ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ: ಸಕಲ ಸಿದ್ಧತೆ, ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ
ಪ್ರಧಾನಿ ಮೋದಿಯವರು ಇಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟಿಸಲಿದ್ದಾರೆ.
ಬೆಂಗಳೂರು: ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು(ನ.11) ಪ್ರಧಾನಿ ನರೇಂದ್ರ ಮೋದಿಯವರು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉದ್ಘಾಟಿಸಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಯವರ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಸಂಚಾರ ವ್ಯವಸ್ಥೆಯಲ್ಲಿಯೂ ಕೆಲವು ಮಾರ್ಪಾಡು ಮಾಡಲಾಗಿದೆ.
ದೆಹಲಿಯಿಂದ ಶುಕ್ರವಾರ ಬೆಳಗ್ಗೆ 10.05ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಬಳಿಕ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ 10.30ಕ್ಕೆ ವಿಧಾನಸೌಧದ ಶಾಸಕರ ಭವನಕ್ಕೆ ಆಗಮಿಸುವ ಅವರು, ಶಾಸಕರ ಭವನದ ಅವರಣದಲ್ಲಿರುವ ಸಂತ ಶ್ರೇಷ್ಠ ಕನಕದಾಸ ಹಾಗೂ ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಿದ್ದಾರೆ.
ಇದನ್ನೂ ಓದಿ: Viral Video : ಇಳಿವಯಸ್ಸಲ್ಲೂ ಭರ್ಜರಿ ಸ್ಟೆಪ್ಸ್ ಹಾಕಿದ ಅಜ್ಜಿ, ಏನ್ ಎನರ್ಜಿ ಗುರು!
ನಂತರ ನೇರವಾಗಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ, ‘ವಂದೇ ಭಾರತ್’ ಮತ್ತು ‘ಭಾರತ್ ಗೌರವ್ ಕಾಶಿ ದರ್ಶನ’ ರೈಲುಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ. ಬಳಿಕ ರೈಲ್ವೆ ನಿಲ್ದಾಣದಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅವರು ಅನಾವರಣಗೊಳಿಸಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.
Viral News: ಕೂದಲು ಉದುರುತ್ತಿದೆ ಎಂದು ಮನನೊಂದ ಯುವಕ ಆತ್ಮಹತ್ಯೆಗೆ ಶರಣು!
ಪ್ರಧಾನಿ ಮೋದಿ ಸಂಚರಿಸಲಿರುವ ಮಾರ್ಗದಲ್ಲಿ ಭದ್ರತೆಗಾಗಿ 6500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಆಯುಕ್ತರು, ಜಂಟಿ ಆಯುಕ್ತರು, ಡಿಸಿಪಿಗಳು, ಎಸಿಪಿ, ಇನ್ಸ್‌ಪೆಕ್ಟರ್, ಸಬ್‌ಇನ್ಸ್‌ಪೆಕ್ಟರ್ ಸೇರಿ ಬಹುತೇಕ ಸಿಬ್ಬಂದಿ ಭದ್ರತಾ ಕರ್ತವ್ಯ ನಿರ್ವಹಿಸಲಿದ್ದಾರೆ. 20 KSRP ಹಾಗೂ CAR ತುಕಡಿಗಳು ಕಾರ್ಯ ನಿರ್ವಹಿಸಲಿವೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬೆಂಗಳೂರು ರೈಲ್ವೆ ನಿಲ್ದಾಣದಿಂದ ಸಂಚರಿಸಬೇಕಿದ್ದ ಹಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ತಿಳಿದುಬಂದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.