ಗಣೇಶ ಚತುರ್ಥಿ ಹಿನ್ನೆಲೆ ಚಾಮರಾಜಪೇಟೆ ಈದ್ಗಾ ಮೈದಾನದ ಸುತ್ತ ಖಾಕಿ ಸರ್ಪಗಾವಲು

Bengaluru Idgah ground : ಸುಪ್ರೀಂಕೋರ್ಟ್ ನಲ್ಲಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ನಿರ್ಬಂಧ ಹಿನ್ನೆಲೆ ಚಾಮರಾಜಪೇಟೆ ಈದ್ಗಾ ಮೈದಾನ ಸುತ್ತ ಮುತ್ತ ಖಾಕಿ ಸರ್ಪಗಾವಲು ನಿಯೋಜಿಸಲಾಗಿದೆ.

Written by - Manjunath Hosahalli | Edited by - Chetana Devarmani | Last Updated : Aug 31, 2022, 11:07 AM IST
  • ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ನಿರ್ಬಂಧ ಹಿನ್ನೆಲೆ
  • ಚಾಮರಾಜಪೇಟೆ ಈದ್ಗಾ ಮೈದಾನ ಸುತ್ತ ಮುತ್ತ ಖಾಕಿ ಸರ್ಪಗಾವಲು
  • ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಸೂಚನೆ ಮೇರೆಗೆ ಬಿಗಿ ಬಂದೋಬಸ್ತ್
ಗಣೇಶ ಚತುರ್ಥಿ ಹಿನ್ನೆಲೆ ಚಾಮರಾಜಪೇಟೆ ಈದ್ಗಾ ಮೈದಾನದ ಸುತ್ತ ಖಾಕಿ ಸರ್ಪಗಾವಲು title=
ಈದ್ಗಾ ಮೈದಾನ

ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ನಿರ್ಬಂಧ ಹಿನ್ನೆಲೆ ಚಾಮರಾಜಪೇಟೆ ಈದ್ಗಾ ಮೈದಾನ ಸುತ್ತ ಮುತ್ತ ಖಾಕಿ ಸರ್ಪಗಾವಲು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಸೂಚನೆ ಮೇರೆಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಭದ್ರತೆಗಾಗಿ 10 ಕ್ಕೂ ಹೆಚ್ಚು KSRP ತುಕಡಿ ನಿಯೋಜನೆಗೊಂಡಿದ್ದು, ಪಶ್ಚಿಮ ವಲಯ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಬಂದೋಬಸ್ತ್ ನಿಯೋಜಿಸಲಾಗಿದೆ. ಭದ್ರತೆಗೆ 1240 ಮಂದಿ ಪೊಲೀಸ್ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಇಬ್ಬರು ಡಿಸಿಪಿ, 21 ಜನ ಎಸಿಪಿ, 50 ಮಂದಿ ಇನ್ಸ್ ಪೆಕ್ಟರ್, 130 ಪಿಎಸ್ ಐ, 126 ಎಎಸ್ ಐ, 900 ಹೆಚ್ ಸಿಪಿಸಿ, 120 ಮಂದಿ RAF ಸಿಬ್ಬಂದಿ, KSRP ವಾಹನ ಸೇರಿ 1240 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. 

ಇದನ್ನೂ ಓದಿ: Ganesh Chaturthi: ದೇಶದ ಜನತೆಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಗಣ್ಯರ ಶುಭಾಶಯ

ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ ಅವರಿಗೆ ಭದ್ರತೆ ಉಸ್ತುವಾರಿ ವಹಿಸಲಾಗಿದೆ. ಈಗಾಗಲೇ ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ರೂಟ್ ಮಾರ್ಚ್ ಮಾಡಿದ್ದಾರೆ. ಚಾಮರಾಜಪೇಟೆ ಸುತ್ತಮುತ್ತ ರೂಟ್ ಮಾರ್ಚ್ ನಡೆಸಲಾಗಿದೆ. ‍‍ಚಾಮರಾಜಪೇಟೆ ಮೈದಾನದ ಸುತ್ತಲೂ ಬ್ಯಾರಿಕೇಡ್ ಹಾಕಲಾಗಿದೆ. ಎರಡು ಎಕರೆ ಮೈದಾನದ ನಾಲ್ಕು ದಿಕ್ಕಿನಲ್ಲೂ ಬ್ಯಾರೀಕೇಡ್ ಹಾಕಿ ಕ್ಲೋಸ್ ಮಾಡಲಾಗಿದೆ. ಒಂದು ಕಡೆ ಮಾತ್ರ ಮೈದಾನಕ್ಕೆ ಎಂಟ್ರಿಗೆ ಅವಕಾಶ ನೀಡಲಾಗಿದೆ.

ಬೆಂಗಳೂರು ಈದ್ಗಾ ಮೈದಾನ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದ್ದು, ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆ ನಡೆಸುವಂತಿಲ್ಲ ಎಂದು ಹೇಳಿದೆ. ಆಗಸ್ಟ್ 25 ರಂದು, ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠವು ಭೂಮಿಯನ್ನು ಆಟದ ಮೈದಾನವಾಗಿ ಮತ್ತು ಸರ್ಕಾರ ಅಥವಾ ಬಿಬಿಎಂಪಿಯಿಂದ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವವನ್ನು ಆಚರಿಸಲು ಮಾತ್ರ ಬಳಸಬಹುದು ಎಂದು ಹೇಳಿದೆ. ಮುಸ್ಲಿಂ ಸಮುದಾಯವು ಎರಡೂ ಈದ್‌ಗಳಲ್ಲಿ ಪ್ರಾರ್ಥನೆ ಸಲ್ಲಿಸಬಹುದು ಎಂದು ಅದು ಹೇಳಿದೆ. ಆದಾಗ್ಯೂ, ಒಂದು ದಿನದ ನಂತರ, ವಿಭಾಗೀಯ ಪೀಠವು ಮೇಲ್ಮನವಿಯ ಆದೇಶವನ್ನು ಮಾರ್ಪಡಿಸಿತು ಮತ್ತು ಭೂಮಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸರ್ಕಾರಕ್ಕೆ ಅವಕಾಶ ನೀಡಿತು. ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅವಕಾಶ ಕಲ್ಪಿಸಿಕೊಡುವುದನ್ನು ವಿರೋಧಿಸಿ ರಾಜ್ಯ ವಕ್ಫ್ ಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.  

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣಪತಿ ಪ್ರತಿಷ್ಠಾಪನೆ: ‘ಸುಪ್ರೀಂ’ ಮೆಟ್ಟಿಲೇರಿದ ಮುಸ್ಲಿಂ ಬೋರ್ಡ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News