ಬೆಂಗಳೂರಿಗೆ ‘ನಮೋ’: ರೈಲು ಸೇವೆಯಲ್ಲಿ ವ್ಯತ್ಯಯ, ಟ್ರಾಫಿಕ್ ಜಾಮ್, ಕೆಲ ರಸ್ತೆಗಳು ಬಂದ್!

ಇಂದು ಪ್ರಧಾನಿ ಮೋದಿಯವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿಯ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಲಿದ್ದಾರೆ.

Written by - Puttaraj K Alur | Last Updated : Nov 11, 2022, 09:26 AM IST
  • ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ
  • ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಹಲವು ರೈಲು ಸೇವೆಯಲ್ಲಿ ವ್ಯತ್ಯಯ ಸಾಧ‍್ಯತೆ
  • ಸಂಚಾರ & ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ರಸ್ತೆಗಳಲ್ಲಿ ಸಂಚಾರಿ ಮಾರ್ಗಗಳ ಬದಲಾವಣೆ
ಬೆಂಗಳೂರಿಗೆ ‘ನಮೋ’: ರೈಲು ಸೇವೆಯಲ್ಲಿ ವ್ಯತ್ಯಯ, ಟ್ರಾಫಿಕ್ ಜಾಮ್, ಕೆಲ ರಸ್ತೆಗಳು ಬಂದ್! title=
ಬೆಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿಯ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ ಸೇರಿ ಹತ್ತು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ.

ರೈಲು ಸೇವೆಯಲ್ಲಿ ವ್ಯತ್ಯಯ

ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಇಂದು ರೈಲು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆಯಿದೆ. ಕಾರ್ಯಕ್ರಮದ ಹಿನ್ನೆಲೆ KSR - ಚನ್ನಪಟ್ಟಣ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ರೈಲ್ವೆ ಅಧಿಕಾರಿಗಳು ರದ್ದುಗೊಳಿಸಿದ್ದಾರೆ. ಕಣ್ಣೂರ್ - KSR ಎಕ್ಸ್‌ಪ್ರೆಸ್‌ ರೈಲು ಮೆಜೆಸ್ಟಿಕ್ ಬದಲಿಗೆ ಯಶವಂತಪುರದಲ್ಲೇ ಹಾಲ್ಟ್ ಆಗಲಿದೆ. ಅರಸಿಕೆರೆ - KSR, ಕೋಲಾರ - KSR (Demu Express) ರೈಲು ಕೂಡ ರದ್ದಾಗಿದೆ. ಮೈಸೂರು - KSR ಎಕ್ಸ್‌ಪ್ರೆಸ್‌ ಮೆಜೆಸ್ಟಿಕ್ ಬದಲು ನಾಯಂಡನಹಳ್ಳಿ ಕಡೆಯ ನಿಲ್ದಾಣವಾಗಿ ಬದಲಾವಣೆ ಮಾಡಲಾಗಿದೆ.

KSR - ಹಿಂದೂಪುರ Menu Express ಇಂದಿನ Time Table ಅನುಸರಿಸಿ ರದ್ದಾಗುವ ಸಾಧ್ಯತೆ ಇದೆ. ಜನಶತಾಬ್ದಿ, ರಾಜ್ಯರಾಣಿ ಎಕ್ಸ್‌ಪ್ರೆಸ್‌, ವಿಶ್ವಮಾನವ ರೈಲು ಸೇವೆಗಳು ಅಂದಾಜು 2 ತಾಸು ವಿಳಂಬದ ಬಳಿಕ ಸೇವೆಗೆ ಲಭ್ಯವಾಗಲಿವೆ ಎಂದು ತಿಳಿದುಬಂದಿದೆ.  

ಇದನ್ನೂ ಓದಿ: Basavaraj Bommai : 'ನನಗೆ ಆಶ್ಚರ್ಯವಾಗಿದೆ ಮಾನ್ಯ ಸತೀಶ್ ದುಡುಕುವವರಲ್ಲ'

ಕೆಲ ರಸ್ತೆಗಳು ಬಂದ್..!

ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆ ಇಂದು ಕೆಲ ರಸ್ತೆಗಳು ಬಂದ್ ಆಗಲಿವೆ. ಸಂಚಾರ ಹಾಗೂ ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ರಸ್ತೆಗಳಲ್ಲಿ ಸಂಚಾರಿ ಮಾರ್ಗಗಳ ಬದಲಾವಣೆ ಮಾಡಲಾಗಿದೆ. ಇಂದು ಬೆಳಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಪೊಲೀಸ್ ಇಲಾಖೆಯು ವಿವಿಧ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರ ಬಂದ್ ಮಾಡಿದೆ. ಸಿಟಿಓ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ಸರ್ಕಲ್, ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆಯಲ್ಲಿ ಸಂಚಾರ ನಿರ್ಬಂಧವಿರಲಿದೆ.

