ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಾಳೆ(ಫೆ.6) ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಮವಾರ ಬೆಳಗ್ಗೆ 11.30ಕ್ಕೆ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ‘2023ರ ಇಂಧನ ಸಪ್ತಾಹ’ವನ್ನು ಉದ್ಘಾಟನೆ ಮಾಡಲಿದ್ದಾರೆ. ಫೆಬ್ರವರಿ 6 ರಿಂದ 8ರವರೆಗೆ ಐಇಡಬ್ಲ್ಯೂ ಕಾರ್ಯಕ್ರಮ ಆಯೋಜನೆಗೊಂಡಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಜಾಗತಿಕ ತೈಲ ಮತ್ತು ಅನಿಲ ವಲಯದ ಸಿಇಒಗಳ ದುಂಡು ಮೇಜಿನ ಸಭೆಯ ಸಂವಾದದಲ್ಲಿ ಭಾಗವಹಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಹಸಿರು ಇಂಧನ ಕ್ಷೇತ್ರದಲ್ಲಿ ಬಹುಹಂತದ ಉಪಕ್ರಮಗಳಿಗೆ ಪ್ರಧಾನಿ ಮೋದಿಯವರು ಚಾಲನೆ ನೀಡಲಿದ್ದಾರೆ. ನಂತರ ಹಸಿರು ಸಾಗಣೆ ಜಾಥಾಗೆ ಚಾಲನೆ ನೀಡಲಿದ್ದಾರೆ. ಬಳಿಕ ಶೀಶೆ ರಹಿತ ಉಪಕ್ರಮದಡಿ ಸಮವಸ್ತ್ರಗಳನ್ನು ಬಿಡುಗಡೆ ಮಾಡಲಿದ್ದಾರೆ. ಇದಾದ ನಂತರ ಭಾರತೀಯ ತೈಲ ನಿಮಗದ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ಅವಳಿ ಕುಕ್ ಟಾಪ್ ಮಾದರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.


ಇದನ್ನೂ ಓದಿ: ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ 6-7 ಅಭ್ಯರ್ಥಿಗಳ ಬದಲಾವಣೆ ಸುಳಿವು ಕೊಟ್ಟ ಎಚ್ಡಿಕೆ


ಬೆಂಗಳೂರು ಬಳಿಕ‌ ತುಮಕೂರಿಗೆ ಪ್ರಧಾನಿ ಮೋದಿ ಭೇಟಿ


ಬೆಂಗಳೂರಿನ ಕಾರ್ಯಕ್ರಮಗಳ ಬಳಿಕ ಪ್ರಧಾನಿ ಮೋದಿ ತುಮಕೂರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ತುಮಕೂರಿನಲ್ಲಿ HAL ಹೆಲಿಕಾಪ್ಟರ್ ಕಾರ್ಖಾನೆ ದೇಶಕ್ಕೆ ಸಮರ್ಪಿಸಲಿದ್ದಾರೆ.  ಈವೇಳೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು HAL ಹೆಲಿಕಾಪ್ಟರ್ ಕಾರ್ಖಾನೆ ಮತ್ತೊಂದು ಹೆಜ್ಜೆಯಾಗಿದೆ. ಪ್ರಧಾನಿ ಮೋದಿಯವರು 2016ರಲ್ಲಿ ಈ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಇದು ಹಸಿರು ವಲಯ ಸಮರ್ಪಿತ ಹೆಲಿಕಾಪ್ಟರ್ ಕಾರ್ಖಾನೆಯಾಗಿದೆ. ಇದರಿಂದ ಸಾಮರ್ಥ್ಯ ಹೆಚ್ಚಿಸಲಿದೆ ಮತ್ತು ಪರಿಸರ ಸ್ನೇಹಿ ಹೆಲಿಕಾಪ್ಟರ್‍ಗಳನ್ನು ಇಲ್ಲಿ ನಿರ್ಮಾಣ ಮಾಡಲಾಗುತ್ತದೆ


ಇದು ಏಷ್ಯಾದಲ್ಲಿಯೇ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯವಿರುವ ಕಾರ್ಖಾನೆಯಾಗಿದೆ. ಆರಂಭಿಕವಾಗಿ ಹಗುರ ಬಳಕೆಯ ಹೆಲಿಕಾಪ್ಟರ್(LUH)ಗಳನ್ನು ಉತ್ಪಾದಿಸಲಾಗುತ್ತದೆ. ಎಲ್‍ಯುಎಚ್ ದೇಶೀಯವಾಗಿ ವಿನ್ಯಾಸಗೊಳಿಸಲಾದ ಮತ್ತು ಅಭಿವೃದ್ಧಿಪಡಿಸಿದ 3-ಟನ್ ಶ್ರೇಣಿ, ಏಕ ಎಂಜಿನ್ ವಿವಿಧೋದ್ದೇಶ ಉಪಯುಕ್ತತೆಯ ಹೆಲಿಕಾಪ್ಟರ್ ಆಗಿದೆ.


ಇದನ್ನೂ ಓದಿ: Electric shock: ವಿದ್ಯುತ್ ಪ್ರವಹಿಸಿ ಕಾರ್ಮಿಕರಿಬ್ಬರ ದಾರುಣ ಸಾವು


ಹೆಚ್ಚಿನ ಕುಶಲತೆಯ ವಿಶಿಷ್ಟ್ಯವಾದ ಲಕ್ಷಗಳನ್ನು ಇದು ಹೊಂದಿದೆ. ಮುಂದಿನ 20 ವರ್ಷಗಳಲ್ಲಿ ಎಚ್‍ಎಎಲ್ ತುಮಕೂರಿನಲ್ಲಿ 3 ರಿಂದ 15 ಟನ್ ಸಾಮರ್ಥ್ಯದ 1000ಕ್ಕೂ ಹೆಚ್ಚು ಹೆಲಿಕಾಪ್ಟರ್‍ಗಳನ್ನು ಉತ್ಪಾದಿಸುವ ಗುರಿ ಹೊಂದಿದೆ. ಈ ವಲಯದಲ್ಲಿ 6000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ದೊರೆಯಲಿದೆ. ಇದರ ಬಳಿಕ ಪ್ರಧಾನಿ ಮೋದಿಯವರು ತುಮಕೂರಿನ ಕೈಗಾರಿಕಾ ಪ್ರದೇಶಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ  ಕಾರ್ಯಕ್ರಮದಡಿ ತುಮಕೂರಿನಲ್ಲಿ 3 ಹಂತಗಳಲ್ಲಿ 8,484 ಎಕರೆ ಪ್ರದೇಶದಲ್ಲಿ 3 ಹಂತಗಳ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸುತ್ತಿದೆ. ಇದು ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್‍ನ ಭಾಗವಾಗಿದೆ


ನಂತರ ತುಮಕೂರಿನ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ‘ಜಲ್ ಜೀವನ್ ಅಭಿಯಾನ’ದ ಯೋಜನೆಗಳಿಗೆ ಪ್ರಧಾನಿ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ತಿಪಟೂರಿನ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯನ್ನು 430 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಚಿಕ್ಕನಾಯಕನಹಳ್ಳಿಯ 147 ಜನವಸತಿ ಪ್ರದೇಶಗಳಿಗೆ 115 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ವಲಯದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶವನ್ನು ಈ ಯೋಜನೆ ಒಳಗೊಂಡಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.