Lok Sabha Election 2024: ರಾಯಚೂರು: ಭಾರತೀಯರನ್ನು ಪದೇ ಪದೇ ಮೂರ್ಖರನ್ನಾಗಿಸಲು ಪ್ರಧಾನಿ ಮೋದಿ ಅವರಿಂದ ಸಾಧ್ಯವಿಲ್ಲ. ಮೂರನೇ ಬಾರಿ ಪ್ರಧಾನಮಂತ್ರಿಯಾಗಲು ದೇಶದ ಜನರ ಆಶೀರ್ವಾದ ಪಡೆಯುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಮತ ಕೇಳುವ ಯಾವುದೇ ನೈತಿಕತೆ ಇಲ್ಲ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಎರಡು ಬಾರಿ ಗೆದ್ದರು. ಈ ಬಾರಿ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ - ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿಯಾದ ರಾಜಶೇಖರ್ ಹಿಟ್ನಾಳ್ ಅವರಿಗೆ ಮತ ನೀಡಿ ಆಶೀರ್ವದಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.


ಇದನ್ನೂ ಓದಿ: ಉಪ್ಪಿಗೆ ಈ ಎಲೆಯ ರಸ ಮಿಕ್ಸ್ ಮಾಡಿ ಹಚ್ಚಿ: ಕ್ಷಣಾರ್ಧದಲ್ಲಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ ಬಿಳಿಕೂದಲು! ಸೊಂಪಾಗಿ ಉದ್ದವಾಗಿ ಬೆಳೆಯುತ್ತೆ ಸಹ


ಸಮೀಕ್ಷಾ ವರದಿಯೊಂದರ ಪ್ರಕಾರ ತಮ್ಮ ಪಕ್ಷ 200 ಸ್ಥಾನಗಳನ್ನು ಗೆದ್ದರೆ ಹೆಚ್ಚು ಎನ್ನುವುದು ನರೇಂದ್ರ ಮೋದಿ ಅವರಿಗೂ ಗೊತ್ತಾಗಿದೆ. ಅದಕ್ಕಾಗಿ ಇಡೀ ರಾಷ್ಟ್ರದಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಟಿಕೆಟ್ ಬದಲಾಯಿಸುವ ಕೆಲಸವನ್ನು ಬಿಜೆಪಿ ಮಾಡಿದೆ. ಕರ್ನಾಟಕದಲ್ಲಿ 12 ಜನ ಹಾಲಿ ಸಂಸದರಿಗೆ ಟಿಕೆಟ್ ಕೊಟ್ಟಿಲ್ಲ. ನರೇಂದ್ರ ಮೋದಿಯವರಿಗೆ ವಿಶ್ವಾಸ ಇದ್ದಿದ್ದರೆ ಇಷ್ಟೊಂದು ಬದಲಾವಣೆ ಏಕೆ ಮಾಡಬೇಕಿತ್ತು. ಅವರು ಸೋಲುವ ಭಯದಿಂದ ಹೀಗೆ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ:  ವೀರೆಂದ್ರ ಸೆಹ್ವಾಗ್ ಸೋದರಳಿಯ RCBಯ ಸ್ಟಾರ್ ಕ್ರಿಕೆಟಿಗ! ಫಿಟ್ನೆಸ್’ನಲ್ಲಿ ಕೊಹ್ಲಿಯನ್ನೇ ಮೀರಿಸಿರುವ ಆತ ಯಾರು ಗೊತ್ತಾ?


ನಿರುದ್ಯೋಗ, ಬೆಲೆಯೇರಿಕೆ, ಹಣದುಬ್ಬರ, ರೈತರ, ಮಹಿಳೆಯರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಅಭಿವೃದ್ಧಿ ಮಾಡಿದ್ದೇನೆ ಎಂದು ಮಾತ್ರ ಹೇಳುತ್ತಾರೆ. ಏನು ಮಾಡಿದ್ದೇವೆ ಎಂದು ಹೇಳುವುದಿಲ್ಲ, ಬಹುಶಃ ಅವರಿಗೂ ಅದು ಗೊತ್ತಿದ್ದಂತೆ ಕಾಣುತ್ತಿಲ್ಲ ಎಂದು ಅವರು ಕುಟುಕಿದ್ದಾರೆ.


ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ್ ಸ್ಪರ್ಧಿಸುತ್ತಿದ್ದಾರೆ. ಕಾರಣವಿಲ್ಲದೆ ಸಂಗಣ್ಣ ಕರಡಿಯವರಿಗೆ ಟಿಕೆಟ್ ತಪ್ಪಿಸಿದ್ದಾರೆ. ಸಂಗಣ್ಣ ಕರಡಿ ಈ ಕ್ಷೇತ್ರದಲ್ಲಿ ಬಹಳಷ್ಟು ಕೆಲಸ ಮಾಡಿದ್ದರು. ಬೇಸರಗೊಂಡು ಕಾಂಗ್ರೆಸ್ ಸೇರಿದ್ದಾರೆ. ಅವರಿಂದ ಕಾಂಗ್ರೆಸ್ ಪಕ್ಷಕೆ ಹೆಚ್ಚು ಶಕ್ತಿ ಬಂದಿದೆ. ರಾಜಶೇಖರ್ ಹಿಟ್ನಾಳ್ ಅವರು ನಮ್ಮ ಅಭ್ಯರ್ಥಿಯಾಗಿ ಕಳೆದ ಬಾರಿಯೂ ಸ್ಪರ್ಧಿಸಿದ್ದರು. ಸ್ವಲ್ಪ ಅಂತರದಲ್ಲಿ ಸೋತರು. ಆದರೆ ಈ ಬಾರಿ ಅವರು ನೂರಕ್ಕೆ ನೂರು ಗೆಲ್ಲುತ್ತಾರೆಂಬ ವಿಶ್ವಾಸವಿದೆ. ಸಿಂಧನೂರು ಹಾಗೂ ಪಕ್ಕದ ಕ್ಷೇತ್ರಗಳಿಂದ ಹೆಚ್ಚು ಮತ ನಮಗೆ ಬರುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್