ಬೆಂಗಳೂರು: ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಬೇಕೆಂದುವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. #JaiJawan_JaiKisan ಹ್ಯಾಶ್ ಟ್ಯಾಗ್ ಬಳಸಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ?’ ಎಂದು ಪ್ರಶ್ನಿಸಿದ್ದಾರೆ.


ಪ್ರಧಾನಿ ಮೋದಿಯವರೇ ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ 2 ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?’ ಎಂದು ಟ್ವೀಟ್ ಮಾಡಿದ್ದಾರೆ.


'ನ್ಯಾಷನಲ್ ಹೆರಾಲ್ಡ್' ಬಿಜೆಪಿಯ ದ್ವೇಷ ರಾಜಕಾರಣದ ಫಲವೇ ಹೊರತು ಅದರಲ್ಲಿ ಸತ್ಯವಿಲ್ಲ-ಕಾಂಗ್ರೆಸ್


COMMERCIAL BREAK
SCROLL TO CONTINUE READING

‘ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ ಪ್ರಧಾನಿ ನರೇಂದ್ರ ಮೋದಿಯವರೇ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಎಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ರಾಜ್ಯದ 80 ಕಡೆ ಏಕಕಾಲಕ್ಕೆ ದಾಳಿ


ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು’ ಎಂದು ಹೇಳಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.