ಬೆಂಗಳೂರು: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಎಪ್ರಿಲ್ 7ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಪಿ. ಮುರುಳಿಧರ ರಾವ್ ಹೇಳಿದ್ದಾರೆ.
ಚುನಾವಣಾ ಪ್ರಚಾರದ ಪ್ರಯುಕ್ತ ಎಪ್ರಿಲ್ 7ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ಬರಲಿದ್ದು, ಮೈಸೂರು ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕೇಂದ್ರ ಸರ್ಕಾರದ ಸಾಧನೆಗಳು, ಜನಪರ ಯೊಜನೆಗಳನ್ನು ಮುಂದಿಟ್ಟು ನಾವು ಜನರ ಮುಂದೆ ಹೋಗುತ್ತಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 25 ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಂಡ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿದೆ ಎಂದು ವಾಗ್ಧಾಳಿ ನಡೆಸಿದ ಮುರುಳಿಧರ ರಾವ್, ರಾಜ್ಯದಲ್ಲಿ ಸರ್ಕಾರ ರಚಿಸಿರುವ ಮೈತ್ರಿ ಪಕ್ಷದಲ್ಲಿ ಗೊಂದಲ, ಜಗಳ ಮುಂದುವರೆದಿದೆ. ಇಂತಹ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.