ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣ: ಮಠದ ಆವರಣ ಪರಿಶೀಲಿಸಿದ ಪೊಲೀಸರು!

 ಚಿತ್ರದುರ್ಗದ ಮಠದ ಮುರುಘಾಶರಣರ ವಿರುದ್ಧ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ವಿಚಾರವಾಗಿ ತನಿಖೆ ನಡೆಸಿರುವ ಪೊಲೀಸರು ಮುರುಘಾ ಮಠದ ಆವರಣದಲ್ಲಿ ಇಂದು ಸುಮಾರು ನಾಲ್ಕು ತಾಸುಗಳ ಕಾಲ ಸ್ಥಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Written by - Zee Kannada News Desk | Last Updated : Aug 29, 2022, 08:20 PM IST
  • ಸ್ಥಳ ಪರಿಶೀಲನೆ ವೇಳೆ ಪೊಲೀಸರು ಸಂತ್ರಸ್ತ ವಿದ್ಯಾರ್ಥಿನಿಯರಿಂದ ಮಾಹಿತಿಯನ್ನು ಪಡೆದಿದ್ದಾರೆ.
ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣ: ಮಠದ ಆವರಣ ಪರಿಶೀಲಿಸಿದ ಪೊಲೀಸರು!  title=
file photo

ಬೆಂಗಳೂರು: ಚಿತ್ರದುರ್ಗದ ಮಠದ ಮುರುಘಾಶರಣರ ವಿರುದ್ಧ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ವಿಚಾರವಾಗಿ ತನಿಖೆ ನಡೆಸಿರುವ ಪೊಲೀಸರು ಮುರುಘಾ ಮಠದ ಆವರಣದಲ್ಲಿ ಇಂದು ಸುಮಾರು ನಾಲ್ಕು ತಾಸುಗಳ ಕಾಲ ಸ್ಥಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಸ್ಥಳ ಪರಿಶೀಲನೆ ವೇಳೆ ಪೊಲೀಸರು ಸಂತ್ರಸ್ತ ವಿದ್ಯಾರ್ಥಿನಿಯರಿಂದ ಮಾಹಿತಿಯನ್ನು ಪಡೆದಿದ್ದಾರೆ. ಇದೆ ವೇಳೆ ಮಠದ ಆವರಣದಲ್ಲಿ ಜನಜಂಗುಳಿ ಉಂಟಾಗಿದ್ದರಿಂದಾಗಿ ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಹರಸಾಹಸ ಮಾಡಬೇಕಾಗಿ ಬಂತು. ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದ ಬಳಿಕ ಅವರನ್ನು ಪೋಲಿಸ್ ಬಂದೋಬಸ್ತ್ ಮೂಲಕ ಬಾಲಮಂದಿರಕ್ಕೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ : ಚಿತ್ರದುರ್ಗದ ಮಠದ ಮುರುಘಾಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಫ್ಐಆರ್ ದಾಖಲು!

ಮುರುಘಾಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನದ ವೇಳೆ ನ್ಯಾಯಾಧೀಶರ ಎದುರು ಸಂತ್ರಸ್ಥ ಬಾಲಕಿಯರು ಅಪರಾಧ ಪ್ರಕ್ರಿಯಾ ಸಂಹಿತೆ 164ರ ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಲಿದ್ದಾರೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News