ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ
Cauvery water dispute: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ಸ್ವಂತ ಲಾಭಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲವೆಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಸೋಮವಾರ ಬೆಂಗಳೂರು ಬಂದ್‍ಗೆ ಕರೆ ನೀಡಿವೆ. ಸೆ.29ರಂದು ಕರ್ನಾಟಕ ಬಂದ್‍ಗೂ ಕರೆ ನೀಡಲಾಗಿದೆ. ಇದೆಲ್ಲದವರ ಮಧ್ಯೆಯೇ ಕಾವೇರಿ ನದಿ ನೀರಿನ ವಿಚಾರದಲ್ಲಿ ಕನ್ನಡಿಗರಿಗೆ ಮತ್ತೊಂದು ಶಾಕ್ ಉಂಟಾಗಿದ್ದು, ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಈ ವಿವಾದದ ಇತ್ಯರ್ಥಕ್ಕೆ ಪ್ರಧಾನಿ ಮೋದಿಯವರು ಮಧ್ಯಸ್ಥಿಕೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ಸ್ವಂತ ಲಾಭಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲ. ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು’ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮುಂದುವರೆದ ಅನ್ನದಾತರ ಆಕ್ರೋಶ
ಕಾವೇರಿ ಪ್ರತಿಭಟನೆಯಲ್ಲಿ ಊಟ ತಿಂಡಿಯ ವ್ಯವಸ್ಥೆ
ಕಾವೇರಿ ವಿಷಯದ ವಾದಮಂಡನೆಗೆ ಮೊದಲಿನಿಂದಲೂ ಇರುವ ಕಾನೂನೂ ತಂಡವೇ ಈಗಲೂ ಇದ್ದು, ಎಲ್ಲಾ ಪಕ್ಷದ ಸರ್ಕಾರದ ಅವಧಿಯಲ್ಲಿ ಇದ್ದ ತಂಡವೇ ಆಗಿದೆ’ ಎಂದು ಹೇಳಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.