ಬೆಳಗಾವಿ: ಧರ್ಮ, ಜಾತಿಗಳ ಮಧ್ಯೆ ರಾಜಕಾರಣಿಗಳು ಜಗಳ ಹಚ್ಚುತ್ತಿದ್ದಾರೆ ಎಂದು ಬಾಳೆಹೊನ್ನೂರ ರಂಭಾಪುರಿ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಆರೋಪಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ರಂಭಾಪುರಿ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲ ರಾಜಕಾರಣಿಗಳಿಂದ 'ಧರ್ಮ ಮತ್ತು ಜಾತಿಗಳ ಮಧ್ಯೆ ವ್ಯಾಪಕ ಸಂಘರ್ಷ ಹುಟ್ಟು ಹಾಕುವ ಕೆಲಸ ನಡೆಯುತ್ತಿದೆ.'ರಾಜಕೀಯ ಧುರೀಣರು ಸರ್ವ ಜನಾಂಗದ ಶ್ರೇಯೋಭಿವೃದ್ಧಿಗೆ ಗಮನ ಹರಿಸುತ್ತಿಲ್ಲ ಶಾಂತಿ ಮತ್ತು ಸೌಹಾರ್ದತೆ ಬೆಳೆಸದೆ ಅಧಿಕಾರದ ಗದ್ದುಗೆಗಾಗಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ : ಕುಡಿದ ಮತ್ತಿನಲ್ಲಿ ಮಾರಾಮಾರಿ! ಮುಂದಾಗಿದ್ದನ್ನು ನೋಡಿದ್ರೆ ಎದ್ದುಬಿದ್ದು ನಗ್ತೀರಾ
ಇನ್ನೂ ಮುಂದುವರೆದು ಮಾತನಾಡಿದ ಅವರು ಜನರ ಭಾವನೆಗಳನ್ನು ಕೆರಳಿಸುವಂತ ಕೆಲಸವನ್ನು ರಾಜಕಾರಣಿಗಳು ಮಾಡುತ್ತಿದ್ದಾರೆ.ಇಂತಹ ಕೃತ್ಯವನ್ನು ಯಾರೂ ಮಾಡಬಾರದೆಂಬ ಸಂದೇಶ ನೀಡಲು ಇಚ್ಚೀಸುತ್ತೇವೆ.ಭಾರತೀಯ ಸಂಸ್ಕೃತಿಯಲ್ಲಿ ಎಲ್ಲರೂ ಒಂದಾಗಿ ಬಾಳಬೇಕು, ಶಾಂತಿ, ನೆಮ್ಮದಿಯಿಂದ ಬದುಕು ಕಟ್ಟಿಕೊಳ್ಳಬೇಕು.ಪ್ರತಿಯೊಬ್ಬರೂ ತಮ್ಮ ಧರ್ಮಗಳಲ್ಲಿ ನಿಷ್ಠೆ ಹೊಂದಬೇಕು.ಜೊತೆಗೆ ಪರಧರ್ಮದ ಬಗ್ಗೆ ಸಂಹಿಷ್ಣತಾ ಮನೋಭಾವ ಬೆಳೆಸಿಕೊಳ್ಳಬೇಕು.ಆಗ ಮಾತ್ರ ಧರ್ಮ, ಜಾತಿಗಳ ಮಧ್ಯೆ ಸಂಘರ್ಷ ತಡೆಯಲು ಸಾಧ್ಯ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.