ಸಿಎಂ ಕುಮಾರಸ್ವಾಮಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪಿಎಂ ಮೋದಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

Last Updated : Dec 16, 2018, 05:18 PM IST
ಸಿಎಂ ಕುಮಾರಸ್ವಾಮಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪಿಎಂ ಮೋದಿ title=
file photo

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

59ನೇ ವರ್ಷಕ್ಕೆ ಕಾಲಿಡುತ್ತಿರುವ ಕುಮಾರಸ್ವಾಮಿ ಕುಟುಂಬ ಸದಸ್ಯರೊಂದಿಗೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭಾಷಯ ಕೋರುತ್ತಾ "  ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು ದಿರ್ಘಾಯುಶ್ಯ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡುತ್ತೇನೆ" ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೇಗೌಡರು ಸಹ ಸಿಎಂ ಕುಮಾರಸ್ವಾಮಿಗೆ ಟ್ವಿಟ್ಟರ್ ನಲ್ಲಿ ಹುಟ್ಟುಹಬ್ಬದ ಶುಭಾಶಯವನ್ನು ಕೋರುತ್ತಾ. "ರಾಜ್ಯದ ಮುಖ್ಯಮಂತ್ರಿಗಳಾದ @hd_kumaraswamy ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಜನಪರ ಹಾಗೂ ರೈತಪರವಾಗಿರುವ ಮೈತ್ರಿ‌ ಸರ್ಕಾರವನ್ನು ಮುನ್ನಡೆಸುತ್ತಿರುವ @hd_kumaraswamy ಅವರಿಗೆ ದೇವರು ಆಯುಷ್ಯ , ಆರೋಗ್ಯ, ಶಕ್ತಿ ನೀಡುವ ಮೂಲಕ ಹೊಸ ಅಭಿವೃದ್ಧಿಯ ಪರ್ವ ಕರ್ನಾಟಕ ರಾಜ್ಯದಲ್ಲಿ ಆರಂಭವಾಗಲೆಂದು ಹಾರೈಸುತ್ತೇನೆ " ಎಂದು ಕುಮಾರಸ್ವಾಮಿಗೆ ದೇವೇಗೌಡರು ಹಾರೈಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಸಿಎಂ ಕುಮಾರಸ್ವಾಮಿ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ "ನಿಮ್ಮ ಶುಭ ಹಾರೈಕೆಗಳೇ ನನಗೆ ಶ್ರೀರಕ್ಷೆ. ಫ್ಲೆಕ್ಸ್ ಬ್ಯಾನರ್ ಅಳವಡಿಸಿ ಊರಿನ ಅಂದ ಹಾಳು ಮಾಡಬೇಡಿ. ಪರಿಸರ ಕಾಳಜಿ ಮೆರೆದಲ್ಲಿ ಅದೇ ಅತ್ಯುತ್ತಮ ಸಂದೇಶ' ಎಂದು  ವಿನಂತಿಸಿಕೊಂಡಿದ್ದಾರೆ.

 

Trending News