ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ತನಿಖೆ ಮಾಡಲು ಪೊಲೀಸರಿಗೆ ಮುಕ್ತ ಅಧಿಕಾರ: ಸಿಎಂ ಬೊಮ್ಮಾಯಿ

ಮುಂದಿನ ದಿನಗಳಲ್ಲಿ ಹತ್ಯೆಗೀಡಾದ  ಮಸೂದ್ ಹಾಗೂ ಫಾಜಿಲ್ ಮನೆಗೆ ಭೇಟಿ ನೀಡುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

Written by - Bhavishya Shetty | Last Updated : Aug 1, 2022, 12:36 PM IST
  • ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅಧಿಕಾರ
  • ಆರ್ ಟಿ ನಗರ ನಿವಾಸದ ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
  • ಪ್ರವೀಣ್‌ ನೆಟ್ಟಾರು ಮನೆಗೆ ಮಾಜಿ ಸಿಎಂ ಭೇಟಿ
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ತನಿಖೆ ಮಾಡಲು ಪೊಲೀಸರಿಗೆ ಮುಕ್ತ ಅಧಿಕಾರ: ಸಿಎಂ ಬೊಮ್ಮಾಯಿ title=
Praveen Nettaru

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎನ್‌ಐಎಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ತಾಂತ್ರಿಕ ಹಾಗೂ ಕಾಗದಪತ್ರಗಳ ಕೆಲಸ ಜಾರಿಯಲ್ಲಿದೆ. ಆದಷ್ಟು ಬೇಗನೆ ಪ್ರಕರಣವನ್ನು ಹಸ್ತಾಂತರ ಮಾಡಲಾಗುವುದು. ಅನೌಪಚಾರಿಕವಾಗಿ ಎನ್‌ಐಎಗೆ ಈಗಾಗಲೇ ತಿಳಿಸಲಾಗಿದೆ. ಕೇರಳ ಮತ್ತು ಮಂಗಳೂರಿನಲ್ಲಿ ಪ್ರಾಥಮಿಕ ಮಾಹಿತಿಯನ್ನು ಪಡೆಯುತ್ತಿದ್ದಾರೆ" ಎಂದು ತಿಳಿಸಿದರು. 

ಇದನ್ನೂ ಓದಿ: OPPO ತರುತ್ತಿದೆ ಅದ್ಭುತ ವೈಶಿಷ್ಟ್ಯಗಳಿರುವ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ .!

ಮುಂದಿನ ದಿನಗಳಲ್ಲಿ ಹತ್ಯೆಗೀಡಾದ  ಮಸೂದ್ ಹಾಗೂ ಫಾಜಿಲ್ ಮನೆಗೆ ಭೇಟಿ ನೀಡುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಪ್ರವೀಣ್‌ ನೆಟ್ಟಾರು ಮನೆಗೆ ಮಾಜಿ ಸಿಎಂ ಭೇಟಿ: 
ಇನ್ನು ಮಾಜಿ ಸಿಎಂ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿರುವ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದರು. ಮೃತರ ಪತ್ನಿ ಹಾಗೂ ಹೆತ್ತವರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಜತೆಯಲ್ಲಿದ್ದರು. 

ಇದನ್ನೂ ಓದಿ: ಒಂದೆಡೆ ‘ಜನತಾ ಜಲಧಾರೆ’ ಮತ್ತೊಂದೆಡೆ ಕಣ್ಣೀರಧಾರೆ: ಬಿಜೆಪಿ ವ್ಯಂಗ್ಯ

ಈ ಸಂದರ್ಭದಲ್ಲಿ ಮಾತನಾಡಿದ ಅವರು,  ಸರ್ಕಾವು ಕಾಟಾಚಾರಕ್ಕೆ ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್‌ಐಎಗೆ ವಹಿಸಿದೆ. ಈ ಪ್ರಕರಣವನ್ನು ಕಾಟಾಚಾರಕ್ಕೆ ತನಿಖೆ ನಡೆಸಬೇಡಿ. ಇದರಲ್ಲಿ ಸತ್ಯಾಂಶ ಏನು, ಇದರ ಹಿಂದೆ ಎಂತಹದ್ದೇ ದೊಡ್ಡ ಶಕ್ತಿಗಳೇ ಇರಲಿ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.‌

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News