POCSO Case : ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಡಿ ತನಿಖೆ ನಡೆಯುತ್ತಿದ್ದು, ಕೇಂದ್ರ ತನಿಖಾ ಸಂಸ್ಥೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಸಂಬಂಧಿಸಿದಂತೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಡಿ ಕೇಸ್ ದಾಖಲಾಗಿದ್ದು , ಇದೀಗ ಸಿಐಡಿ ಗೆ ವರ್ಗಾವಣೆಯಾಗಿ ತನಿಖೆ ನಡೆಯುತ್ತಿದೆ.  


ಕಳೆದ ಮಾರ್ಚ್ 14ರಂದು ಲೈಂಗಿಕ ದೌರ್ಜನ್ಯ ನೀಡುದ್ದಾರೆ ಎಂದು ಪೋಕ್ಸೋ ಕಾಯ್ದೆ ಅಡಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವ ನಗರದಲ್ಲಿ ಕೇಸ್ ದಾಖಲಾಗಿತ್ತು. ಇದಾದ ಬಳಿಕ ಕರ್ನಾಟಕ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ಗೆ ಹಸ್ತಾಂತರಿಸಿದ್ದರು. 


ಇದನ್ನು ಓದಿ : G7 ಶೃಂಗಸಭೆ : 3ನೇ ಬಾರಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಇಟಲಿಗೆ ಮೊದಲ ವಿದೇಶ ಪ್ರವಾಸ


ಪ್ರಕರಣ ದಾಖಲಾದ ಬಳಿಕ ಎಪ್ರಿಲ್ 12ರಂದು ಬಿ ಎಸ್ ಯಡಿಯೂರಪ್ಪ ಅವರು ಪೊಲೀಸ್ ವಿಚಾರಣೆಗೆ ಹಾಜರಾಗಿದ್ದರು. ಅಂದು ವಿಚಾರಣೆ ವೇಳೆ ದೂರು ನೀಡಿದ್ದ ಮಹಿಳೆಗೆ ಇತರರ ವಿರುದ್ಧ ದೂರು ನೀಡುವುದು ಒಂದು ಹವ್ಯಾಸವಾಗಿದೆ ಎಂದು ಪೊಲೀಸರು ತಿಳಿಸಿದರು. 


ಈ ಕೇಸಿಗೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಪ್ರಕರಣ ಸಂಬಂಧ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಅಷ್ಟೇ ಅಲ್ಲದೆದೂರುದಾರ ಮಹಿಳೆ ಸಹೋದರನಿಂದ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಶಶಾಂಕ್ ಸಿಂಗ್ ಎಂಬುವರು ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ಬಿ ಎಸ್ ಯೆಡಿಯೂರಪ್ಪ ಅವರನ್ನು ಬಂಧಿಸುವಂತೆ ಆದೇಶ ನೀಡುವಂತೆ ಮನವಿ ಮಾಡಿದ್ದಾರೆ.


ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್ ಸಂಬಂಧ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.  ವಕೀಲರ ‌ಮೂಲಕ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ. ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ ಇದಾಗಿದ್ದು, ಸಿಐಡಿ ಗೆ ವರ್ಗಾವಣೆ ಆಗಿದ್ದು ತನಿಖೆ ನಡೆಯುತ್ತಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