ಬೆಂಗಳೂರು: ಹೈಕೋರ್ಟ್‌ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ಇ.ಡಿ ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. 


COMMERCIAL BREAK
SCROLL TO CONTINUE READING

ಕೆ.ಆರ್.ಪೇಟೆ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಇ.ಡಿಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಹೇಳಿದ್ದಾರೆ. 


ರಾಜ್ಯ ಬಿಜೆಪಿ ಭಿನ್ನಮತ: ದೆಹಲಿಯಲ್ಲಿ ರಾಧಾ ಮೋಹನ್ ದಾಸ್ ಹೇಳಿಕೆ


ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. 


ಡಿಸೆಂಬರ್ 24ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ಇ.ಡಿಯವರು ಲೋಕಾಯುಕ್ತಕ್ಕೆ ವರದಿ ನೀಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಮತ್ತೆ ಸಂಕಷ್ಟ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.