ಥೆಯು ಉನ್ನತ ಮಟ್ಟದಲ್ಲಿ ತಯಾರಿಸುತ್ತಿರುವ ಹುಮುನೊಯ್ಡ ರೋಬೋಟ್ ಯಂತ್ರದ ಮಾಹಿತಿಯನ್ನು ರಾಷ್ಟ್ರಪತಿಗಳ ಗಮನಕ್ಕೆ ತರಲಿದೆ.

ಅತ್ಯಾಧುನಿಕ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವನ್ನು ಬಳಸಿಕೊಂಡು ಬುಡಕಟ್ಟು ಭಾಷೆಗಳಿಂದ ಇತರ ಭಾಷೆಗಳಿಗೆ ಧ್ವನಿಭಾಷಾನುವಾದದ ಉಪಕರಣವನ್ನು ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆಯೆಂದು ಈ ಸಂಸ್ಥೆಯ ಇಸಿಇ ವಿಭಾಗದ ಪ್ರಾಧ್ಯಾಪಕರು ಹಾಗೂ ಈ ಯೋಜನೆಯ ಪ್ರಧಾನ ಪರೀಕ್ಷಕರಾದ ಡಾ.ಕೆ.ಟಿ.ದೀಪಕ ತಿಳಿಸಿದ್ದಾರೆ.

ಇದನ್ನೂ ಓದಿ:  Legends League 2022: ಭಿಲ್ವಾರ ಕಿಂಗ್ಸ್- ಇಂಡಿಯಾ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಗೆಲುವು ಈ ತಂಡಕ್ಕೆ ಪಕ್ಕಾ!May be an image of 2 people and people standing

ಪ್ರಸ್ತುತ ಈ ರೋಬೋಟ್ ತಂತ್ರಜ್ಞಾನದಲ್ಲಿ ಬುಡಕಟ್ಟು ಜನರಿಗೆ ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಿರುವ ಮಾಹಿತಿಯ ಬುಡಕಟ್ಟಿನ ಭಾಷೆಯಲ್ಲಿ ದೊರೆಯಲಿದೆ. ಈ ಯೋಜನೆಯಲ್ಲಿ ಓರಿಸ್ಸಾದ ಕುಯಿ ಮತ್ತು ಮುಂಡಾರಿ ಭಾಷೆಗಳನ್ನು ಹಾಗೂ ಕರ್ನಾಟಕದ ಲಂಬಾಣಿ ಹಾಗೂ ಸೋಲಿಗ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಇಂಗ್ಲೀಷ್ ಭಾಷೆಯಿಂದ ಹೇಳಲ್ಪಟ್ಟ ಬುಡಕಟ್ಟಿನ ಭಾಷೆಗೂ ಹಾಗೂ ಬುಡಕಟ್ಟು ಭಾಷೆಯಿಂದ ಇಂಗ್ಲೀಷ್ ಭಾಷೆಗೂ ಸ್ಪಷ್ಟವಾಗಿ ಅನುವಾದ ಮಾಡಬಹುದಾದಂತಹ ತಂತ್ರಲಿಪಿಯನ್ನು ಸಿದ್ಧಪಡಿಸಲಾಗುತ್ತಿದೆ. ಈಗಾಗಲೇ ಲಂಬಾಣಿ, ಸೋಲಿಗ ಮತ್ತು ಕುಯಿಗೆ ಪಠ್ಯದಿಂದ ಪಠ್ಯಕ್ಕೆ ಮಾತಿನ ಸಂಶ್ಲೇಷಣೆಯ ಮಾದರಿಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಡಾ.ದೀಪಕ್ ತಿಳಿಸಿದರು.

ಇದನ್ನೂ ಓದಿ: Pro Kabaddi League 9 : ರಾಕೇಶ್ ಗೌಡನನ್ನು ಭರ್ಜರಿಯಾಗಿ ಸ್ವಾಗತಿಸಿದ ಬೆಂಗಳೂರು ಬುಲ್ಸ್ ಟೀಂ!

ಸಾವಿರಾರು ವರ್ಷಗಳ ಇತಿಹಾಸವಿರುವ ಲಿಪಿಯಲ್ಲಿನ ಭಾಷೆ ಸಾಕಾಷ್ಟು ಜ್ಞಾನವಿರುವ ಈ ಬುಡಕಟ್ಟು ಜನಾಂಗದಲ್ಲಿ ಈ ತಂತ್ರಜ್ಞಾನ ಉಪಯೋಗವಾದರೆ ಜೀವವೈವಿಧ್ಯತೆ, ಪ್ರಾಣಿಗಳ ಜ್ಞಾನ, ಸಂಗೀತ, ನೃತ್ಯ, ಕಲೆ, ಪರಂಪರೆ, ಸಂಸ್ಕøತಿ ಡಿಜಿಟಲ್ ರೂಪದಲ್ಲಿ ಹಿಡಿದಿಟ್ಟುಕೊಂಡು ಹೊರ ಜಗತ್ತಿಗೆ ಗೊತ್ತಾಗಲಿದೆ. ಸರ್ಕಾರಿ ಯೋಜನೆಗಳ ಬಗ್ಗೆ ಅರಿವು, ಸದುಪಯೋಗಪಡಿಸಿಕೊಳ್ಳುವ ಬಗ್ಗೆಯೂ ಇದರಿಂದ ತಿಳಿದುಕೊಳ್ಳಬಹುದಾಗಿದೆ ಎಂದು ಡಾ.ಕೆ.ಟಿ.ದೀಪಕ್ ತಿಳಿಸಿದರು. 

