ʼಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿʼ.. ಯುವಶಕ್ತಿ ದೇಶದ ಶಕ್ತಿ
ಡಿಜಿಟಲ್ ಇಂಡಿಯಾದ ಪ್ರಸ್ತುತ ಕಾಲಘಟ್ಟದಲ್ಲಿ ಕೌಶಲ್ಯಭರಿತ ಯುವಜನತೆಗೆ ಅವಕಾಶಗಳ ಬಾಗಿಲು ತೆರೆದಿದೆ. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವಸಮುದಾಯ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದರು.
ಹುಬ್ಬಳ್ಳಿ: ಡಿಜಿಟಲ್ ಇಂಡಿಯಾದ ಪ್ರಸ್ತುತ ಕಾಲಘಟ್ಟದಲ್ಲಿ ಕೌಶಲ್ಯಭರಿತ ಯುವಜನತೆಗೆ ಅವಕಾಶಗಳ ಬಾಗಿಲು ತೆರೆದಿದೆ. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವಸಮುದಾಯ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದರು.
ವಿಕಸಿತ ಯುವ-ವಿಕಸಿತ ಭಾರತ ಎಂಬ ಘೋಷವಾಕ್ಯದೊಂದಿಗೆ ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಿಂದ 16 ರವರೆಗೆ ನಡೆಯಲಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏಕ ಭಾರತ ಶ್ರೇಷ್ಠ ಭಾರತ ನಿರ್ಮಾಣಕ್ಕೆ ದೇಶವು ಹೊಸ ಸಂಕಲ್ಪದಿಂದ ಮುನ್ನಡೆದಿದೆ. ಯುವ ಶಕ್ತಿ ಸದೃಢವಾಗಿದ್ದರೆ ಸದೃಢ ದೇಶ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಸ್ವಾಮಿ ವಿವೇಕಾನಂದರ ನಂಬಿಕೆಯಾಗಿತ್ತು ಎಂದರು.
ಇದನ್ನೂ ಓದಿ:ಹುಬ್ಬಳ್ಳಿಯ ಪುಣ್ಯ ಭೂಮಿಗೆ ನಮಸ್ಕಾರ"-ಕನ್ನಡದಲ್ಲಿ ಪ್ರಧಾನಿ ಮೋದಿ ಭಾಷಣ
ಭಾರತವು ಜಗತ್ತಿನ 5 ನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಇದನ್ನು ಅಗ್ರ ಮೂರನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿ ನಮ್ಮದಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದೀಜಿ ಹೇಳಿದರು. ಕೃಷಿ ಕ್ಷೇತ್ರದಲ್ಲಿ ಭಾರತವು ಜಗತ್ತಿನ ಮುಂಚೂಣಿಯಲ್ಲಿದ್ದು, ಈ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆಯಿಂದ ಯುವ ಜನತೆಗೆ ಇನ್ನಷ್ಟು ಅವಕಾಶಗಳು ಲಭಿಸಲಿವೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕ್ರೀಡಾ ಕ್ಷೇತ್ರದಲ್ಲಿ ಭಾರತವು ಪ್ರಕಾಶಿಸುತ್ತಿರುವುದಕ್ಕೆ ಯುವ ಸಮುದಾಯದ ಪ್ರಯತ್ನವೇ ಕಾರಣವಾಗಿದೆ. ಇದೊಂದು ವಿಶೇಷ ಅವಕಾಶ. ಈಗಿರುವುದು ವಿಶೇಷ ಪೀಳಿಗೆ ಆಗಿದೆ. ದೇಶದ ಆರ್ಥಿಕತೆ ಸುಧಾರಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಕಳೆದ ಒಂಭತ್ತು ವರ್ಷಗಳಲ್ಲಿ ಸಾಕಷ್ಟು ಕೆಲಸ ಮಾಡಲಾಗಿದೆ. ಇದೀಗ ರನ್ ವೇ ಸಿದ್ಧವಾಗಿದೆ. ಯುವ ಸಮಯದಾಯ ಇದನ್ನು ಬಳಸಿಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ಹಾರಲು ಮುಂದಾಗಬೇಕಿದೆ ಎಂದರು.
