ರಾಜ್ಯದಲ್ಲಿ 61 ವಿಶ್ವದರ್ಜೆಯ ರೈಲು ನಿಲ್ದಾಣಗಳಾಗಿ ಅಭಿವೃದ್ಧಿಪಡಿಸಲು ಯೋಜನೆ

ಪ್ರಯಾಣಿಕರಿಗೆ ಉತ್ತಮ ಮತ್ತು ಆಧುನಿಕ ಸೌಲಭ್ಯಗಳನ್ನು ಒದಗಿಸಲು ಅಮೃತ್ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ರೈಲ್ವೆ ಸಚಿವಾಲಯವು ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು ಆಧುನೀಕರಣದ ಕೆಲಸವನ್ನು ಮಾಡುತ್ತಿದೆ.

Written by - Manjunath N | Last Updated : May 22, 2025, 11:11 PM IST
  • ಆತ್ಮನಿರ್ಭರ ಭಾರತ ಅಭಿಯಾನದ ಮೂಲಕ ರೈಲ್ವೆಯ ಹಲವು ಪ್ರಮುಖ ಮೂಲಸೌಕರ್ಯ ಮತ್ತು ಉತ್ಪಾದನಾ ಯೋಜನೆಗಳನ್ನು ಪ್ರಾರಂಭಿಸಲಾಗಿದೆ.
  • ಇದರಲ್ಲಿ ವಂದೇ ಭಾರತ್ ರೈಲುಗಳ ಸ್ಥಳೀಯ ಉತ್ಪಾದನೆಯ ಕೆಲಸ ಮುಖ್ಯವಾಗಿದೆ
  • ಸ್ವಾತಂತ್ರ್ಯದ ನಂತರ ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದೆ
ರಾಜ್ಯದಲ್ಲಿ 61 ವಿಶ್ವದರ್ಜೆಯ ರೈಲು ನಿಲ್ದಾಣಗಳಾಗಿ ಅಭಿವೃದ್ಧಿಪಡಿಸಲು ಯೋಜನೆ

ಧಾರವಾಡ: ಕರ್ನಾಟಕದ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಧಾರವಾಡದಲ್ಲಿ ಅಮೃತ್ ರೈಲು ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ದೇಶಾದ್ಯಂತ 103 ಅಮೃತ್ ರೈಲು ನಿಲ್ದಾಣಗಳನ್ನು ಉದ್ಘಾಟಿಸಿದರು, ಇದರಲ್ಲಿ ಕರ್ನಾಟಕದ ಧಾರವಾಡ, ಬಾಗಲಕೋಟೆ, ಮುನಿರಾಬಾದ್, ಗದಗ ಮತ್ತು ಗೋಕಾಕ್ ರಸ್ತೆ ನಿಲ್ದಾಣಗಳು ಸೇರಿವೆ.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ದೇಶದ ನಿರಂತರ ಅಭಿವೃದ್ಧಿಗೆ ಸುಗಮ ಮತ್ತು ಸಂಘಟಿತ ರೈಲು ಸಾರಿಗೆ ವ್ಯವಸ್ಥೆಯು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಒತ್ತಿ ಹೇಳಿದರು. ಭಾರತೀಯ ರೈಲ್ವೆ ದೇಶದ ಆರ್ಥಿಕ ಮತ್ತು ಒಟ್ಟಾರೆ ಅಭಿವೃದ್ಧಿಯ ಬೆನ್ನೆಲುಬಾಗಿದೆ. 2023-24ನೇ ಸಾಲಿನಲ್ಲಿ 1000ಕ್ಕೂ ಹೆಚ್ಚು ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು ಆಧುನೀಕರಣಕ್ಕೆ ಪ್ರಧಾನಮಂತ್ರಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದು ಅವರು ತಿಳಿಸಿದರು.

