ಚಿಕ್ಕಮಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ

ಚಿಕ್ಕಮಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Zee Kannada News Desk | Last Updated : Aug 5, 2022, 12:26 AM IST
  • ಈಗ ಗ್ರಾಮಸ್ಥರು ರಸ್ತೆಯಲ್ಲಿ ಕುಳಿತು ಡಾಂಬರನ್ನು ಕಿತ್ತು ಹಾಕುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಚಿಕ್ಕಮಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ  title=
screengrab

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ 'ಕದ್ರಿಮಿದ್ರಿ' ಇಂದ 'ನೆರಡಿ' ವರೆಗಿನ ರಸ್ತೆ ಕಾಮಗಾರಿಗಾಗಿ ಸುಮಾರು ಎರಡೂ ವರ್ಷಗಳ ಕಾಲ ಕೆಲಸ ಮಾಡಿ ಅದಕ್ಕಾಗಿ ಸುಮಾರು 11 ಕೋಟಿ ರೂ.ಖರ್ಚು ಮಾಡಲಾಗಿದೆ.ಆದರೆ ಈಗ ಡಾಂಬರಿಕರಣ ಆಗಿ ಕೇವಲ ಎರಡು ತಿಂಗಳಲ್ಲಿ ರಸ್ತೆಯ ಡಾಂಬರು ಕಿತ್ತು ಬರುತ್ತಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿ ನಿಷೇಧ

ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಗ್ರಾಮಸ್ಥರು ರಾಜ್ಯ ಸರ್ಕಾರ ಹಾಗೂ ಇಂಜನಿಯರ್ ಗಳ ವೈಫಲ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಾ 'ರಾಜ್ಯದಲ್ಲಿ 40% ಕಮಿಷನ್ ಸರಕಾರ ಹಾಗೂ ಇಂಜನಿಯರ್ ಗಳ ವೈಫಲ್ಯ ಹಿಡಿದ ಕನ್ನಡಿ' ಎಂದು ದೂರಿದ್ದಾರೆ.

ಈಗ ಗ್ರಾಮಸ್ಥರು ರಸ್ತೆಯಲ್ಲಿ ಕುಳಿತು ಡಾಂಬರನ್ನು ಕಿತ್ತು ಹಾಕುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News