ಬೆಂಗಳೂರು: ಚೀನಾದೊಂದಿಗೆ ನಡೆದ ಘರ್ಷಣೆಯಲ್ಲಿ ನಮ್ಮ ಯೋಧರು ಹುತಾತ್ಮರಾಗಿದ್ದಾರೆ.‌ ಯೋಧರ ಶೌರ್ಯ, ತ್ಯಾಗ, ಬಲಿದಾನ ಸದಾ ಸ್ಮರಣೀಯ. ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ನಮ್ಮ ಸೇನೆ ಅತ್ಯಂತ ಶಕ್ತಿಶಾಲಿಯಾಗಿದೆ. ಆದರೆ, ಗಡಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮೌನವಾಗಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿಗಳೂ ಆದ ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಇದೇ ವೇಳೆ ಸಿದ್ದರಾಮಯ್ಯ ಅವರು, ಕರ್ನಾಟಕ ಸರ್ಕಾರ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲು ಹೊರಟಿದೆ. ಇದು ಮುಂದೆ ಕರಾಳ ಶಾಸನವಾಗಲಿದೆ. ಕಾಂಗ್ರೆಸ್ ಮೊದಲಿನಿಂದಲೂ ಗೇಣಿದಾರರನ್ನು ರಕ್ಷಿಸಿಕೊಂಡು ಬಂದಿರುವ ಪಕ್ಷ. ಈಗ ರೈತರಿಗೆ ಅನ್ಯಾಯವಾಗುತ್ತಿರುವ ಸರ್ಕಾರದ ತೀರ್ಮಾದ ವಿರುದ್ಧ ಪಕ್ಷದ ವತಿಯಿಂದ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು. ಇದಕ್ಕೆ ಶಾಸಕರು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.


ಕೃಷಿ ಭೂಮಿ ದುಡ್ಡಿರುವವರ ಪಾಲಾಗಲು ಅವಕಾಶ ನೀಡಿರುವ ತಿದ್ದುಪಡಿ ಕೈಬಿಡುವಂತೆ ಸಿದ್ದರಾಮಯ್ಯ ಪತ್ರ


ಪೆಟ್ರೋಲ್, ಡೀಸೆಲ್‌ ಬೆಲೆ ನಿತ್ಯ ಏರಿಕೆಯಾಗುತ್ತಿದೆ.  ಕಚ್ಛಾ ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿದಿದೆ. ಇದರಿಂದ ಪೆಟ್ರೋಲ್, ಡೀಸೆಲ್‌ ಲೀಟರ್ ಗೆ 25-30 ರೂ.‌ಪ್ರಕಾರ ಮಾರಾಟವಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರ ದರ ಏರಿಕೆ ಮೂಲಕ ಮಧ್ಯಮ ವರ್ಗದವರನ್ನು ಬಲಿ ಹಾಕಲು ಹೊರಟಿದೆ ಎಂದರು.


ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಪ್ರಧಾನಿ ಮೋದಿಯವರು ದೇಶದ ಆರ್ಥಿಕತೆ ಮತ್ತು ಜನರ ಆರೋಗ್ಯವನ್ನು ಹಾಳು ಮಾಡಲು ಹೊರಟಿದೆ. ಕೇಂದ್ರ, ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಜೈಲ್ ಭರೋ ಚಳವಳಿ ನಡೆಸಲಾಗುವುದು ಎಂದರು.


ಕೆಪಿಸಿಸಿ ಅಧ್ಯಕ್ಷರಾಗಿರಯವ ಡಿ.ಕೆ. ಶಿವಕುಮಾರ್ (DK Shivakumar) ಅವರ ಪದಗ್ರಹಣಕ್ಕೆ ಈಗ ದಿನಾಂಕ ನಿಗದಿಯಾಗಿದೆ. ಜುಲೈ 2 ರಂದು ಪದಗ್ರಹಣಕ್ಕೆ ಸಿದ್ಧತೆ ನಡೆಯುತ್ತಿದೆ. ಶಾಸಕರು ಈ ಸಂಬಂಧ ತಮ್ಮ ಕ್ಷೇತ್ರಗಳಲ್ಲಿ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.


ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಕೆ.ಹರಿಪ್ರಸಾದ್, ನಾಸಿರ್ ಆಹ್ಮದ್ ಕಣಕ್ಕೆ


ವಿಧಾನ ಪರಿಷತ್ ಚುನಾವಣೆಗೆ ಆಭ್ಯರ್ಥಿಗಳಾಗಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್, ನಸೀರ್ ಅಹಮದ್ ಅವರಿಗೆ ಆಭಿನಂದನೆಗಳು. ಅವರನ್ನು ಆಯ್ಕೆ ಮಾಡಿರುವ ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕೃತಜ್ಞತೆಗಳು ಎಂದು ಹೇಳಿದರು.