ಕಲ್ಪತರು ನಾಡಿಗೆ ಇಂದು ಪ್ರಧಾನಿ ಮೋದಿ; ರೈತರಿಗೆ ಸಿಗಲಿದೆ ಗಿಫ್ಟ್!

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

Last Updated : Jan 2, 2020, 06:32 AM IST
ಕಲ್ಪತರು ನಾಡಿಗೆ ಇಂದು ಪ್ರಧಾನಿ ಮೋದಿ; ರೈತರಿಗೆ ಸಿಗಲಿದೆ ಗಿಫ್ಟ್! title=

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕಲ್ಪತರು ನಾಡು ತುಮಕೂರುಗೆ ಆಗಮಿಸಲಿದ್ದು, ಕಿಸಾನ್ ಸಮ್ಮಾನ್ ಯೋಜನೆಯ 4 ನೇ ಹಂತವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಸುಮಾರು 1 ಲಕ್ಷ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ರೈತರಿಗೆ ಭರ್ಜರಿ ಉಡುಗೊರೆ ಸಿಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರು ಪ್ರಧಾನಮಂತ್ರಿಯಾದ ಬಳಿಕ ಎರಡನೇ ಬಾರಿಗೆ ತುಮಕೂರಿಗೆ ಆಗಮಿಸುತ್ತಿದ್ದಾರೆ. 

ಇಂದು ಸಂಜೆ 4ಗಂಟೆ ವೇಳೆಗೆ ಪ್ರಧಾನಿಗಳು ಆಗಮಿಸಲಿದ್ದು, ಮೊದಲು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಶ್ರೀಗಳ ಗದ್ದುಗೆ ದರ್ಶನ ಮಾಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಸಿದ್ದಗಂಗಾ ಮಠದಲ್ಲಿ ಡಾ. ಶಿವಕುಮಾರ್ ಸ್ವಾಮೀಜಿ ಅವರಿಗೆ ಸಂಬಂಧಿಸಿದಂತೆ ವಸ್ತು ಸಂಗ್ರಹಾಲಯ ನಿರ್ಮಾಣ ಕಟ್ಟಡದ ಶಂಕು ಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

ಮಠದ ಖಾಸಗಿ ಕಾರ್ಯಕ್ರಮದಲ್ಲಿ ಅಯ್ದಾ ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಅಯ್ದಾ ಕೆಲ ಗಣ್ಯರು ಮಾತ್ರ ಮಠದ ಕಾರ್ಯದಲ್ಲಿ ಭಾಗವಹಿಸಲ್ಲಿದ್ದಾರೆ. 

ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮ ಮುಗಿದ ಬಳಿಕ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ  ರೈತರ ಸಮಾವೇಶದಲ್ಲಿ  ಅಭಿವೃದ್ಧಿ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ನಂತರ ಕಾರ್ಯಕ್ರಮದಲ್ಲಿ  ವಿವಿಧ ರಾಜ್ಯಗಳ ಪ್ರಗತಿ ಪರ ರೈತರಿಗೆ ಪ್ರಶಸ್ತಿ ಪ್ರದಾನ ನೆರವೇರಿಸಲಿದ್ದಾರೆ.

Trending News