ದಾವಣಗೆರೆ: ಚನ್ನಗಿರಿ ಪಟ್ಟಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ್ದಾನೆ. ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಆದಿಲ್ (30) ಅವರನ್ನು ಮೇ 24 ರಂದು ಬಂಧಿಸಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ನಿನ್ನೆ ರಾತ್ರಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಸಂಜೆ ಪೊಲೀಸರು ಆದಿಲ್ ನನ್ನು ಠಾಣೆಗೆ ಕರೆತಂದಾಗ ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಕುಸಿದು ಬಿದ್ದನಂತೆ. ಆದಿಲ್‌ನನ್ನು ಕೂಡಲೇ ಒಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಆದಿಲ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.  


ಆದಿಲ್‌ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆತನ ಸಂಬಂಧಿಕರು ಆಕ್ರೋಶಗೊಂಡು ಪೊಲೀಸ್ ವಾಹನಗಳನ್ನು ಹಾನಿಗೊಳಿಸಿದರು. ಪೊಲೀಸ್ ಠಾಣೆಗೆ ಕಲ್ಲು ಎಸೆದು ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. 


ಇದನ್ನೂ ಓದಿ: ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ 


ಚನ್ನಗಿರಿ ಪೊಲೀಸ್ ಠಾಣೆಯ ಮುಂಭಾಗ ನೂರಾರು ಜನರು ಜಮಾಯಿಸಿದ್ದಾರೆ. ಇದು ಲಾಕ್ ಅಪ್ ಡೆತ್ ಎಂದು ಮೃತನ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಆರೋಪಿ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿದ್ದಾರೆ.


ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.


ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಶವಪರೀಕ್ಷೆ ನಡೆಸಲಾಗುವುದು. ಠಾಣೆಗೆ ಕರೆತಂದ ಆರರಿಂದ ಏಳು ನಿಮಿಷಗಳಲ್ಲಿ ಆರೋಪಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಅವರ ಪೋಷಕರಿಗೂ ಇದರ ಅರಿವಿದ್ದು, ಮನವರಿಕೆ ಮಾಡಿಕೊಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದ್ದಾರೆ.


ಇದನ್ನೂ ಓದಿ: ತುಂತುರು ಮಳೆಯ ನಡುವೆ ಸರಣಿ ಅಪಘಾತ.. ಪಲ್ಟಿಯಾಗಿ ಬಿದ್ದ ಬುಲೇರೋ ಗೂಡ್ಸ್ ವಾಹನ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.