ಪಿ.ಎಂ.ಕಿಸಾನ್ ಯೋಜನೆ: ನೋಂದಾಯಿತ ಫಲಾನುಭವಿಗಳು ಇ-ಕೆವೈಸಿ ಕಡ್ಡಾಯವಾಗಿ ಮಾಡಿಕೊಳ್ಳಲು ಸೂಚನೆ
ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in ವೆಬ್‍ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದಾಗಿದೆ.
ಬೆಂಗಳೂರು: ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in ವೆಬ್‍ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದಾಗಿದೆ.
ಇ-ಕೆವೈಸಿ ಮಾಡಿಕೊಳ್ಳುವ ವಿಧಾನ: ಇ-ಕೆವೈಸಿ ಓಟಿಪಿ ಮುಖಾಂತರ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು https://pmkisan.gov.in ವೆಬ್‍ಸೈಟ್‍ನಲ್ಲಿ ಇ-ಕೆವೈಸಿ ಲಿಂಕ್ ಮೇಲೆ ಕ್ಲಿಕಿಸಿ ಆಧಾರ ನಂಬರ್ ಹಾಗೂ ಕ್ಯಾಪ್‍ಚಾ ನಮೂದಿಸಿ ತದನಂತರ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ದಾಖಲಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ.
ಇದನ್ನೂ ಓದಿ- Omicron: ಒಮಿಕ್ರಾನ್' ಭೀತಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೈಅಲರ್ಟ್..!
ಇ-ಕೆವೈಸಿ ಬಯೋಮೆಟ್ರಿಕ್ ಮುುಖಾಂತರ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (ಅSಅ) ಕ್ಕೆ ಭೇಟಿ ನೀಡಿ ಆಧಾರ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ನಮೂದಿಸಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳು ನಮೂದಿಸಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ. ಈ ಪ್ರಕ್ರಿಯೆಗಾಗಿ ಸಿಎಸ್‍ಸಿ ಕೇಂದ್ರದವರು ಎಲ್ಲ ಟ್ಯಾಕ್ಸ ಒಳಗೊಂಡಂತೆ, ರೂ.15/- ಗಳನ್ನು ಮಾತ್ರ ಪ್ರತಿ ಫಲಾನುಭವಿಯಿಂದ ಪಡೆಯಬಹುದಾಗಿದೆ.
ಇದನ್ನೂ ಓದಿ- Gold Smuggling: ಜ್ಯೂಸರ್ ಒಳಗೆ ಚಿನ್ನದ ರಾಡ್..! ಸಿಕ್ಕಿಬಿದ್ದ ಖದೀಮ
ಹೆಚ್ಚಿನ ಮಾಹಿತಿಗಾಗಿ ರೈತ ಬಾಂಧವರು ಹತ್ತಿರದ ರೈತ ಸಂಪರ್ಕ ಕೇಂದ್ರ,ಸಹಾಯಕ ಕೃಷಿ ನಿರ್ದೇಶಕರನ್ನು ಭೇಟಿ ನೀಡಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.