ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. 


COMMERCIAL BREAK
SCROLL TO CONTINUE READING

ವಿಜಯಪುರದ ಸಿಂದಗಿ ಮೂಲದ ಪರಶುರಾಮ್ ವಾಗ್ಲೋರೆ(25) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈತನೇ ಗೌರಿ ಲಂಕೇಶ್ ಅವರಿಗೆ ಗುಂಡಿ ಹರಿಸಿದವ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇಂದು ಈತನನ್ನು ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಜೂನ್ 24 ರವರೆಗೆ ಎಸ್ಐಟಿ ವಶಕ್ಕೆ ನ್ಯಾಯಾಲಯ ನೀಡಿದೆ. 


ಗೌರಿ ಲಂಕೇಶ್ ಹಂತಕ ಪತ್ತೆಗೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರ


ಗೌರಿ ಲಂಕೇಶ್‌ ಹತ್ಯೆ ಸಂಬಂಧ, 15 ದಿನಗಳ ಹಿಂದೆ ವಿಜಯಪುರ ಜಿಲ್ಲೆಯಿಂದ ವಿಜಯ ಕಾಳೆ ಎಂಬುವನನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು ಆತನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ವಿಜಯಪುರ ಜಿಲ್ಲೆಯ ಕೆಲವು ಕಡೆ ತನಗೆ ಸಹಾಯ ಮಾಡಿದ್ದ ಇಬ್ಬರ ಬಗ್ಗೆ ಮಾಹಿತಿ ನೀಡಿದ್ದ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. 


ಗೌರಿ ಲಂಕೇಶ್ ಹತ್ಯೆ ಪ್ರಕರಣ: 650 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎಸ್ಐಟಿ


ಪರಶುರಾಮ್ ವಾಗ್ಮೋರೆ ಎಂಬಾತನನ್ನು ಜೂ.10ರಂದು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಆತನ ಜೊತೆಗೆ ಸುನಿಲ್ ಅಗಸರ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ಶಂಕಿಸಲಾಗಿದೆ. ಇದರಲ್ಲಿ ಪರಶುರಾಮನೇ ಗೌರಿ ಮೇಲೆ ಗುಂಡು ಹಾರಿಸಿದವ ಎಂದು ಎಸ್‌ಐಟಿ ಹೇಳುತ್ತಿದೆ.


ಭಯವಿಲ್ಲದ ತನಿಖಾ ಪತ್ರಕರ್ತೆ: ಗೌರಿ ಲಂಕೇಶ್


2017ರ ಸೆಪ್ಟೆಂಬರ್‌ 5 ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿತ್ತು. ಈ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ.