ಧಾರವಾಡ : ದೇಶದ ಪ್ರತಿಷ್ಠಿತ ರಾಷ್ಟ್ರಮಟ್ಟದ ಶಿಕ್ಷಣ ಸಂಸ್ಥೆಯಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಗೆ ರಾಷ್ಟ್ರಪತಿಗಳು ಆಗಮಿಸುವ ಸಂಭ್ರಮ ಒಂದೆಡೆಯಾದರೆ ಇದೇ ಸಂಸ್ಥೆಯಿಂದ ರಾಷ್ಟ್ರಪತಿಗಳ ಮೂಲ ರಾಜ್ಯವಾದ ಓರಿಸ್ಸಾದ ಬುಡಕಟ್ಟು ನಿವಾಸಿಗಳಿಗಾಗಿ ಬಹುಭಾಷಾ ಧ್ವನಿಅನುವಾದ ಮಾಡುವ ರೋಬೋಟ್ ಯಂತ್ರವನ್ನು ಸಿದ್ಧಪಡಿಸುತ್ತಿರುವುದು ನಾಡಿನ ಹೆಮ್ಮೆಯ ಸಂಗತಿಯಾಗಿದೆ. 


COMMERCIAL BREAK
SCROLL TO CONTINUE READING

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 26 ರಂದು ಮಧ್ಯಾಹ್ನ ಐಐಐಟಿ ಸಂಸ್ಥೆಯನ್ನು ನಾಡಿಗೆ ಸಮರ್ಪಿಸಲಿದ್ದಾರೆ. ಈ ಶುಭ ಸಂದರ್ಭದಲ್ಲಿಯೇ ಈ ಸಂಸ್ಥೆಯು ಉನ್ನತ ಮಟ್ಟದಲ್ಲಿ ತಯಾರಿಸುತ್ತಿರುವ ಹುಮುನೊಯ್ಡ ರೋಬೋಟ್ ಯಂತ್ರದ ಮಾಹಿತಿಯನ್ನು ರಾಷ್ಟ್ರಪತಿಗಳ ಗಮನಕ್ಕೆ ತರಲಿದೆ.


ಅತ್ಯಾಧುನಿಕ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವನ್ನು ಬಳಸಿಕೊಂಡು ಬುಡಕಟ್ಟು ಭಾಷೆಗಳಿಂದ ಇತರ ಭಾಷೆಗಳಿಗೆ ಧ್ವನಿಭಾಷಾನುವಾದದ ಉಪಕರಣವನ್ನು ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆಯೆಂದು ಈ ಸಂಸ್ಥೆಯ ಇಸಿಇ ವಿಭಾಗದ ಪ್ರಾಧ್ಯಾಪಕರು ಹಾಗೂ ಈ ಯೋಜನೆಯ ಪ್ರಧಾನ ಪರೀಕ್ಷಕರಾದ ಡಾ.ಕೆ.ಟಿ.ದೀಪಕ ತಿಳಿಸಿದ್ದಾರೆ.


ಇದನ್ನೂ ಓದಿ:  Legends League 2022: ಭಿಲ್ವಾರ ಕಿಂಗ್ಸ್- ಇಂಡಿಯಾ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಗೆಲುವು ಈ ತಂಡಕ್ಕೆ ಪಕ್ಕಾ!Pro Kabaddi League 9 : ರಾಕೇಶ್ ಗೌಡನನ್ನು ಭರ್ಜರಿಯಾಗಿ ಸ್ವಾಗತಿಸಿದ ಬೆಂಗಳೂರು ಬುಲ್ಸ್ ಟೀಂ!


ಸಾವಿರಾರು ವರ್ಷಗಳ ಇತಿಹಾಸವಿರುವ ಲಿಪಿಯಲ್ಲಿನ ಭಾಷೆ ಸಾಕಾಷ್ಟು ಜ್ಞಾನವಿರುವ ಈ ಬುಡಕಟ್ಟು ಜನಾಂಗದಲ್ಲಿ ಈ ತಂತ್ರಜ್ಞಾನ ಉಪಯೋಗವಾದರೆ ಜೀವವೈವಿಧ್ಯತೆ, ಪ್ರಾಣಿಗಳ ಜ್ಞಾನ, ಸಂಗೀತ, ನೃತ್ಯ, ಕಲೆ, ಪರಂಪರೆ, ಸಂಸ್ಕøತಿ ಡಿಜಿಟಲ್ ರೂಪದಲ್ಲಿ ಹಿಡಿದಿಟ್ಟುಕೊಂಡು ಹೊರ ಜಗತ್ತಿಗೆ ಗೊತ್ತಾಗಲಿದೆ. ಸರ್ಕಾರಿ ಯೋಜನೆಗಳ ಬಗ್ಗೆ ಅರಿವು, ಸದುಪಯೋಗಪಡಿಸಿಕೊಳ್ಳುವ ಬಗ್ಗೆಯೂ ಇದರಿಂದ ತಿಳಿದುಕೊಳ್ಳಬಹುದಾಗಿದೆ ಎಂದು ಡಾ.ಕೆ.ಟಿ.ದೀಪಕ್ ತಿಳಿಸಿದರು. 


ಧಾರವಾಡದ ಹೈದ್ರಾಬಾದ್ ಹಾಗೂ ಭೂವನೇಶ್ವರ ಐಐಟಿ ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಈ ಸಂಶೋಧನೆಯಲ್ಲಿ ಸಹಪರೀಕ್ಷಕರಾದ ಡಾ.ಪ್ರಕಾಶ ಪವಾರ ಹಾಗೂ ಡಾ.ಸಿಬಾಶಂಕರಪಾಡಿ ತೊಡಗಿಸಿಕೊಂಡಿದ್ದಾರೆ. ನವದೆಹಲಿಯ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರಾಥಮಿಕ ಹಂತವಾಗಿ 44.53 ಲಕ್ಷ ಅನುದಾನವನ್ನು ನೀಡಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.