ಇದನ್ನೂ ಓದಿ: ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್- ಪ್ರಶ್ನೆಪತ್ರಿಕೆಯಲ್ಲಿ ಮಹತ್ವದ ಬದಲಾವಣೆ
ಸ್ತ್ರೀಶಕ್ತಿಯು ರಾಷ್ಟ್ರಶಕ್ತಿಯನ್ನು ಮುನ್ನಡೆಸುವಲ್ಲಿ ಸಫಲರಾಗಿದ್ದಾರೆ. ಫೈಟರ್ ಜೆಟ್ ಹಾರಿಸುತ್ತಿರುವ ಮಹಿಳೆಯರು ವಿಜ್ಞಾನ, ತಂತ್ರಜ್ಞಾನ, ಕ್ರೀಡೆ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿದ್ದಾರೆ. ಯುವಜನತೆ ವರ್ತಮಾನದಲ್ಲಿದ್ದಕೊಂಡು ಭವಿಷ್ಯದ ಕಡೆ ಸಕಾರಾತ್ಮಕವಾಗಿ ಯೋಚಿಸುವ ಮೂಲಕ ಹೊಸ ಹೊಸ ಆವಿಷ್ಕಾರಗಳತ್ತ ಚಿತ್ತವನ್ನು ಹರಿಸಬೇಕು.
ಹತ್ತು ವರ್ಷಗಳ ಇಲ್ಲದ ಎಷ್ಟೋ ವಿಷಯಗಳಿಂದ ನಾವು ಈಗ ಚಕಿತರಾಗಿದ್ದೇವೆ ಈಗ ಸೈಬರ್ ಸೆಕ್ಯುರಿಟಿ, ಡೇಟಾ ಸೈನ್ಸ್, ದೇಶದ ಸುರಕ್ಷತೆ ಸೇರಿ ಎಲ್ಲದರ ಸ್ವರೂಪ ಬದಲಾಗಿದೆ. ಯುವಸಮುದಾಯವು ತಂತ್ರಜ್ಞಾನದ ಈ ಬದಲಾವಣೆಯಿಂದ ಪಾಠ ಕಲಿತು ಹೊಸ ಕೌಶಲಗಳನ್ನು ಬೆಳೆಸಿಕೊಳ್ಳಬೇಕು.
ಇದನ್ನೂ ಓದಿ: CM Basavaraj Bommai: ಕೆಟ್ಟ ಸಂಸ್ಕೃತಿ ರಾಜಕಾರಣಕ್ಕೆ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ: ಸಿಎಂ ಬೊಮ್ಮಾಯಿ
ಸ್ವಚ್ಛ ಭಾರತ, ಡಿಜಿಟಲ್ ಇಂಡಿಯಾ, ಕೋವಿಡ್ ಲಸಿಕೆ ಹೀಗೆ ಪ್ರತಿಯೊಂದು ಮಜಲುಗಳಲ್ಲಿ ಕೆಲವರು ಅಪಹಾಸ್ಯ ಮಾಡಿದ್ದರು. ಆದರೆ ಭಾರತದ ಈ ಸಾಧನೆಯ ಬಗ್ಗೆ ಜಗತ್ತಿನಲ್ಲಿ ಈಗ ಚರ್ಚೆ ನಡೆದಿದೆ. ಯುವಶಕ್ತಿಯನ್ನು ಕಟ್ಟಿಕೊಂಡು ದೇಶದಲ್ಲಿ ವಿಭಿನ್ನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ದೇಶದ ಬೇರೆ ಬೇರೆ ಭೌಗೋಳಿಕ ಪ್ರದೇಶಗಳ ಯುವಕರ ತಂಡಗಳು ಬಂದಿವೆ. ಇಲ್ಲಿನ ಸ್ಪರ್ಧೆಯಲ್ಲಿ ಯಾರೇ ಗೆದ್ದರೂ ಅಂತಿಮವಾಗಿ ಭಾರತವೇ ಗೆಲ್ಲುತ್ತದೆ. ಆದ್ದರಿಂದ ಯುವಜನೋತ್ಸವದಲ್ಲಿ ಭಾಗವಹಿಸುವ ತಂಡಗಳು ವಿಕಸಿತ ಭಾರತ ಸಮರ್ಥ ಭಾರತವನ್ನು ಗಮನದಲ್ಲಿಟ್ಟುಕೊಂಡು ದೇಶವನ್ನು ಮುನ್ನಡೆಸಬೇಕು ಎಂದು ಕರೆ ನೀಡಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.