ಚಾಮರಾಜನಗರ: ಕಳೆದ ಒಂದು ವಾರದಲ್ಲಿ ಎರಡನೇ ಬಾರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರ ನೆಲೆಗಳ ಮೇಲೆ ಪೊಲೀಸ್ ಬೇಟೆ ಮುಂದುವರೆದಿದೆ. ಇಂದು ಬೆಳ್ಳಂಬೆಳಗ್ಗೆ ದೇಶದ ಹಲವು ರಾಜ್ಯಗಳಲ್ಲಿ ಪಿಎಫ್ಐ ಕಾರ್ಯಕರ್ತರ ನೆಲೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. 


COMMERCIAL BREAK
SCROLL TO CONTINUE READING

ಕರ್ನಾಟಕದ ಹಲವು ಜಿಲ್ಲೆಗಳಲ್ಲೂ  ಪಿಎಫ್ಐ, ಎಸ್ಡಿಪಿಐ ಸಂಘಟನೆ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿದೆ. ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಪೊಲೀಸರು ಇಬ್ಬರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಚಾಮರಾಜನಗರ ಪೊಲೀಸರು  ಕಾರ್ಯಾಚರಣೆ ನಡೆಸಿ ಇಬ್ಬರು ಮುಖಂಡರನ್ನು ಬಂಧಿಸಿ, ತಹಸಿಲ್ದಾರ್ ಮುಂದೆ ಹಾಜರು ಪಡಿಸಿದ್ದಾರೆ. 


ಇದನ್ನೂ ಓದಿ- ರಾಜ್ಯ ಪೊಲೀಸರ ಕಾರ್ಯಾಚರಣೆ: ಮತ್ತೆ 40 ಕ್ಕೂ ಹೆಚ್ಚು ಪಿಎಫ್ಐ ನಾಯಕರು ವಶಕ್ಕೆ


ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಕಪಿಲ್ ಹಾಗೂ ಕಾರ್ಯದರ್ಶಿ ಶೋಯೆಬ್ ಬಂಧಿತರು. ಬೆಳಗಿನ ಜಾವ ಇವರಿಬ್ಬರ ಮನೆಗಳಿಗೆ ದಾಳಿ ಮಾಡಿ ಇಬ್ಬರನ್ನೂ ಬಂಧಿಸಿ ಚಾಮರಾಜನಗರ ತಹಸಿಲ್ದಾರ್ ಮುಂದೆ ಹಾಜರು ಪಡಿಸಿದ್ದಾರೆ. 


ಇದನ್ನೂ ಓದಿ- ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ನೆಲೆಗಳ ಮೇಲೆ ದಾಳಿ, ಹಲವರು ಅರೆಸ್ಟ್


 ಎನ್ಐಎ ಕೊಟ್ಟ ಮಾಹಿತಿ ಮೇರೆಗೆ ಈ ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡ ಇವರಿಬ್ಬರನ್ನು ಬಂಧಿಸಿದ್ದು ವಿಚಾರಣೆಗೊಳಪಡಿಸುವ ಸಾಧ್ಥತೆ ಇದೆ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.