ಪೋಕ್ಸೊ ಕಾಯ್ದೆ: ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ ನಡೆಸಿ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ಬೆಂಗಳೂರು: ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ ನಡೆಸಿ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮುಂದುವರಿಸಿತು.
ಇದನ್ನೂ ಓದಿ: ಅಧಿಕಾರಿಗಳ ಬೇಜವಾಬ್ದಾರಿಯನ್ನು ಸರ್ಕಾರ ಸುತಾರಾಂ ಸಹಿಸಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
ವಿಚಾರಣೆ ವೇಳೆ ಒಡನಾಡಿ ಸೇವಾ ಸಂಸ್ಥೆ ಪರ ವಕೀಲ ಡಿ.ಸಿ.ಶ್ರೀನಿವಾಸ್ ವಾದ ಮಂಡಿಸಿದ್ದು, ಆರೋಪಿ ಶರಣರು ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನು ನೀಡಿದರೆ ಸಂತ್ರಸ್ತ ಬಡ ಮಕ್ಕಳಿಗೆ ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿರುವ ಶರಣರ ನಡೆ ಮ್ಯಾಜಿಸ್ಟ್ರೇಟರ ಮುಂದೆ ಬಾಲಕಿಯರು ನೀಡಿರುವ ಹೇಳಿಕೆಯಲ್ಲಿ ಸಂಪೂರ್ಣ ಬಿಂಬಿತವಾಗಿದೆ. ನ್ಯಾಯಪೀಠ ಇದನ್ನು ಗಂಭೀರವಾಗಿ ಪರಿಗಣಿಸಬೇಕು‘ ಎಂದು ಕೋರಿದರು. ವಾದ–ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದೆ
ಇದನ್ನೂ ಓದಿ: ಕರ್ನಾಟಕ 50: 68 ಸಾಧಕರು 10 ಸಂಘಗಳಿಗೆ ರಾಜ್ಯೋತ್ಸವ ಪ್ರಶಸ್ತಿ; ಬರ ಇದ್ದರೂ ಅದ್ದೂರಿ ಆಚರಣೆ
ಪ್ರಕರಣವೇನು?:
ಶಿವಮೂರ್ತಿ ಶರಣರ ವಿರುದ್ಧ ಪೊಕ್ಸೊ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012ಭಾರತೀಯ ದಂಡ ಸಂಹಿತೆ–1860, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ-1988, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆ–2015ರ ವಿವಿಧ ಕಲಂಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.