ಪ್ರಧಾನಿಗಳೇ ನಿಮ್ಮ ಭೇಟಿ ವಿಕಾಸಕ್ಕೋ.. ವಿನಾಶಕ್ಕೋ..? : ಸಿದ್ದರಾಮಯ್ಯ ಪ್ರಶ್ನೆ

ರಾಜ್ಯಕ್ಕೆ ನರೇಂದ್ರ ಮೋದಿ ಆಗಮನ ಬಿಜೆಪಿಗೆ ಬಲ ತುಂಬಿದ್ರೆ, ವಿರೋಧ ಪಕ್ಷಗಳ ಟೀಕೆ ಟಿಪ್ಪಣಿಗೆ ಗುರಿಯಾಗಿದೆ. ಪ್ರಧಾನ ಮಂತ್ರಿ ವಿರುದ್ಧ ಟ್ಟೀಟ್‌ ಪ್ರಹಾರ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನ ಮಂತ್ರಿಗಳೇ ನಿಮ್ಮ ಭೇಟಿ ವಿಕಾಸಕ್ಕೋ ವಿನಾಶಕ್ಕೋ ಎಂದು ಪ್ರಶ್ನೆ ಮಾಡಿದ್ದಾರೆ.

Written by - Krishna N K | Last Updated : Sep 2, 2022, 10:55 AM IST
  • ರಾಜ್ಯಕ್ಕೆ ನರೇಂದ್ರ ಮೋದಿ ಆಗಮನ
  • ಪ್ರಧಾನ ಮಂತ್ರಿ ವಿರುದ್ಧ ಟ್ಟೀಟ್‌ ಪ್ರಹಾರ
  • ಪ್ರಧಾನ ಮಂತ್ರಿಗಳೇ ನಿಮ್ಮ ಭೇಟಿ ವಿಕಾಸಕ್ಕೋ ವಿನಾಶಕ್ಕೋ
ಪ್ರಧಾನಿಗಳೇ ನಿಮ್ಮ ಭೇಟಿ ವಿಕಾಸಕ್ಕೋ.. ವಿನಾಶಕ್ಕೋ..? : ಸಿದ್ದರಾಮಯ್ಯ ಪ್ರಶ್ನೆ title=

ಬೆಂಗಳೂರು : ರಾಜ್ಯಕ್ಕೆ ನರೇಂದ್ರ ಮೋದಿ ಆಗಮನ ಬಿಜೆಪಿಗೆ ಬಲ ತುಂಬಿದ್ರೆ, ವಿರೋಧ ಪಕ್ಷಗಳ ಟೀಕೆ ಟಿಪ್ಪಣಿಗೆ ಗುರಿಯಾಗಿದೆ. ಪ್ರಧಾನ ಮಂತ್ರಿ ವಿರುದ್ಧ ಟ್ಟೀಟ್‌ ಪ್ರಹಾರ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನ ಮಂತ್ರಿಗಳೇ ನಿಮ್ಮ ಭೇಟಿ ವಿಕಾಸಕ್ಕೋ ವಿನಾಶಕ್ಕೋ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಸರಣಿ ಟ್ಟೀಟ್‌ ಮಾಡಿರುವ ಅವರು, ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರಿಗೆ ಮಂಗಳೂರಿಗೆ ಸ್ವಾಗತ. ನಿಮ್ಮ ಪ್ರವಾಸ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಎಂದು ನೀವು ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಎಂದು ಟೀಕಿಸಿದ್ದಾರೆ.

ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ನಿಮ್ಮ ನಡೆ ದ್ರೋಹವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ. ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ವಿಕಾಸವೋ? ವಿನಾಶನೋ ಎಂದು ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ಗುಡುಗಿದ್ದಾರೆ.

ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದ ಮನೆಗಳು, ನೆರೆಯಲ್ಲಿ ಕೊಚ್ಚಿಹೋದ ರೈತರ ಬೆಳೆಗಳು. ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಕರಾವಳಿ ಮೀನುಗಾರರ ಮೇಲೆ ಸಿಆರ್ ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ.
ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್ ಗಳಿಗೆ ಮುಕ್ತ ಪರವಾನಿಗೆ ನೀಡಲಾಗಿದೆ ಎಂದು ದೂರಿದ್ದಾರೆ.
 

Trending News