ಶತಮಾನ ಪೂರೈಸಿದ ಪೋಸ್ಟಲ್ ಎಂಪ್ಲಾಯಿಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ

ದಿ. ಧಾರವಾಡ ಡಿವಿಜನ್ ಪೋಸ್ಟಲ್ ಎಂಪ್ಲಾಯಿಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯು ಒಂದು ನೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಸವಿನೆನಪಿಗಾಗಿ ವಿಶೇಷ ಅಂಚೆ ಲಕೋಟೆ ಬಿಡುಗಡೆ ಸಮಾರಂಭವು ಸೆಪ್ಡಂಬರ್ 14, 2024 ರಂದು ಧಾರವಾಡದ ಪ್ರಧಾನ ಅಂಚೆ ಕಚೇರಿಯಲ್ಲಿ ಜರುಗಿಸಲಾಯಿತು.

Written by - Manjunath N | Last Updated : Sep 15, 2024, 06:55 PM IST
  • ಮಂಜುನಾಥ ಮಹೇಂದ್ರಕರ ಅವರು ಸೊಸೈಟಿಯು ಸಾಗಿ ಬಂದ ದಾರಿಯ ಬಗ್ಗೆ ಮಾತನಾಡಿದರು.
  • ಡೆಪ್ಯೂಟಿ ಸೂಪರಿಡೆಂಟ್ ವಿಜಯನರಸಿಂಹ ರವರು ವಂದಿಸಿದರು
  • ಎಂ ಎಂ. ದಾರುಗಾರರವರು ನಿರೂಪಿಸಿದರು
 ಶತಮಾನ ಪೂರೈಸಿದ ಪೋಸ್ಟಲ್ ಎಂಪ್ಲಾಯಿಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ title=

ಧಾರವಾಡ : ದಿ. ಧಾರವಾಡ ಡಿವಿಜನ್ ಪೋಸ್ಟಲ್ ಎಂಪ್ಲಾಯಿಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯು ಒಂದು ನೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಸವಿನೆನಪಿಗಾಗಿ ವಿಶೇಷ ಅಂಚೆ ಲಕೋಟೆ ಬಿಡುಗಡೆ ಸಮಾರಂಭವು ಸೆಪ್ಡಂಬರ್ 14, 2024 ರಂದು ಧಾರವಾಡದ ಪ್ರಧಾನ ಅಂಚೆ ಕಚೇರಿಯಲ್ಲಿ ಜರುಗಿಸಲಾಯಿತು.

ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಿದ ಕರ್ನಾಟಕ ವೃತ್ತದ ಚಿಪ್ ಪೋಸ್ಟ್ ಮಾಸ್ಟರ್ ಜನರಲ್ ಡಾ ರಾಜೇಂದ್ರ ಕುಮಾರ್ ಸಮಾರಂಭವನ್ನು ಉದ್ಘಾಟಿಸಿ ಅಂಚೆ ಲಕೋಟೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ನೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಧಾರವಾಡ ಡಿವಿಜನ್ ಪೋಸ್ಟಲ್ ಎಂಪ್ಲಾಯಿಸ್ ಕೋ ಆಪರೇಟಿವ್ ಸೊಸೈಟಿಯ ಸೇವೆ ಶ್ಲಾಘನೀಯ ಎಂದು ಅವರು ಹೇಳಿದರು.

May be an image of ticket stub and text

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉತ್ತರ ಕರ್ನಾಟಕ ವಲಯದ ಅಂಚೆ ಸೇವೆಗಳ ನಿರ್ದೇಶಕರಾದ ವಿ. ತಾರಾರವರು ಶತಮಾನೋತ್ಸವದ ಸಂಭ್ರಮದಲ್ಲಿರುವ ಈ ಸೊಸೈಟಿಯು ತನ್ನ ಸದಸ್ಯರ ಹತ್ತು ಹಲವು ಆರ್ಥಿಕ ಅವಶ್ಯಕತೆಗಳನ್ನು ಪೂರೈಸುವ ಮೂಲಕ ಸಾರ್ಥಕ ಸೇವೆಯನ್ನು ಸಲ್ಲಿಸುತ್ತಿದೆ ಎಂದರು. ಸಭೆಯಲ್ಲಿ ಉಪಸ್ಥಿತರಿದ್ದ ಧಾರವಾಡ ವಿಭಾಗದ ಹಿರಿಯ ಅಂಚೆ ಅಧಿಕ್ಷಕರಾದ ವಾಘ್ಮಾರೆ ವೈಭವ್ ವಿಕಾಸರಾವ್ ಅವರು ಸಹಕಾರಿ ರಂಗದಲ್ಲಿ ಧಾರವಾಡದ ಐತಿಹಾಸಿಕ ಪಾತ್ರದ ಕುರಿತು ಮಾತನಾಡಿದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಜುನಾಥ ಮಹೇಂದ್ರಕರ ಅವರು ಸೊಸೈಟಿಯು ಸಾಗಿ ಬಂದ ದಾರಿಯ ಬಗ್ಗೆ ಮಾತನಾಡಿದರು. ಡೆಪ್ಯೂಟಿ ಸೂಪರಿಡೆಂಟ್ ವಿಜಯನರಸಿಂಹ ರವರು ವಂದಿಸಿದರು, ಎಂ ಎಂ. ದಾರುಗಾರರವರು ನಿರೂಪಿಸಿದರು. 

ಪೋಸ್ಟ್ ಮಾಸ್ಟರ್ ಕುಂಟೋಜಿ ಸಂಘದ ಉಪಾಧ್ಯಕ್ಷ ಶರಣು ಹಂಡಿ ಹಾಗೂ ಸಂಘದ ನಿರ್ದೇಶಕರು, ಸದಸ್ಯರು, ಸಿಬ್ಬಂದಿಗಳು ಹಾಗೂ ನಿವೃತ್ತ ನೌಕರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News