ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿಯ ಭಾವಚಿತ್ರ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸರ್ಕಾರಿ ಪ್ರಾಯೋಜಿತ ಕ್ರೀಡಾ ಸಮಾರಂಭದ ಪ್ರಮಾಣಪತ್ರದಲ್ಲಿ ಯೇಸುಕ್ರಿಸ್ತನ ಫೋಟೋ : ನೆಟ್ಟಿಗರ ಆಕ್ರೋಶ 

Written by - Yashaswini V | Last Updated : Aug 28, 2024, 03:15 PM IST
  • ಇತ್ತೀಚಿಗೆ ಹನೂರಿನಲ್ಲಿ ನಡೆದ ತಾಲೋಕು ಮಟ್ಟದ ಪ.ಪೂ.ಕಾಲೇಜುಗಳ ಕ್ರೀಡಾಕೂಟ
  • ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಹನೂರಿನ ಕ್ರಿಸ್ತರಾಜ ಪಪೂ ಕಾಲೇಜು ಹಾಗು ಮಾರ್ಟಳ್ಳಿಯ ಸೇಂಟ್ ಮೇರಿಸ್ ಸಂಯುಕ್ತ ಪಪೂ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದಿದ್ದ ಕ್ರೀಡಾಕೂಟ
  • ಪ್ರಶಸ್ತಿ ಪತ್ರದಲ್ಲಿ ಯೇಸು, ಮೇರಿಯ ಭಾವಚಿತ್ರ ಮುದ್ರಣ
ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿಯ ಭಾವಚಿತ್ರ:  ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ  title=

ಚಾಮರಾಜನಗರ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜನೆ ಆಗಿದ್ದ ಕ್ರೀಡಾಕೂಟದದಲ್ಲಿ ದೊಡ್ಡ ಎಡವಟ್ಟು ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ (Social Media) ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. 

ಕೆಲ ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ  ಹನೂರಿನಲ್ಲಿ ನಡೆದಿದ್ದ  ಹನೂರು ತಾಲೂಕು ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದಲ್ಲಿ (PU College Sports) ವಿತರಿಸಿದ್ದ ಪ್ರಮಾಣ ಪತ್ರದಲ್ಲಿ ಯೇಸು ಮತ್ತು ಮೇರಿ ಚಿತ್ರ ಇದ್ದು ನೆಟ್ಟಿಗರು ಕಿಡಿಕಾರಿದ್ದಾರೆ.

ಇದನ್ನೂ ಓದಿ- ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಚಿವ ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐ ವರದಿ ಎತ್ತಿಹಿಡಿದ ಸುಪ್ರೀಂ ಕೋರ್ಟ್

ಹಿಂದೂ ಕಾರ್ಯಕರ್ತ ಗಿರೀಶ್ ಭಾರಧ್ವಜ್ ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ  ಪ್ರಮಾಣ ಪತ್ರವನ್ನು ಅಪ್ ಲೋಡ್ ಮಾಡಿ ಕಿಡಿಕಾರಿದ್ದಾರೆ. 

ಕರ್ನಾಟಕ ಸರ್ಕಾರದ ಪ್ರಾಯೋಜಿತ ಕ್ರೀಡಾ ಸಮಾರಂಭದ ಪ್ರಮಾಣಪತ್ರವು ಯೇಸುಕ್ರಿಸ್ತ ಮತ್ತು ಮೇರಿಯ ಚಿತ್ರಗಳನ್ನು ಹೇಗೆ ತೋರಿಸಬಹುದು? ಸಿದ್ದರಾಮಯ್ಯ ಸರ್ಕಾರಕ್ಕೆ (Siddaramaiah Govt) ಗಣೇಶ ಚತುರ್ಥಿ ಮತ್ತು ಸರಸ್ವತಿ ಪೂಜೆ ಆಚರಿಸಲು ಸಮಸ್ಯೆ ಇದೆ, ಆದರೆ ಯೇಸುಕ್ರಿಸ್ತನ ಫೋಟೋ ಸಂಬಂಧ ಯಾವುದೇ ಸಮಸ್ಯೆ ಕಾಣಿಸುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ- ಉಪನಗರ ರೈಲು ಯೋಜನೆ ವಿಳಂಬ: ಗುತ್ತಿಗೆ ಸಂಸ್ಥೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಎಂ.ಬಿ.ಪಾಟೀಲ

ಇದುವರೆಗೂ ಈ ಟ್ವೀಟ್ ಅನ್ನು 80 ಸಾವಿರಕ್ಕೂ ಅಧಿಕ ಮಂದಿ ನೋಡಿದ್ದು ತಮ್ಮದೇ ಆದ ಪ್ರತಿಕ್ರಿಯೆಗಳನ್ನು ಕೂಡ ನೀಡುತ್ತಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News