ಪೆಡ್ಲರ್ ಗಳ ಮೂಲಕ ಗಾಂಜಾ ತರಿಸಿ ಮಾರಾಟಕ್ಕೆ ಯತ್ನ: ಸಿಎಂ ಮನೆ ಭದ್ರತೆಯಲ್ಲಿದ್ದ ಇಬ್ಬರು ಪೊಲೀಸರ ಬಂಧನ
ಗಾಂಜಾ (Ganja) ಮಾರಾಟ ಯತ್ನ ಆರೋಪದಡಿ ಸಿಎಂ ನಿವಾಸದ (CM Residency) ಭದ್ರತೆಯಲ್ಲಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ.
ಬೆಂಗಳೂರು: ಗಾಂಜಾ (Ganja) ಮಾರಾಟ ಯತ್ನ ಆರೋಪದಡಿ ಸಿಎಂ ನಿವಾಸದ (CM Residency) ಭದ್ರತೆಯಲ್ಲಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ.
ಶಿವಕುಮಾರ್ ಹಾಗು ಸಂತೋಷ್ ಬಂಧಿತ ಪೊಲೀಸರೆಂದು ತಿಳಿದುಬಂದಿದೆ. ಇವರಿಬ್ಬರು ಪೆಡ್ಲರ್ ಗಳ ಮೂಲಕ ಗಾಂಜಾ ತರಿಸಿಕೊಂಡು ಮಾರಾಟಕ್ಕೆ ಮುಂದಾಗಿದ್ದರು ಎನ್ನಲಾಗಿದೆ.
ಸಿಎಂ ಬೊಮ್ಮಾಯಿ (CM Basavaraj Bommai) ಮನೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಕೊರಮಂಗಲ ಪೊಲೀಸ್ ಠಾಣಾ ಸಿಬ್ಬಂದಿಗಳಾಗಿರುವ ಶಿವಕುಮಾರ್, ಸಂತೋಷ್ ಪೆಡ್ಲರ್ (Ganja pedlers) ಬಳಿ ಗಾಂಜಾ ಖರೀದಿಸಿದ್ದರಂತೆ.
ಅಖಿಲ್ ರಾಜ್ ಹಾಗೂ ಅಮ್ಜದ್ ಖಾನ್ ಎಂಬ ಮೋಸ್ಟ್ ವಾಂಟೆಡ್ ಪೆಡ್ಲರ್ ಗಳ ಬಳಿ ಗಾಂಜಾ ಖರೀದಿಸಿದ್ದರು ಆರೋಪಿಸಲಾಗಿದೆ. ಅಲ್ಲದೆ ಗಾಂಜಾ ಪಡೆದ ಬಳಿಕ ಹಣ ಕೊಡದೇ ಹಲ್ಲೆಗೆ ಮುಂದಾಗಿದ್ದರಂತೆ.
ಮುಖ್ಯಮಂತ್ರಿಗಳ ಮನೆ ಇರುವ ಆರ್.ಟಿ.ನಗರದ 80 ಅಡಿ ರಸ್ತೆ ಬಳಿ ಡೀಲ್ ಮಾಡುತ್ತಿದ್ದರು. ಸಿಎಂ ಮನೆ ಬಳಿ ಗಸ್ತಿನಲ್ಲಿದ್ದ ಹೊಯ್ಸಳ ಸಿಬ್ಬಂದಿಗಳಿಗೆ ಅನುಮಾನ ಬಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ವಿಚಾರ ಬೆಳಕಿಗೆ ಬಂದಿದೆ.
ಈ ಸಂಬಂಧ ನಾಲ್ವರನ್ನೂ ಬಂಧಿಸಿರುವ ಆರ್.ಟಿ.ನಗರ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: "ಬಾಬ್ರಿ ಮಸೀದಿ ರೀತಿ ಶ್ರೀರಂಗಪಟ್ಟಣದ ಮಸೀದಿ ಒಡೆಯಬೇಕು" ಎಂದ ಕಾಳಿ ಸ್ವಾಮೀಜಿ ಬಂಧನ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.