ಧಾರವಾಡದ ಹೈದ್ರಾಬಾದ್ ಹಾಗೂ ಭೂವನೇಶ್ವರ ಐಐಟಿ ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಈ ಸಂಶೋಧನೆಯಲ್ಲಿ ಸಹಪರೀಕ್ಷಕರಾದ ಡಾ.ಪ್ರಕಾಶ ಪವಾರ ಹಾಗೂ ಡಾ.ಸಿಬಾಶಂಕರಪಾಡಿ ತೊಡಗಿಸಿಕೊಂಡಿದ್ದಾರೆ. ನವದೆಹಲಿಯ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರಾಥಮಿಕ ಹಂತವಾಗಿ 44.53 ಲಕ್ಷ ಅನುದಾನವನ್ನು ನೀಡಿದೆ.May be an image of 2 people, people standing and indoor

ಸ್ವಯಂಚಾಲಿತ ಮಾನವರೂಪಿ ರೋಬೋಟ್: ವಯಸ್ಸಾಮ,ದ ಹಿರಿಯರ ಸೇವೆಗೆ ಅನುಕೂಲವಾಗುವ ದೃಷ್ಟಿಯಿಂದ ಸ್ವಯಂಚಾಲಿತ ಮಾನವರೂಪಿ ರೋಬೋಟ್‍ನ್ನು ಸಹ ಐಐಐಟಿ ಧಾರವಾಡದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಪ್ರಧಾನ ಪರೀಕ್ಷಕ ಡಾ.ಕೆ.ಟಿ.ದೀಪಕ್ ಅವರು ತಿಳಿಸಿದ್ದಾರೆ.ಪ್ರಸ್ತುತ ಸಂಶೊಧನಾ ಯೋಜನೆಯು ಭಾರತದ ವಾತಾವರಣಕ್ಕೆ ಒಗ್ಗುವಂತಹ, ವಯಸ್ಸಾದವರ ಆರೈಕೆಗಾಗಿ ಮಾನವರೂಪಿ ರೋಬೋಟನ್ನು ತಯಾರಿಸುವುದಾಗಿದೆ. ಅದಲ್ಲದೆ ಹಾರ್ಡ್‍ವೇರ್ ಮತ್ತು ಸಾಫ್ಟ್‍ವೇರ್ ಮಾರ್ಪಾಡು ಮಾಡುವುದರಿಂದ ಇತರ ಉಪಯೋಗಗಳಿಗೂ ಬಳಸಬಹುದಾಗಿದೆ. ನಿಯೋಜಿಸಿದ ರೋಬೋಟ್ ನಿಯಮಿತ ಕೆಲಸಗಳನ್ನು ಮಾಡುವ ಸಾಮಥ್ರ್ಯ ಹೊಂದಿರುತ್ತದೆ. ಅಲ್ಲದೆ ಮಾನಸಿಕ ಸೌಖ್ಯಕ್ಕಾಗಿ ಬಹುವಿಧಗಳಿಂದ ಸಂವಹಿಸುವ ಶಕ್ತಿಯನ್ನು ಹೊಂದಿರುತ್ತದೆ. ಇಂತಹ ರೋಬೋಟ್ ಅಲ್ಪ ಸಮಯದಲ್ಲಿ ತಯಾರಿಸುವುದು ಕಷ್ಟಸಂಗತಿ ಎಂದು ಡಾ.ಕೆ.ಟಿ.ದೀಪಕ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಹೈದರಾಬಾದ್ ತಿಹಾನ್ ಐಐಟಿ ಏಜೆನ್ಸಿ ಮೂಲಕ ರೂ.70 ಲಕ್ಷಗಳ ಅನುದಾನದದಲ್ಲಿ ಸ್ವಯಂಚಾಲಿತ ಮಾನವರೂಪಿ ರೋಬೋಟ್ ತಯಾರಿಸಲಾಗುತ್ತಿದೆ. ಈ ಸಂಶೋಧನೆಯಲ್ಲಿ ಸಹಪರೀಕ್ಷಕರಾದ ಪೆÇ್ರ.ಕವಿ ಮಹೇಶ್, ಡಾ.ರಾಜೇಂದ್ರ ಹೆಗಡಿ, ಡಾ.ಪವನ್ ಕುಮಾರ್ ಸಿ, ಡಾ.ರಮೇಶ ಆತೆ, ಡಾ.ಚಿನ್ಮಯಾನಂದ ಎ. ತೊಡಗಿಸಿಕೊಂಡಿದ್ದಾರೆ.

ಸಂಸ್ಥೆಗೆ ನಿನ್ನೆ ಭೇಟಿ ನೀಡಿದ ವಾರ್ತಾ ಇಲಾಖೆಯ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ  ಸುಳ್ಳೊಳ್ಳಿ ಹಾಗೂ ವಾರ್ತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ ಡೊಳ್ಳಿನ ಅವರಿಗೆ ಸದರಿ ಸಂಶೋಧನಾ ವಿಷಯಗಳ ಬಗ್ಗೆ ಡಾ.ಕೆ.ಟಿ.ದೀಪಕ್ ಸವಿಸ್ತಾರವಾಗಿ ವಿವರಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News