ರಾಜ್ಯಪಾಲರು, ಭಾರತ ಸರ್ಕಾರವು ರೈಲ್ವೆ ಸೇವೆಗಳು ಮತ್ತು ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಬದ್ಧವಾಗಿದೆ ಎಂದರು. ಪ್ರಧಾನಮಂತ್ರಿ ಮೋದಿ ಅವರು ರೈಲ್ವೆ ನಿಲ್ದಾಣಗಳು, ರೈಲುಗಳು, ಹಳಿಗಳು ಮತ್ತು ಸಿಗ್ನಲಿಂಗ್ ವ್ಯವಸ್ಥೆಯನ್ನು ವಿಶ್ವದರ್ಜೆಯ ಮಟ್ಟಕ್ಕೆ ಏರಿಸಲು ಶ್ರಮಿಸುತ್ತಿದ್ದಾರೆ. ಕರ್ನಾಟಕದಲ್ಲಿ 50,792 ಕೋಟಿ ರೂ. ಮೌಲ್ಯದ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿದ್ದು, 2025-26ರ ಬಜೆಟ್‌ನಲ್ಲಿ ರಾಜ್ಯಕ್ಕೆ 7,564 ಕೋಟಿ ರೂ. ಹಂಚಿಕೆಯಾಗಿದೆ. 61 ನಿಲ್ದಾಣಗಳನ್ನು ವಿಶ್ವದರ್ಜೆಯ ರೈಲು ನಿಲ್ದಾಣಗಳಾಗಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.May be an image of 9 people, dais and text that says "Dhy Under A Inauguration of Redeveloped Rallway Station harat Station Scheme .by.. ale Prime end. ndodi lodi 2025"

ಇದನ್ನೂ ಓದಿ: ಈ ರೀತಿ ಮುಖಕ್ಕೆ ʼಗ್ಲಿಸರಿನ್ʼ ಬಳಸಿ ಅದ್ಭುತ ಪ್ರಯೋಜನ ಪಡೆಯಿರಿ! ಹೊಳಪು ತ್ವಚೆ ನಿಮ್ಮದಾಗುವುದು

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಯಿಂದ ಪ್ರಯಾಣಿಕರಿಗೆ ಆಧುನಿಕ ಸೌಕರ್ಯಗಳು ದೊರೆಯಲಿವೆ. ಇದು ವ್ಯಾಪಾರ, ವಾಣಿಜ್ಯ ಮತ್ತು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸಲಿದೆ. ಆತ್ಮನಿರ್ಭರ ಭಾರತ ಅಭಿಯಾನದ ಮೂಲಕ ವಂದೇ ಭಾರತ್ ರೈಲುಗಳ ಸ್ಥಳೀಯ ಉತ್ಪಾದನೆ ಸೇರಿದಂತೆ ಹಲವು ಮೂಲಸೌಕರ್ಯ ಯೋಜನೆಗಳು ಆರಂಭಗೊಂಡಿವೆ ಎಂದು ರಾಜ್ಯಪಾಲರು ಹೇಳಿದರು.

ರೈಲ್ವೆಯ ದೂರದೃಷ್ಟಿಯ ನಾಯಕತ್ವಕ್ಕಾಗಿ ಪ್ರಧಾನಮಂತ್ರಿ ಮೋದಿ ಮತ್ತು ರೈಲ್ವೆ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಬಲಿಷ್ಠ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಲು ಎಲ್ಲರೂ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಮಹಾಪೌರ ರಾಮಪ್ಪ ಬಡಿಗೇರ, ಮಾಜಿ ಶಾಸಕ ಅಮೃತ ದೇಸಾಯಿ, ರೈಲ್ವೆ ಐಜಿಪಿ ಆರ್.ಎಸ್.ಪಿ.ಸಿಂಗ್, ನೈರುತ್ಯ ರೈಲ್ವೆ ವಲಯದ ವ್ಯವಸ್ಥಾಪಕ ನಿರ್ದೇಶಕ ಮುಕುಲ ಸರಣ ಮಾತುರ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೇರಿದಂತೆ ಜನಪ್ರತಿನಿಧಿಗಳು, ರೈಲ್ವೆ ಅಧಿಕಾರಿಗಳು, ಸಾರ್ವಜನಿಕರು ಮತ್ತು ರೈಲ್ವೆ ಬಳಕೆದಾರ ಸಂಘದ ಸದಸ್ಯರು ಭಾಗವಹಿಸಿದ್ದರು. ರೈಲ್ವೆ ಅಧಿಕಾರಿ ಅಂಜಿನಿ ಹೆಚ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

Trending News