ಏರ್‍ಪೋರ್ಟ್ ಎಲಿವೇಟೆಡ್ ಕಾರಿಡಾರ್ ರಸ್ತೆ ಬಂದ್ ಆಗಿರಲಿದೆ. ಶೇಷಾದ್ರಿ ರಸ್ತೆಯಲ್ಲಿ ಮಹಾರಾಣಿ ಬ್ರಿಡ್ಜ್‍ನಿಂದ ರೈಲ್ವೆ ಸ್ಟೇಷನ್ ಪ್ರವೇಶ ದ್ವಾರದವರೆಗೆ ಮತ್ತು ಕೆ.ಜಿ.ರಸ್ತೆಯಲ್ಲಿ ಶಾಂತಲಾ ಜಂಕ್ಷನ್​ನಿಂದ ಮೈಸೂರು ಬ್ಯಾಂಕ್‌ ಸರ್ಕಲ್​ವರೆಗೆ, ವಾಟಾಳ್ ನಾಗರಾಜ್ ರಸ್ತೆಯಲ್ಲಿ ಕೋಡೆ ಅಂಡರ್‍ ಪಾಸ್‍ನಿಂದ ಪಿಎಫ್‍ವರೆಗೆ ಮತ್ತು ಇಂಟರ್‌ನ್ಯಾಷನಲ್ ಏರ್ಪೋಟ್‍ನ ಸುತ್ತಮತ್ತಲಿನ ರಸ್ತೆಗಳಲ್ಲಿ ಸಂಚಾರ ಬಂದ್ ಆಗಿರಲಿದೆ.

ಟ್ರಾಫಿಕ್ ಜಾಮ್ ಸಾಧ‍್ಯತೆ

ಇನ್ನು ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಬೆಂಗಳೂರಿನಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯಿದೆ. ಈಗಾಗಲೇ ಮೋದಿ ಸಂಚರಿಸುವ ರಸ್ತೆಗಳನ್ನು ಪೊಲೀಸರು ಬಂದ್ ಮಾಡಿದ್ದಾರೆ. ಟ್ರಾಫಿಕ್ ಸಮಸ್ಯೆ ಆಗದಂತೆ ಪರ್ಯಾಯ ಮಾರ್ಗಗಳನ್ನು ಸಂಚಾರಿ ಪೊಲೀಸರು ಸೂಚಿಸಿದ್ದಾರೆ. ನಿರ್ಬಂಧಿಸಲಾದ ರಸ್ತೆಗಳಲ್ಲಿ ಪ್ರಯಾಣ ಬೆಳೆಸುವ ಪ್ರಯಾಣಿಕರಿಗೆ ಮನವಿ ಈ ಬಗ್ಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: “ಬಿಜೆಪಿಯವರಿಗೆ ನಂಬಿಕೆ ಇರುವುದು ಮನುಸ್ಮೃತಿ ಮೇಲೆ”

ಮೈಸೂರು ಬ್ಯಾಂಕ್‌ ವೃತ್ತದಿಂದ ಪ್ಯಾಲೇಸ್ ರಸ್ತೆಗೆ ಬರುವ ವಾಹನ ಸವಾರರು ಕೆ.ಜಿ.ರಸ್ತೆಯ ಮೂಲಕ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅದೇ ರೀತಿ ಎಲ್‌ಆರ್‌ಡಿಇ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಂಚರಿಸುವವರು ರಾಜಭವನ ರಸ್ತೆ ಮೂಲಕ ಮುಂದೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಟ್ರಿಲೈಟ್ ಜಂಕ್ಷನ್‍ನಿಂದ ಮೌರ್ಯ ಜಂಕ್ಷನ್ ಮೂಲಕ ಬರುವವರು ರೇಸ್‌ ವ್ಯೂವ್ ಸರ್ಕಲ್‌ನಲ್ಲಿ - ಶಿವಾನಂದ ಸರ್ಕಲ್‌ನಲ್ಲಿ ಎಡತಿರುವು ನೆಹರು ಸರ್ಕಲ್ ಮೂಲಕ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಕೆಕೆ ರಸ್ತೆ ಮೂಲಕ ವಿಂಡ್ಸ್‌ ಮ್ಯಾನರ್ ವೃತ್ತಕ್ಕೆ ತೆರಳುವ ವಾಹನ ಸವಾರರು ಶಿವಾನಂದ ಸರ್ಕಲ್‌ನಲ್ಲಿ - ನೆಹರು ಸರ್ಕಲ್‌ ಮೂಲಕ ಪ್ರಯಾಣಿಸಬಹುದಾಗಿದೆ. BHEL ಸರ್ಕಲ್‌ನಿಂದ ಮೇಕ್ರಿ ಸರ್ಕಲ್ ಕಡೆಗೆ ಬರುವ ವಾಹನ ಸವಾರರು ಸದಾಶಿವನಗರ ಪೊಲೀಸ್ ಠಾಣೆ - ಮಾರಮ್ಮ ಸರ್ಕಲ್ - ಮಾರ್ಗೋಸ ರಸ್ತೆ ಮೂಲಕ‌ ಹೋಗಬಹುದು. ಭಾಷ್ಯಂ ಸರ್ಕಲ್‌ನಿಂದ ಕಾವೇರಿ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಮಲ್ಲೇಶ್ವರ 18ನೇ ಕ್ರಾಸ್ - ಮಾರ್ಗೋಸ್ ರಸ್ತೆಯ ಮೂಲಕ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕ್ವೀನ್ಸ್ ವೃತ್ತದಿಂದ ಸಿಟಿಓ ಕಡೆಗೆ ಬರುವ ವಾಹನ ಸವಾರರು ಸಿದ್ದಲಿಂಗಯ್ಯ ವೃತ್ತ - RRMR ರಸ್ತೆಯ ಮೂಲಕ ಸಂಚಾರ ಮಾಡಬಹುದಾಗಿದೆ. ಬಾಳೇಕುಂದ್ರಿ ಜಂಕ್ಷನ್‌ನಿಂದ ಮೆಜೆಸ್ಟಿಕ್ ಕಡೆಗೆ ಸಂಚರಿಸುವ ವಾಹನಗಳು ಕನ್ನಿಂಗ್ ಹ್ಯಾಂ ರಸ್ತೆ ಮೂಲಕ ಸಂಚರಿಸಲು‌ ಅವಕಾಶ ನೀಡಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News