ನಾಳೆಯಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ : ಹೀಗಿರಲಿದೆ ಪ್ರಕ್ರಿಯೆ
Lokasabha Election 2024 :ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 95,128 85 ವರ್ಷ ಮೇಲ್ಪಟ್ಟ ಹಾಗೂ 22,222 ವಿಶೇಷ ಚೇತನರನ್ನು ಗುರುತಿಸಲಾಗಿದೆ.ಈ ಪೈಕಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ ವಿಶೇಷ ಚೇತನರು 201 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.
Lokasabha Election 2024 : ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರವರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳಲ್ಲಿ ಬರುವ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ(AVSC) ಹಾಗೂ ವಿಶೇಷ ಚೇತನರಿಗೆ ಅಂಚೆ ಮತದಾನದ ಮೂಲಕ ಅವಕಾಶ ಕಲ್ಪಿಸಲಾಗಿದೆ.
ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 95,128 85 ವರ್ಷ ಮೇಲ್ಪಟ್ಟ ಹಾಗೂ 22,222 ವಿಶೇಷ ಚೇತನರನ್ನು ಗುರುತಿಸಲಾಗಿದೆ.ಈ ಪೈಕಿ 85 ವರ್ಷ ಮೇಲ್ಪಟ್ಟ 6206 ಮತದಾರರು ಹಾಗೂ ವಿಶೇಷ ಚೇತನರು 201 ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಎಷ್ಟೇ ಖರ್ಚಾದರೂ ಸರಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ
85 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 13 ರಿಂದ ಏಪ್ರಿಲ್ 18 ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲಿಸುತ್ತದೆ. ಬಳಿಕ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ವೀಡಿಯೋಗ್ರಫಿ ಮೂಲಕ ಸೆರೆಯಿಡಿಯಲಾಗುತ್ತದೆ.
ಮತಗಟ್ಟೆ ಸಿಬ್ಬಂದಿಯು ಮತಪತ್ರ ಹಾಗೂ ಮತಪೆಟ್ಟಿಗೆಗಳೊಂದಿಗೆ ಪ್ರತೀ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡುತ್ತಾರೆ. ಮುಂಚಿತವಾಗಿ ಮಾಹಿತಿ ನೀಡಿದ ಬಳಿಕವೇ ಮತಗಟ್ಟೆ ಸಿಬ್ಬಂದಿ ಭೇಟಿ ನೀಡುವರು.ಮೊದಲ ಬಾರಿ ಮತದಾರರು ಮನೆಯಲ್ಲಿರದಿದ್ದರೆ,ಎರಡನೇ ಬಾರಿ ಹೋಗುತ್ತಾರೆ.ಆ ಬಳಿಕ ಮತದಾನಕ್ಕೆ ಅವಕಾಶವಿರುವುದಿಲ್ಲ.
ಇದನ್ನೂ ಓದಿ : ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ
ಮನೆಯಿಂದ ಮತದಾನಕ್ಕೆ 12ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