ಬೆಂಗಳೂರು : ಮಳೆಯಿಂದ ಸ್ವಲ್ಪ ಬಿಡುವು ಸಿಕ್ಕರೆ ನಗರದ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಕ್ಷಿಪ್ರಗತಿಯಲ್ಲಿ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ಸೋಮವಾರ ಮುಖ್ಯಮಂತ್ರಿಗಳು (Karnataka CM) ಮಳೆಯಿಂದ ಹಾನಿಗೊಳಗಾದ ನಗರದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 


COMMERCIAL BREAK
SCROLL TO CONTINUE READING

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai), "ರಸ್ತೆ ಗುಂಡಿಗಳಿಗೆ ಸಂಬಂಧಿಸಿದ ಬಗ್ಗೆ ಎಲ್ಲಾ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇನೆ, ಅದಕ್ಕಾಗಿ ನಾನು ವಿಶೇಷ ಸಭೆ ಕರೆದು ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ. ನಿರಂತರ ಮಳೆಯಿಂದಾಗಿ ನಮಗೆ ಎಲ್ಲಾ ಕಡೆ ಕೆಲಸವನ್ನು ಕೈಗೆತ್ತಿಕೊಳ್ಳುವುದು ಸಾಧ್ಯವಾಗಲಿಲ್ಲ" ಎಂದು ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ವಾಹನ ಸವಾರರ ಜೀವಕ್ಕೆ ಅಪಾಯ ತಂದಿರುವ ನಗರದ ರಸ್ತೆ ಗುಂಡಿಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡುತ್ತಿದ್ದರು. ಮಳೆಯಿಂದ ಸ್ವಲ್ಪ ಬಿಡುವು ಸಿಕ್ಕ ತಕ್ಷಣ, ಗುಂಡಿಗಳನ್ನು ಮುಚ್ಚುವ( Bengaluru Pathhole)  ಕೆಲಸವನ್ನು ಸಮರೋಪಾದಿಯಲ್ಲಿ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


 


ನೈತಿಕ ಪೊಲೀಸ್‌ಗಿರಿ ಸಮರ್ಥನೆ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ


ಮಹಾನಗರ ಪಾಲಿಕೆ (BBMP) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಹಯೋಗದೊಂದಿಗೆ ನಗರದಲ್ಲಿ ಒಳಚರಂಡಿ ಮತ್ತು ಕೊಳಚೆ ನೀರು ಬೇರ್ಪಡಿಸಲು "ಮಾಸ್ಟರ್ ಪ್ಲಾನ್" ಸಿದ್ಧಪಡಿಸುತ್ತಿರುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ. ಇನ್ನು ನಗರದ ಕೆಲವು ಭಾಗಗಳಲ್ಲಿ ಮಳೆಯಿಂದಾಗಿ (Karnataka Rain) ಒಳಚರಂಡಿ ನೀರು ಮನೆಗಳಿಗೆ ನುಗ್ಗಿರುವ ಬಗ್ಗೆ ಮಾತನಾಡಿದ ಅವರು, ಮುಖ್ಯ ಚರಂಡಿಗಳ ಸಾಮರ್ಥ್ಯ ಮತ್ತು ಎತ್ತರವನ್ನು  ಹೆಚ್ಚಿಸುವ ಅಗತ್ಯವಿದೆ, ಇದರಿಂದ ನೀರನ್ನು ದೊಡ್ಡ ಪ್ರಮಾಣದಲ್ಲಿ ಹೊರಬಿಡಬಹುದು ಎಂದು ಹೇಳಿದ್ದಾರೆ. ಇದೆ ವೇಳೆ , ಕೆರೆಗಳ ಆಳವನ್ನು ಹೆಚ್ಚಿಸುವ ಮೂಲಕ ಅವುಗಳ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದಿದ್ದಾರೆ. 


"ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀದಿರುವುದಾಗಿ ಹೇಳಿದ್ದಾರೆ. ನಗರದಾದ್ಯಂತ ಇರುವ ಮುಖ್ಯ ಚರಂಡಿಗಳ  ಬಾಟಲ್ನೆಕ್ ಅನ್ನು ತೆರವುಗೊಳಿಸಬೇಕು ಮತ್ತು ಸಾಮರ್ಥ್ಯವನ್ನು ಹೆಚ್ಚಿಸುವ ಜೊತೆಗೆ ಲೇಔಟ್‌ಗಳಲ್ಲಿ ಸೂಕ್ತ ನಿರ್ವಹಣೆಯನ್ನು ಮಾಡಬೇಕು" ಎಂದು ಅವರು ಹೇಳಿದ್ದಾರೆ.  ಬಿಬಿಎಂಪಿ ಅಧಿಕಾರಿಗಳು, BWSSB ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಅಧಿಕಾರಿಗಳ ಸಭೆಯನ್ನು ಕರೆಯುವುದಾಗಿ ಸಿಎಂ ತಿಳಿಸಿದ್ದಾರೆ.  


ಇದನ್ನೂ ಓದಿ :  ‘ಬುರುಡೆ ರಾಮಯ್ಯನಿಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ’


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