Basavaraj Bommai : ಏಪ್ರಿಲ್ 05 ರಂದು ರಾಜ್ಯಕ್ಕೆ ಪಿಎಂ ಮೋದಿ ಭೇಟಿ : ಸಿಎಂ ಬೊಮ್ಮಾಯಿ

ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ

Written by - Prashobh Devanahalli | Last Updated : Mar 26, 2022, 02:25 PM IST
  • ಏಪ್ರಿಲ್ 05 ರಂದು ಪಿಎಂ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ
  • ಏಪ್ರಿಲ್ 01 ರಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ
Basavaraj Bommai : ಏಪ್ರಿಲ್ 05 ರಂದು ರಾಜ್ಯಕ್ಕೆ ಪಿಎಂ ಮೋದಿ ಭೇಟಿ : ಸಿಎಂ ಬೊಮ್ಮಾಯಿ title=

ಹುಬ್ಬಳ್ಳಿ :  ಏಪ್ರಿಲ್ 05  ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ(Basavaraj Bommai), ಇದಲ್ಲದೆ ಏಪ್ರಿಲ್ 01 ರಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅವರು ಕ್ಷೀರ ಅಭಿವೃದ್ಧಿ ಬ್ಯಾಂಕ್ ಉದ್ಘಾಟನೆ ಸಹಕಾರಿ ರಂಗದಲ್ಲಿ ಹಲವಾರು ಸುಧಾರಣೆಗಳನ್ನು ತರಬೇಕೆಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೀರ ಅಭಿವೃದ್ಧಿ ಬ್ಯಾಂಕ್ ಪ್ರಾರಂಭ ಮಾಡಲು ಉದ್ದೇಶಿಸಿದೆ. ಅದರ ಲಾಂಛನದ ಉದ್ಘಾಟನೆ ಮಾಡಲು ಬೃಹತ್ ಸಭೆ ಏರ್ಪಾಡು ಮಾಡಲಾಗುತ್ತಿದೆ. ಕ್ಷೀರ ಕ್ಷೇತ್ರದಲ್ಲಿ ಆರ್ಥಿಕ ಅಭಿವೃದ್ಧಿಗೆ ಇಂಬು ನೀಡಿ ಆರ್ಥಿಕ ಕ್ರಾಂತಿಯಾಗಲಿದೆ. ಇದರಿಂದ ರೈತರ ಆದಾಯ ಭಾರಿ ಪ್ರಮಾಣದಲ್ಲಿ ಹೆಚ್ಚಾಗಲಿದೆ. ರೈತರಿಗೆ ಆರ್ಥಿಕ ಸಹಾಯ ದೊರೆಯಲು ನೆರವಾಗಲಿದೆ. ಲಾಂಛನ ಹಾಗೂ ಯಾಶಸ್ವಿನಿ ಯೋಜನೆಯ ಉದ್ಘಾಟನೆಯನ್ನು ಅಮಿತ್ ಷಾ ಅವರು ನೆರವೇರಿಸಲಿದ್ದಾರೆ ಎಂದರು.  

ಇದನ್ನೂ ಓದಿ : Electricity Price Hike : ಏಪ್ರಿಲ್ 1 ರಿಂದ ವಿದ್ಯುತ್ ಗ್ರಾಹಕರಿಗೆ ಕಾದಿದೆಯಾ ಕರೆಂಟ್ ಶಾಕ್?

ನಂತರ ಸಚಿವ ಸಂಪುಟ ವಿಸ್ತರಣೆ(Cabinet Expansion)ಯ ಬಗ್ಗೆ ಮಾತನಾಡಿದ ಅವರು, ದೆಹಲಿಯಲ್ಲಿ  ವರಿಷ್ಠರೊಂದಿಗೆ ಚರ್ಚೆಯಾಗಬೇಕು. ವರಿಷ್ಠರು ಕರೆದಾಗ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News